ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತ ರತ್ನ ಸಿಗಲಿ: ಸುರ್ಜೇವಾಲ ಒತ್ತಾಯ

ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ. ಇದರ ಬೆನ್ನಲೆ ಇದೀಗ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಮನವಿ ಮಾಡಿದ್ದಾರೆ.

ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತ ರತ್ನ ಸಿಗಲಿ: ಸುರ್ಜೇವಾಲ ಒತ್ತಾಯ
ಡಾ.ಶಿವಕುಮಾರ ಸ್ವಾಮೀಜಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Feb 03, 2024 | 7:59 PM

ಬೆಂಗಳೂರು, ಫೆಬ್ರವರಿ 3: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲ (Randeep Surjewala) ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಅನ್ನ, ಅಕ್ಷರ, ಜ್ಞಾನದಂತಹ ತ್ರಿವಿಧ ದಾಸೋಹ ನೀಡಿದ ಮಹಾಪುರುಷ ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತರತ್ನ ಸಿಗಲಿ. ಲಕ್ಷಾಂತರ ಮಕ್ಕಳಿಗೆ ಉಚಿತ ಅನ್ನ, ಶಿಕ್ಷಣ ನೀಡಿದ ಮಹನೀಯರು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ ಎಂದಿದ್ದಾರೆ.

ಶಿವಕುಮಾರ ಶ್ರೀಗಳಿಗೆ ನಿಜಕ್ಕೂ ಮರಣೋತ್ತರ ಭಾರತ ರತ್ನ ಸಿಗಬೇಕು. ಸಿದ್ಧಗಂಗಾ ಶ್ರೀಗಳು ದೇಶಕ್ಕೆ ಮಾದರಿಯಾಗಿದ್ದವರು. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಿ: ಡಿಕೆ ಶಿವಕುಮಾರ್

ಈ ವಿಚಾರವಾಗಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಅಡ್ವಾಣಿಯವರು ದೇಶದಲ್ಲಿ ಹಿರಿಯ ರಾಜಕಾರಣಿ. ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ತಕರಾರು ಇಲ್ಲ. ಆದರೆ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಿ ಎಂದಿದ್ದಾರೆ. ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದರು. ಅವರಿಗೆ ಗೌರವ ಸಲ್ಲಿಸಬೇಕು ಎನ್ನುವುದು ನಮ್ಮ ಒತ್ತಾಯವಿದೆ ಎಂದು ಹೇಳಿದ್ದಾರೆ.

ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಸಿಕ್ಕಿರೋದು ಸಂತೋಷ: ಮಾಜಿ ಸಿಎಂ ಜಗದೀಶ್​ ಶೆಟ್ಟರ್

ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯಿಸಿದ್ದು, ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ಸಿಕ್ಕಿರೋದು ಸಂತೋಷ ತಂದಿದೆ. ಎಲ್​.ಕೆ.ಅಡ್ವಾಣಿಗೆ ಹಿಂದೆಯೇ ಭಾರತ ರತ್ನ ಪ್ರಶಸ್ತಿ ಸಿಗಬೇಕಿತ್ತು. ನಾನು ಎಲ್.ಕೆ.ಅಡ್ವಾಣಿರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಅಡ್ವಾಣಿಗೆ ಕೊಟ್ಟಿದ್ದಕ್ಕೆ ತಕರಾರಿಲ್ಲ; ನಮ್ಮ ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ಕೊಡಿ – ಡಿಕೆ ಶಿವಕುಮಾರ್ ಆಗ್ರಹ

ರಾಮಮಂದಿರದ ಕನಸು ಹೊತ್ತು ರಥಯಾತ್ರೆ ಮಾಡಿದ್ದರು. ಸಮಯ ಪಾಲನೆಯಲ್ಲಿ ಎಲ್​.ಕೆ.ಅಡ್ವಾಣಿ ಎತ್ತಿದ ಕೈ. ಅವರಿಗೆ ಪ್ರಧಾನ ಮಂತ್ರಿ ಆಗುವ ಅರ್ಹತೆ ಇತ್ತು. ಆದರೆ ಅಟಲ್ ಬಿಹಾರಿ ವಾಜಪೇಯಿ ಹೆಸರು ಘೋಷಿಸಿದರು. ಅಡ್ವಾಣಿಗೆ ಭಾರತ ರತ್ನ ನೀಡಿದ್ದಕ್ಕೆ ಮೋದಿಗೂ ಅಭಿನಂದನೆಯನ್ನು ತಿಳಿಸಿದ್ದಾರೆ.

ದೇಶಕ್ಕೆ ಎಲ್​ಕೆ ಅಡ್ವಾಣಿ ಅವರ ಸೇವೆ ಅವಿಸ್ಮರಣೀಯ: ಪಿಹೆಚ್​ ಪೂಜಾರ

ಬಾಗಲಕೋಟೆಯಲ್ಲಿ ಪರಿಷತ್ ಸದಸ್ಯ ಪಿಹೆಚ್​ ಪೂಜಾರ ಹೇಳಿಕೆ ನೀಡಿದ್ದು, ದೇಶಕ್ಕೆ ಎಲ್ ಕೆ ಅಡ್ವಾಣಿ ಅವರ ಸೇವೆ ಅವಿಸ್ಮರಣೀಯ. ಅವರಿಗೆ ಭಾರತ ರತ್ನ ನೀಡಿದ್ದು ಕೇಂದ್ರ ಸರ್ಕಾರ ಇಡೀ ರಾಷ್ಟ್ರಕ್ಕೆ ನೀಡಿದ ಗೌರವವಾಗಿದೆ.

ಇದನ್ನೂ ಓದಿ: ಅಡ್ವಾಣಿಯವರಿಗೆ ಭಾರತ ರತ್ನ ಗೌರವದ ಬಗ್ಗೆ ತಕರಾರಿಲ್ಲ, ಶಿವಕುಮಾರ ಸ್ವಾಮೀಜಿ ಅವರನ್ನೂ ಪರಿಗಣಿಸಬೇಕೆಂದು ಒತ್ತಾಯ: ಡಿಕೆ ಶಿವಕುಮಾರ್

ಅಡ್ವಾಣಿ ಅವರ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯದ ಬಳಿಕ ಅನೇಕ ಹೋರಾಟಗಳನ್ನು ಮಾಡಿದ್ದಾರೆ. ಅಭಿವೃದ್ಧಿಪರ ಚಿಂತನೆ ಮಾಡುವ ನಾಯಕರು. ಗೃಹಮಂತ್ರಿಯಾಗಿ, ಉಪಪ್ರಧಾನಿಯಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ. ಗೃಹಮಂತ್ರಿಯಾಗಿ ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಭಯೋತ್ಪಾದಕ ಚಟುವಟಿಕೆ ನಿಯಂತ್ರಿಸಿದರು. ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ಪ್ರಧಾನಿ ಮೋದಿ ನೇತೃತ್ವದ ಸಂಪುಟಕ್ಕೆ ಅಭಿನಂದನೆಯನ್ನು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ