AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವ, ಸಂಸ್ಕೃತ ನಿಂದಿಸಿ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್: ಕ್ರಮಕ್ಕೆ ಆಗ್ರಹಿಸಿದ ಸುರೇಶ್ ಕುಮಾರ್

ಸಾಮಾಜಿಕ ಜಾಲತಾಣಗಳಲ್ಲಿ ಸಂಸ್ಕೃತ ಹಾಗೂ ಹಿಂದುತ್ವದ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ, ಅರಣ್ಯ ಅಧಿಕಾರಿ ಎಂದು ಹೇಳಿಕೊಂಡಿರುವ ಸಂಜೀವ್ ಪೂಜಾರಿ ವಿರುದ್ಧ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಸೇವೆಯಲ್ಲಿದ್ದುಕೊಂಡು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಈ ಅಧಿಕಾರಿಯನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಬೇಕೆಂದು ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಹಿಂದುತ್ವ, ಸಂಸ್ಕೃತ ನಿಂದಿಸಿ ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಪೋಸ್ಟ್: ಕ್ರಮಕ್ಕೆ ಆಗ್ರಹಿಸಿದ ಸುರೇಶ್ ಕುಮಾರ್
ಸುರೇಶ್ ಕುಮಾರ್
ಭಾವನಾ ಹೆಗಡೆ
|

Updated on:Sep 01, 2026 | 11:00 AM

Share

ಮುಖ್ಯಾಂಶಗಳು

  • ಸಂಸ್ಕೃತ, ಹಿಂದುತ್ವ ನಿಂದಿಸಿ ಅರಣ್ಯ ಅಧಿಕಾರಿ ಸಂಜೀವ್ ಪೂಜಾರಿ ವಿವಾದಾತ್ಮಕ ಪೋಸ್ಟ್.
  • ಸರ್ಕಾರಿ ನೌಕರನ ನಡೆಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಕ್ರೋಶ.
  • ಸೇವಾ ನಿಯಮಾವಳಿ ಉಲ್ಲಂಘಿಸಿದ ಅಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸಲು ಕಟ್ಟುನಿಟ್ಟಿನ ಆಗ್ರಹ.

ಬೆಂಗಳೂರು, ಸೆಪ್ಟೆಂಬರ್ 01: ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಕಾಣಿಯೂರು ಉಪ ವಲಯ ಅರಣ್ಯ ಅಧಿಕಾರಿ ಎಂದು ಹೇಳಿಕೊಂಡಿರುವ ಸಂಜೀವ್ ಪೂಜಾರಿ ಹಂಚಿಕೊಳ್ಳುತ್ತಿರುವ ಪೋಸ್ಟ್‌ಗಳು ಇದೀಗ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗೆ ಸಂಸ್ಕೃತ ಭಾಷೆ, ಹಿಂದುತ್ವ ಹಾಗೂ ಸಂಘ ಪರಿವಾರವನ್ನು ಗುರಿಯಾಗಿಸಿಕೊಂಡು ಸಂಜೀವ್ ಪೂಜಾರಿ ಬರೆದಿರುವ ಬರಹಗಳು ತೀವ್ರ ಆಕ್ಷೇಪಕ್ಕೆ ಗುರಿಯಾಗಿದ್ದು, ಸರ್ಕಾರಿ ಅಧಿಕಾರಿಯೊಬ್ಬರ ಈ ನಡವಳಿಕೆಯನ್ನು ಬಿಜೆಪಿ ನಾಯಕರು ಕಟುವಾಗಿ ವಿರೋಧಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದಾರೆ.

ಸಂಜೀವ್ ಪೂಜಾರಿ ಪೋಸ್ಟ್‌ಗಳಲ್ಲೇನಿದೆ?

ಸಂಜೀವ್ ಪೂಜಾರಿ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಬರಹಗಳನ್ನು ಪೋಸ್ಟ್ ಮಾಡಲಾಗಿದೆ. ಆಗಸ್ಟ್ 30ನೇ ತಾರೀಕಿನಂದು “ಸುಳ್ಳನ್ನು ಯಾರಿಗೂ ಅರ್ಥವಾಗದಂತೆ ಕಿವಿಗೆ ಇಂಪಾಗಿ ಕೇಳಿಸುವ ಶ್ಲೋಕ ಮತ್ತು ಮಂತ್ರದ ಭಾಷೆಯೇ ಸಂಸ್ಕೃತ” ಎಂದು ಬರೆದು ಈ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅದಲ್ಲದೆ “ಹಿಂದುತ್ವ ಅನ್ನುವುದು ಮನೆಯಲ್ಲಿ ವಿಷವಿದ್ದಂತೆ” ಹಾಗೂ “ಸಂಘ ಪರಿವಾರಕ್ಕೆ ಸೇರಿದರೆ ಸಂಸಾರ ಹಾಳಾಗುತ್ತದೆ” ಎಂದು ಆಕ್ಷೇಪಾರ್ಹವಾಗಿ ನಿರಂತರವಾಗಿ ಪೋಸ್ಟ್ ಮಾಡಲಾಗುತ್ತಿದೆ. ಇದರ ಜೊತೆಗೆ ಸನಾತನ ಧರ್ಮ, ಮೂರ್ತಿ ಪೂಜೆ, ಜಾತಿ ಪದ್ಧತಿ ಹಾಗೂ ಕರ್ಮ ಸಿದ್ಧಾಂತಗಳ ಕುರಿತು ಪ್ರಚೋದನಾತ್ಮಕ ವಿಚಾರಗಳನ್ನೂ ಈ ಖಾತೆಯ ಮೂಲಕ ಹಂಚಿಕೊಳ್ಳಲಾಗಿದೆ.

ಸುರೇಶ್ ಕುಮಾರ್ ಆಕ್ರೋಶ

ಈ ಸಂಬಂಧ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್, ಸರ್ಕಾರಿ ಅಧಿಕಾರಿಯ ಈ ರೀತಿಯ ನಡವಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರಿ ಸೇವೆಯಲ್ಲಿದ್ದುಕೊಂಡು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತ್ತು ಒಂದು ನಿರ್ದಿಷ್ಟ ಸಿದ್ಧಾಂತ ಹಾಗೂ ಭಾಷೆಯನ್ನು ನಿಂದಿಸುವ ಅಧಿಕಾರ ಯಾರಿಗೂ ಇಲ್ಲ. ಸಂಜೀವ್ ಪೂಜಾರಿ ಎಂಬ ಈ ವ್ಯಕ್ತಿ ನಿಜವಾಗಿಯೂ ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದರೆ, ಸರ್ಕಾರಿ ನೌಕರರ ಸೇವಾ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಇವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Tue, 1 September 26

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ