AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ. 18ರ ವರೆಗೆ ಹೊಸ ಮೀಸಲಾತಿ ನಿಯಮದಡಿ ನೇಮಕಾತಿ, ಶೈಕ್ಷಣಿಕ ಪ್ರವೇಶಾತಿ ನೀಡದಂತೆ ಸುಪ್ರೀಂ ಸೂಚನೆ

ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರವರ್ಗ 2ಡಿ ಅಡಿಯಲ್ಲಿ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ಗುರುವಾರ ಸಮ್ಮತಿ ನೀಡಿದೆ.

ಏ. 18ರ ವರೆಗೆ ಹೊಸ ಮೀಸಲಾತಿ ನಿಯಮದಡಿ ನೇಮಕಾತಿ, ಶೈಕ್ಷಣಿಕ ಪ್ರವೇಶಾತಿ ನೀಡದಂತೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್​ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:Apr 13, 2023 | 6:00 PM

Share

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರವರ್ಗ 2ಡಿ ಅಡಿಯಲ್ಲಿ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ನೀಡಿದ್ದ ಶೇ 2 ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (supreme court)​ ಗುರುವಾರ ಸಮ್ಮತಿ ನೀಡಿದೆ. ಏ. 18ರ ವರೆಗೆ ಹೊಸ ಮೀಸಲಾತಿ ನಿಯಮದಡಿ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ ನೀಡದಂತೆ ಸುಪ್ರೀಂ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್​ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್​ ನರಸಿಂಹ, ಜೆ.ಪಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಹಿರಿಯ ವಕೀಲ ಕಪಿಲ್​ ಸಿಬಲ್​ ಅವರ ಸಲ್ಲಿಕೆಗಳನ್ನು ಪ್ರಸ್ತಾಪಿಸಲಾಗಿದೆ. ನಾನು ನಿನ್ನೆ ನ್ಯಾಯಾಲದಲ್ಲಿ ಈ ಕುರಿತು ಪ್ರಸ್ತಾಪಿಸಿದೆ. ಇದು ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವುದಕ್ಕೆ ವಿರುದ್ಧವಾಗಿದೆ ಎಂದು ಕಪಿಲ್​ ಸಿಬಲ್​ ಹೇಳಿದ್ದಾರೆ. ಆದರೆ ದೋಷಗಳನ್ನು ಸರಿಪಡಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಅರ್ಜಿಯಲ್ಲಿದ್ದ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ಸಿಬಲ್​ ತಿಳಿಸಿದರು. ಹಾಗಾದರೆ ನಾವು ಅದನ್ನು ವಿಚಾರಣಗೆ ಪಟ್ಟಿ ಮಾಡುತ್ತೇವೆ ಎಂದು ಪೀಠ ಹೇಳಿದೆ.

ಮುಸ್ಲಿಮರ ಶೇ 4ರ ಮೀಸಲಾತಿ ರದ್ದು; ಅಲ್ಪಸಂಖ್ಯಾತರಿಗೆ ಇಡಬ್ಲ್ಯುಎಸ್​ ಅಡಿ ಮೀಸಲಾತಿ

2ಸಿ, 2ಡಿ ಹೊಸ ಪ್ರವರ್ಗ ಸೃಷ್ಟಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಮುಸ್ಲಿಂ ಸಮುದಾಯಕ್ಕೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿ ರದ್ದು ಮಾಡಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ (EWS) ಅಡಿ ಪರಿಗಣಿಸಲು ನಿರ್ಧರಿಸಿತ್ತು. ಬಳಿಕ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ 2ರ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿತ್ತು.

ಇದನ್ನೂ ಓದಿ: ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ: ಸಿಎಂ ಬೊಮ್ಮಾಯಿ

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.

ಹಿಂದುಳಿದ ವರ್ಗದಲ್ಲಿ ಒಂದೇ ಕೆಟಗರಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. 2ಬಿ ಅಡಿ ಮೀಸಲಾತಿ ನೀಡಿಲ್ಲ. 2C ಅಡಿ ಒಕ್ಕಲಿಗರಿಗೆ ಶೇಕಡಾ 6ರಷ್ಟು ಮೀಸಲಾತಿ ಹಾಗೂ 2D ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗಿದೆ. ಎಸ್​​ಸಿಎಸ್​​ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಅದು ಅನುಷ್ಠಾನ ಹಂತದಲ್ಲಿ ಇದೆ. ನೇಮಕಾತಿ, ಬಡ್ತಿ ಇದೇ ಆಧಾರದಲ್ಲಿ ಆಗುತ್ತಿದೆ. 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ.

ಇದನ್ನೂ ಓದಿ: Cabinet Decision: ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ಸಹ ರಚನೆ ಮಾಡಲಾಗಿತ್ತು. ಎಸ್​​ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರ್ಟಿಕಲ್ 341 (2) ಅನ್ವಯ ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲಾಗಿದೆ. ಎಸ್​ಸಿ ಲೆಫ್ಟ್ 6,‌ ಎಸ್​​ಸಿ ರೈಟ್ 5.5, ಸ್ಪರ್ಶ 4.5 ಹಾಗೂ ಇತರರಿಗೆ 1 ಮೀಸಲಾತಿ ಶಿಫಾರಸ್ಸು ಮಾಡಲು ಸಂಪುಟ ಸಮ್ಮತಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:35 pm, Thu, 13 April 23