ಹೆಚ್ಚುತ್ತಿರುವ ತಾಪಮಾನ: ಜನರಲ್ಲಿ ಆತಂಕ ಮೂಡಿಸಿದ ಸನ್‌ಸ್ಟ್ರೋಕ್​, ಕಾಲರ, ಆರೋಗ್ಯ ಇಲಾಖೆ ಅಲರ್ಟ್‌

ಮಾರ್ಚ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಮೂವರಿಗೆ ಕಾಲರ ಕಾಣಿಸಿಕೊಂಡ ಮಾಹಿತಿ ಲಭ್ಯವಾಗಿದೆ. ರಾಮನಗರದಲ್ಲಿ 1 ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಡಿಹೈಡ್ರೇಷನ್, ಉಸಿರಾಟದ ಸಮಸ್ಯೆ , ಅತಿಸಾರ ಸೇರಿದಂತೆ ನಾನಾ ರೀತಿಯ ಕಾಯಿಲೆಗಳು ಜನರನ್ನು ಬಾಧಿಸುತ್ತಿವೆ.‌

ಹೆಚ್ಚುತ್ತಿರುವ ತಾಪಮಾನ: ಜನರಲ್ಲಿ ಆತಂಕ ಮೂಡಿಸಿದ ಸನ್‌ಸ್ಟ್ರೋಕ್​, ಕಾಲರ, ಆರೋಗ್ಯ ಇಲಾಖೆ ಅಲರ್ಟ್‌
ಕಾಲರಾ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on:Apr 06, 2024 | 8:04 AM

ಬೆಂಗಳೂರು, ಏಪ್ರಿಲ್​ 06: ಈ ಬಾರಿಯ ಬೇಸಿಗೆಯಲ್ಲಿ (Summer) ತಾಪಮಾನ (Temperature) ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದೆ. ಬೆಳಗಿನ ಹೊತ್ತಲ್ಲೇ ಮಟಮಟ ಮಧ್ಯಾಹ್ನದ ಬಿಸಿಲಿನ ಅನುಭವ ಆಗುತ್ತಿದೆ. ಶುಕ್ರವಾರ ಬೆಂಗಳೂರಿನಲ್ಲಿ ಬರೋಬ್ಬರಿ 37 ಡಿಗ್ರಿ ಸೆಲ್ಸಿಯಸ್​ ತಾಮಮಾನ ದಾಖಲಾಗಿತ್ತು. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 37.6 ಡಿಗ್ರಿ ದಾಖಲಾಗಿತ್ತು. ಕಲಬುರಗಿಯಲ್ಲಿ (Kalaburagi) ಬರೋಬ್ಬರಿ 42 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ಬೆಂಗಳೂರಿನಲ್ಲಿ (Bengaluru) ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಪಿಯಸ್‌ ಇದೆ. ಕಳೆದ 15 ವರ್ಷಗಳಲ್ಲೇ ಇದು ಅತ್ಯಂತ ಹೆಚ್ಚಿನ ತಾಪಮಾನವಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಣಬಿಸಿಲಿನ ತಾಪಕ್ಕೆ ಜನ ತತ್ತರಿಸುತ್ತಿದ್ದಾರೆ. ಬಿಸಿಲಿನ ತಾಪದಿಂದ ಏಕಾಏಕಿ ಶಂಕಿತ ಕಾಲರ, ಬಿಸಿಗಾಳಿ ಹೆಚ್ಚಾಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ ನಡೆಸಿ, ಬಿಸಿಲಿನಿಂದಾಗಿ ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದನ್ನು ತಳ್ಳಿಹಾಕಿದ್ದಾರೆ. ಅಲ್ಲದೆ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯಲ್ಲಿ ಕಾಲರ ರೋಗ ಕಂಡು ಬಂದಿಲ್ಲ. ಇನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾ 42 ವಿದ್ಯಾರ್ಥಿನಿಯರಲ್ಲಿ 32 ಜನರಲ್ಲಿ ಕಾಲರ ರೋಗ ಕಾಣಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಶುಕ್ರವಾರ 44.5 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲು, 7 ವರ್ಷದಲ್ಲೇ ಗರಿಷ್ಠ

ಮಾರ್ಚ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಮೂವರಿಗೆ ಕಾಲರ ಕಾಣಿಸಿಕೊಂಡ ಮಾಹಿತಿ ಲಭ್ಯವಾಗಿದೆ. ರಾಮನಗರದಲ್ಲಿ 1 ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳು ವರದಿಯಾಗಿವೆ.

ಬಿಸಿಲು ಹೆಚ್ಚಾಗ್ತಿದ್ದಂತೆ ಸಾಂಕ್ರಾಮಿಕ ರೋಗಗಳು ಜನರನ್ನು ಕಾಡಲು ಶುರು ಮಾಡಿವೆ. ಡಿಹೈಡ್ರೇಷನ್, ಉಸಿರಾಟದ ಸಮಸ್ಯೆ , ಅತಿಸಾರ ಸೇರಿದಂತೆ ನಾನಾ ರೀತಿಯ ಕಾಯಿಲೆಗಳು ಬಾಧಿಸುತ್ತಿವೆ.‌ ಇದರ ನಡುವೆ ಡೆಂಘೀ ಹಾಗೂ ಚಿಕನ್ ಗುನ್ಯಾ ಹೆಚ್ಚಾಗುತ್ತಿವೆ. ಕಳೆದ ಮೂರು ತಿಂಗಳಿನಲ್ಲಿ 1663 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಬೆಂಗಳೂರಿನಲ್ಲೇ 535ಕೇಸ್‌ ದಾಖಲಾಗಿವೆ.

ಒಟ್ಟಿನಲ್ಲಿ ಬಿರುಬಿಸಲ ಹೊಡೆತಕ್ಕೆ ಬೆಂಗಳೂರಿಗರು ಹೈರಾಣಾಗಿದ್ದಾರೆ. ಇದರ ಜೊತೆಗೆ ಕಾಲರ, ಡೆಂಘೀ ಅಂತಾ ರೋಗಗಳು ಹೆಚ್ಚಾಗಿವೆ. ಹೀಗಾಗಿ ಜನ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Sat, 6 April 24

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು