AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸೂಚನೆ: ಸುಪ್ರೀಂಕೋರ್ಟ್​ ಮಹತ್ವದ ಆದೇಶ

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್​ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಸಿಬಿಐ ಮತ್ತು ಮೃತರ ಸಹೋದರ ಸಲ್ಲಿಸಿದ ಮೇಲ್ಮನವಿ ಸಂಬಂಧ ತೀರ್ಪು ಪ್ರಕಟವಾಗಿದೆ.

ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸೂಚನೆ: ಸುಪ್ರೀಂಕೋರ್ಟ್​ ಮಹತ್ವದ ಆದೇಶ
ವಿನಯ್ ಕುಲಕರ್ಣಿ
ರಮೇಶ್​ ಎಮ್​.
| Edited By: |

Updated on:Nov 25, 2026 | 11:01 AM

Share

ಮುಖ್ಯಾಂಶಗಳು

  • ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು
  • ಎರಡು ವಾರಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ
  • ಸಿಬಿಐ ಮತ್ತು ಮೃತರ ಸಹೋದರ ಸಲ್ಲಿಸಿದ್ದ ಮೇಲ್ಮನವಿಗೆ ಸುಪ್ರೀಂಕೋರ್ಟ್ ಅಸ್ತು

ನವದೆಹಲಿ, ನವೆಂಬರ್ 25: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲೀಗ  ವಿನಯ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ಸುಪ್ರೀಂ ಕೋರ್ಟ್​ ನೀಡಿದ ಆದೇಶದಲ್ಲೆನಿದೆ?

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ಬಳಿಕ ನ್ಯಾಯಾಲಯವು ಆದೇಶ ನೀಡಿದ್ದು, ಜಾಮೀನು ರದ್ದು ಮಾಡಿದೆ. 2 ವಾರದಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.

2026ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು, ಇದೇ ವರ್ಷದ ಜುಲೈ 31ರಂದು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್  ಗೌಡ ಅವರ ಸಹೋದರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಅಕ್ಟೋಬರ್ 27ರಂದು ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯದ ಅಂತಿಮ ಆದೇಶ ಹೊರಬಿದ್ದಿದ್ದು,

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Wed, 25 November 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More