ಬೆಂಗಳೂರಿನ ಶಾಲೆಗಳ ಶುಲ್ಕದಲ್ಲಿ ಬರೋಬ್ಬರಿ ಹೆಚ್ಚಳ, ಪೋಷಕರು ಕಂಗಾಲು: ಇಲ್ಲಿದೆ ವಿವರ

ಬೆಂಗಳೂರಿನ ಶಾಲೆಗಳ ಶುಲ್ಕದಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಶೇಕಡ 30ರಷ್ಟು ಹೆಚ್ಚಳವಾಗಿರುವುದು ಸಮೀಕ್ಷೆ ಒಂದರಿಂದ ತಿಳಿದುಬಂದಿದೆ. ದೇಶದಾದ್ಯಂತ ಪ್ರಮುಖ ನಗರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನ ಪೋಷಕರು ಶಾಲೆಯ ಫೀಸ್ ಬರೋಬ್ಬರಿ ಹೆಚ್ಚಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಶುಲ್ಕ ಹೆಚ್ಚಳ ಕುರಿತ ಸಮೀಕ್ಷಾ ವರದಿಯ ವಿವರ ಇಲ್ಲಿದೆ.

ಬೆಂಗಳೂರಿನ ಶಾಲೆಗಳ ಶುಲ್ಕದಲ್ಲಿ ಬರೋಬ್ಬರಿ ಹೆಚ್ಚಳ, ಪೋಷಕರು ಕಂಗಾಲು: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 23, 2024 | 1:25 PM

ಬೆಂಗಳೂರು, ಮಾರ್ಚ್ 23: ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ (Bengaluru) ಶಾಲೆಗಳ ಶುಲ್ಕ (School Fee) ಶೇ 30ಕ್ಕಿಂತಲೂ ಹೆಚ್ಚಾಗಿದೆ ಎಂಬುದು ಸಮೀಕ್ಷಾ ವರದಿಯೊಂದರಿಂದ ತಿಳಿದುಬಂದಿದೆ. ಬೆಂಗಳೂರಿನಲ್ಲಿ ಸಮೀಕ್ಷೆಗೆ ಒಳಪಟ್ಟವರ ಪೈಕಿ ಶೇ 58ರಷ್ಟು ಪೋಷಕರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದ ಮೊದಲ ಹಾಗೂ ಎರಡನೇ ಹಂತದ ನಗರಗಳ ಒಟ್ಟು 312 ಜಿಲ್ಲೆಗಳಲ್ಲಿ 27,000 ಕ್ಕೂ ಹೆಚ್ಚು ಪೋಷಕರ ಪ್ರತಿಕ್ರಿಯೆಗಳನ್ನು ಪಡೆದು ‘ಲೋಕಲ್ ಸರ್ಕಲ್ಸ್’ ರಾಷ್ಟ್ರವ್ಯಾಪಿ ನಡೆಸಿದ ಸಮೀಕ್ಷೆ ಇದಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಶಾಲೆಗಳ ವಾರ್ಷಿಕ ಶುಲ್ಕವು 1 ಲಕ್ಷ ರೂಪಾಯಿಯಿಂದ 4 ಲಕ್ಷ ರೂಪಾಯಿವರೆಗೆ ಇರುತ್ತದೆ ಎಂಬುದನ್ನು ಈ ಸಮೀಕ್ಷೆ ಬಹಿರಂಗಪಡಿಸಿದೆ.

ಬೆಂಗಳೂರಿನಲ್ಲಿ ಸಮೀಕ್ಷೆ ನಡೆಸಿದ 1,619 ಪೋಷಕರಲ್ಲಿ ಶೇಕಡಾ 10 ರಷ್ಟು ಮಂದಿ ಶಾಲಾ ಶುಲ್ಕಗಳು ಕಳೆದ ಎರಡು ವರ್ಷಗಳಲ್ಲಿ ಶೇ 50 ರಷ್ಟು ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಆದರೆ ಶೇ 48 ರಷ್ಟು ಮಂದಿ ಪೋಷಕರು ಶುಲ್ಕಗಳು ಶೇ 30 ರಿಂದ 50 ರಷ್ಟು ಏರಿಕೆಯಾಗಿದೆ ಎಂದು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಶೇ 72 ರಷ್ಟು ಮಂದಿ ಅತಿಯಾದ ಶುಲ್ಕ ಹೆಚ್ಚಳವನ್ನು ತಡೆಯುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ನಾವು ಸಾಮಾನ್ಯವಾಗಿ ಮಗನ ಶಾಲಾ ಶುಲ್ಕದಲ್ಲಿ ಶೇ 15 ರಷ್ಟು ಹೆಚ್ಚಳ ಗಮನಿಸಿದ್ದೇವೆ. ಅದು ಸುಮಾರು 3 ಲಕ್ಷ ರೂ. ಆಗಿದೆ ಎಂದು ಬೆಂಗಳೂರಿನ ಸುಬ್ರಹ್ಮಣ್ಯಪುರದ ನಿವಾಸಿಯೊಬ್ಬರು ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಈ ಮಧ್ಯೆ, ಅನಿಯಂತ್ರಿತ ಶುಲ್ಕ ಹೆಚ್ಚಳವನ್ನು ಕಾನೂನುಬಾಹಿರ ಎಂದು ಕರ್ನಾಟಕ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳ ಪೋಷಕರ ಸಂಘದ ಸಮನ್ವಯ ಸಮಿತಿ ಅಧ್ಯಕ್ಷ ಬಿಎನ್ ಯೋಗಾನಂದ ಹೇಳಿದ್ದಾರೆ. ಖಾಸಗಿ ಶಾಲೆಗಳು ಶುಲ್ಕವನ್ನು ಸಾರ್ವಜನಿಕ ಪೋರ್ಟಲ್‌ನಲ್ಲಿ ಅಥವಾ ಅವರ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಆದರೆ, ಹೆಚ್ಚಿನ ಶಾಲೆಗಳು ಅದನ್ನು ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 5, 8, 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮತ್ತೊಂದೆಡೆ, ಖಾಸಗಿ ಶಾಲೆಗಳು ತಮ್ಮ ಶುಲ್ಕವನ್ನು ಹೆಚ್ಚಿಸಲು ಸ್ವಾತಂತ್ರ್ಯವನ್ನು ಹೊಂದಿವೆ ಮತ್ತು ಸರ್ಕಾರವು ಮಧ್ಯಪ್ರವೇಶಿಸಿ ಅಸಮಂಜಸ ಶುಲ್ಕ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕರ್ನಾಟಕದ ಖಾಸಗಿ ಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ನ ಡಿ ಶಶಿ ಕುಮಾರ್ ಪ್ರತಿಪಾದಿಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ