AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅರಮನೆ ಜಮೀನು ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ ಕೋರ್ಟ್

ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ 3,011 ಕೋಟಿ ರೂ. ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಎರಡು ಕಿ.ಮೀ. ರಸ್ತೆ ಜಾಗಕ್ಕೆ 3400 ಕೋಟಿ ಮೌಲ್ಯದ ಪರಿಹಾರ ನೀಡುವುದು ನ್ಯಾಯಬದ್ಧವಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ವಾದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ಗೆಲುವು ಸಿಕ್ಕಿದೆ. ಬೆಂಗಳೂರಿನ ಅರಮನೆ ಜಮೀನಿಗೆ ಟಿಡಿಆರ್​ ನೀಡುವ ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ನಿಂದನೆಯಿಂದ ಪಾರಾಗಿದೆ. ಆದರೆ, ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಸುಪ್ರೀಂ ಕೋರ್ಟ್ ಒಪ್ಪಿಲ್ಲ.

ಬೆಂಗಳೂರಿನ ಅರಮನೆ ಜಮೀನು ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ ಕೋರ್ಟ್
Supreme Court
TV9 Web
| Edited By: |

Updated on: Feb 27, 2025 | 5:08 PM

Share

ಬೆಂಗಳೂರು (ಫೆಬ್ರವರಿ 27): ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್​ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹೇಳಿದೆ.10 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ಗೆ ಟಿಡಿಆರ್ ಪ್ರಮಾಣಪತ್ರವನ್ನು ಸರ್ಕಾರ ನೀಡಬೇಕಾಗಿದೆ. ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿತ್ತು. ಇಷ್ಟು ಮೊತ್ತದ ಪರಿಹಾರ ನೀಡಿದರೆ ಸರ್ಕಾರಕ್ಕೆ ಹೊರೆ ಆಗಲಿದೆ ಎಂಬ ಕಾರಣಕ್ಕೆ ಜ.23ರಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ ರಸ್ತೆ ಅಗಲೀಕರಣ ಪ್ರಸ್ತಾಪವನ್ನೇ ಕೈಬಿಟ್ಟು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.

ಕಳೆದ ವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ನಿರ್ಣಯವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಿ ರಸ್ತೆ ಅಗಲೀಕರಣ ಪ್ರಸ್ತಾವನೆ ಕೈಬಿಟ್ಟಿದ್ದೇವೆ. ಹೀಗಾಗಿ 3400 ಕೋಟಿ ಟಿಡಿಆರ್‌ ಪರಿಹಾರ ನೀಡುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ, ಇದನ್ನು ಪುರಸ್ಕರಿಸದ ಸುಪ್ರೀಂ ಕೋರ್ಟ್‌ 3400 ಕೋಟಿ ಟಿಡಿಆರ್‌ ಪರಿಹಾರ ನೀಡುವಂತೆ ನ್ಯಾಯಾಲಯ ಈಗಾಗಲೇ ಆದೇಶ ನೀಡಿದೆ. ಈ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ಅರಮನೆ ಮೈದಾನ ಬಳಕೆಗೆ ಸರ್ಕಾರದ ಸುಗ್ರೀವಾಜ್ಞೆ ಅಸ್ತ್ರ ಯಶಸ್ವಿ: ರಾಜ್ಯಪಾಲರಿಂದ ಅಂಕಿತ

ಆದರೆ, ಟಿಡಿಆರ್ ನೀಡಿದರೂ ಅದು ಬಳಕೆಯಾದಂತೆ ನೋಡಿಕೊಂಡ ಸರ್ಕಾರದ ಪರ ವಕೀಲರು ರಾಜ ಮನೆತನದವರಿಗೆ ನೀಡಬೇಕಿದ್ದ ಟಿಡಿಆರ್ ನ್ಯಾಯಾಲಯಕ್ಕೆ ಹಸ್ತಾಂತರವಾಗುವಂತೆ ನೋಡಿಕೊಂಡಿದ್ದಾರೆ. ರಾಜ ಮನೆತನದವರಿಗೆ ನೀಡಬೇಕಿದ್ದ 3,400 ಕೋಟಿಯ ಟಿಡಿಆರ್ ನ್ಯಾಯಾಲಯದ ಅಧಿಕಾರದಲ್ಲಿ ಇರಲಿದೆ. ಇದರಿಂದ ಟಿಡಿಆರ್ ಬಳಕೆ ಆಗಬಹುದು ಎನ್ನುವ ಆತಂಕದಿಂದ ಸರ್ಕಾರ ನಿರಾಳವಾಗಿದೆ. ಇತ್ತ ಟಿಡಿಆರ್ ನೀಡಲು ಸೂಚಿಸಿದ್ದ ನ್ಯಾಯಾಲಯಕ್ಕೆ TDR ನೀಡುವ ಮೂಲಕ ನ್ಯಾಯಾಂಗ ನಿಂದನೆಯಿಂದಲೂ ಸಿದ್ದರಾಮಯ್ಯ ಸರ್ಕಾರ ಪಾರಾಗುವ ಮೂಲಕ ತಾತ್ಕಾಲಿಕವಾಗಿ ನಿರಾಳವಾಗಿದೆ. ಬಾಕಿ ಉಳಿದ ಇನ್ನೊಂದು ಟಿಡಿಆರ್ ಜಮೀನು ಮಾಲೀಕರಿಗೆ ನೀಡಲು ಒಪ್ಪಿಗೆ ನೀಡಿದೆ. 49 ಕೋಟಿ ಟಿಡಿಆರ್​ ಅನ್ನು ಜಮೀನು ಮಾಲೀಕರಿಗೆ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಹೀಗಾಗಿ ಟಿಡಿಆರ್ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ ಕಂಡುಕೊಂಡ ಸರ್ಕಾರ ಕೊಂಚ ನಿರಾಳವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ