ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿ ಹೆಸರು ಶಿಫಾರಸು: ಯಾರು ಗೊತ್ತಾ?

Karnataka High Court: Chief Justice: ಸುಪ್ರೀಂಕೋರ್ಟ್ ಕೊಲಿಜಿಯಂ ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ಹೆಸರು ಶಿಫಾರಸು ಮಾಡಿದೆ. ಸಿಜೆ ಪಿ.ಎಸ್.ದಿನೇಶ್ ಕುಮಾರ್ ನಿವೃತ್ತಿ‌ ನಂತರ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿ ಹೆಸರು ಶಿಫಾರಸು: ಯಾರು ಗೊತ್ತಾ?
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Feb 07, 2024 | 8:22 PM

ಬೆಂಗಳೂರು, (ಫೆಬ್ರವರಿ 07): ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಾಮೂರ್ತಿ (Karnataka High Court: Chief Justice) ಪಿಎಸ್ ದಿನೇಶ್ ಕುಮಾರ್ (PS Dinesh Kumar) ಅವರು ಇದೇ ಫೆಬ್ರವರಿ ಫೆ.24ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಕೊಲಿಜಿಯಂ, ಎನ್.ವಿ.ಅಂಜಾರಿಯಾ (NV Anjaria )ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ದಿನೇಶ್ ಕುಮಾರ್ ಅವರು ನಿವೃತ್ತಿ‌ ನಂತರ ನೇಮಿಸುವಂತೆ ಗುಜರಾತ್ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿರುವ ಎನ್​ವಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್​ ಸಿಜೆಯಾಗಿ ನೇಮಿಸುವಂತೆ ಶಿಫಾರಸು ಮಾಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಅವರಿಗೆ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ನೀಡಿದ ನಂತರ ತೆರವಾದ ಕರ್ನಾಟಕ ಹೈಕೋರ್ಟ್​ ಸಿಜೆ ಸ್ಥಾನಕ್ಕೆ ದಿನೇಶ್ ಕುಮಾರ್ ಅವರನ್ನು ಶಿಫಾರಸು ಮಾಡಲಾಗಿತ್ತು. ಅದರಂತೆ ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಿಳಿಸಿದ್ದರು.

ಇದನ್ನೂ ಓದಿ:  Karnataka High Court: ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ಕುಮಾರ್ ನೇಮಕ

ಬಳಿಕ ದಿನೇಶ್ ಕುಮಾರ್ ಅವರು ಫೆಬ್ರವರಿ 04ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ  ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ದಿನೇಶ್ ಕುಮಾರ್ ಅವರು ಫೆ.24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಸದ್ಯ ಗುಜರಾತ್ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿರುವ ಎನ್​ವಿ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಪಿ.ಎಸ್ ದಿನೇಶ್ ಕುಮಾರ್ ಅವರ ಬಗ್ಗೆ

ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 25, 1962 ರಂದು ಜನಿಸಿದ್ದು, ಬೆಂಗಳೂರಿನ ನ್ಯಾಷನಲ್ ಕಾಲೇಜು ಮತ್ತು ಬಿಎಂಎಸ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ್ದಾರೆ. ಇನ್ನು 2015, ಜನವರಿ 2ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. ಬಳಿಕ 2016 ಡಿಸೆಂಬರ್ 30ರಂದು ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ದಿನೇಶ್ ಕುಮಾರ್ ಅವರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ), ಬಿಎಸ್‌ಎನ್‌ಎಲ್, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ), ಯುನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ), ಅಖಿಲ ಭಾರತ ತಾಂತ್ರಿಕ ಶಿಕ್ಷಣ (ಎಐಸಿಟಿಇ), ರಾಷ್ಟ್ರೀಯ ವಕೀಲರ ಹಿರಿಯ ಸ್ಥಾಯಿ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ನಿರ್ದೇಶಕರ ನೇಮಕ, ಐಟಿಡಿಸಿ ಹೋಟೆಲ್‌ಗಳ ಹೂಡಿಕೆ, ಕೇಂದ್ರ ಹಣಕಾಸು ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ