IMA Scam: ಹೈಕೋರ್ಟ್ ಆದೇಶ ತಡೆಹಿಡಿದ ಸುಪ್ರೀಂ ಕೋರ್ಟ್, ಐಪಿಎಸ್ ಹೇಮಂತ್ ನಿಂಬಾಳ್ಕರ್ ವಿಚಾರಣೆ ಎದುರಿಸುವುದು ಅನಿವಾರ್ಯ

| Updated By: ಸಾಧು ಶ್ರೀನಾಥ್​

Updated on: Aug 28, 2021 | 12:05 PM

ಸುಪ್ರೀಂ ಕೋರ್ಟ್​ನ ಆದೇಶದ ಪ್ರಕಾರ ಫೆಬ್ರವರಿ 1, 2020 ರಂದು ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹಿರಿಯ ಅಧಿಕಾರಿ ನಿಂಬಾಳ್ಕರ್​ ಸದ್ಯಕ್ಕೆ ಕ್ರಿಮಿನಲ್ ಮೊಕದ್ದಮೆ ಎದುರಿಸುವುದು ಅನಿವಾರ್ಯವಾಗಿದೆ.

IMA Scam: ಹೈಕೋರ್ಟ್ ಆದೇಶ ತಡೆಹಿಡಿದ ಸುಪ್ರೀಂ ಕೋರ್ಟ್, ಐಪಿಎಸ್ ಹೇಮಂತ್ ನಿಂಬಾಳ್ಕರ್ ವಿಚಾರಣೆ ಎದುರಿಸುವುದು ಅನಿವಾರ್ಯ
ಐಜಿಪಿ ಹೇಮಂತ್ ನಿಂಬಾಳ್ಕರ್
Follow us on

ನವದೆಹಲಿ/ ಬೆಂಗಳೂರು: ಐಎಂಎ ವಂಚನೆ (IMA Scam) ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಆರ್. ಸುಭಾಷ್ ರೆಡ್ಡಿ ಅವರ ನ್ಯಾಯ ಪೀಠ ಮಾರ್ಚ್ 19 2021 ರಂದು ಜಾರಿಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್​ಶೀಟ್​ನ ರುದ್ದುಪಡಿಸಿ, ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿತ್ತು. ಇದರಿಂದ ಮಾರ್ಚ್ 19 ರಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್​ಗೆ ಬಿಗ್ ರಿಲೀಫ್ ಸಿಕ್ಕಿತ್ತು.

ಸುಪ್ರೀಂ ಕೋರ್ಟ್​ನ ಆದೇಶದ ಪ್ರಕಾರ ಫೆಬ್ರವರಿ 1, 2020 ರಂದು ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹಿರಿಯ ಅಧಿಕಾರಿ ನಿಂಬಾಳ್ಕರ್​ ಸದ್ಯಕ್ಕೆ ಕ್ರಿಮಿನಲ್ ಮೊಕದ್ದಮೆ ಎದುರಿಸುವುದು ಅನಿವಾರ್ಯವಾಗಿದೆ.

ಎರಡು ಬಾರಿ ವರ್ಗಾವಣೆ
ಹೇಮಂತ್ ನಿಂಬಾಳ್ಕರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಜನವರಿ 11ರಂದು ಆದೇಶ ಹೊರಡಿಸಿದೆ. ಡಿ. 31ರಂದು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರವು, ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು.

ನಿರ್ಭಯಾ ನಿಧಿ ಗುತ್ತಿಗೆ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಂಬಾಳ್ಕರ್ ಪಾತ್ರದ ಬಗ್ಗೆ ಅಂದಿನ ಗೃಹ ಕಾರ್ಯದರ್ಶಿ ಡಿ.ರೂಪಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇಬ್ಬರೂ ಐಪಿಎಸ್ ಅಧಿಕಾರಿಗಳ ನಡುವೆ ಹೇಳಿಕೆ-ಪ್ರತಿಹೇಳಿಕೆಗಳು ಕೆಲ ಸಮಯ ಹರಿದಾಡಿದ್ದವು. ನಂತರ ಇಬ್ಬರನ್ನೂ ವರ್ಗಾವಣೆ ಮಾಡಿ ಸರ್ಕಾರ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿತ್ತು.

ರೂಪಾ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಸರ್ಕಾರ ವರ್ಗಾವಣೆ ಮಾಡಿತ್ತು. ತಮ್ಮನ್ನು ವರ್ಗಾವಣೆ ಮಾಡಿರುವುಕ್ಕೆ ರೂಪಾ ಬೇಸರ ವ್ಯಕ್ತಪಡಿಸಿದ್ದರು. ‘ಈ ವರ್ಗಾವಣೆಯು ನನ್ನನ್ನೂ, ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ’ ಎಂದು ಆಕ್ಷೇಪಿಸಿದ್ದರು.

ಆಂತರಿಕ ಭದ್ರತೆ ವಿಭಾಗದ ಐಜಿಪಿಯನ್ನಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದ ಕೇವಲ 11 ದಿನಗಳಲ್ಲಿ ಮತ್ತೊಮ್ಮೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ

Cheteshwar Pujara: 968 ದಿನಗಳ ಬಳಿಕ ಪೂಜಾರ ಬ್ಯಾಟ್​ನಿಂದ- 645 ದಿನಗಳ ಬಳಿಕ ಕೊಹ್ಲಿ ಬ್ಯಾಟ್​ನಿಂದ ಸಿಡಿಯುವುದೇ ಶತಕ?

ಕಾರಲ್ಲಿ ಬಂದು ಲೂಟಿ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಕಳ್​ ಮಂಜ ಅರೆಸ್ಟ್​; 5 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಆಭರಣ ವಶಕ್ಕೆ

(Supreme Court stays the High Court order that CBI FIR file against cancel)