AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ: ಹೆಚ್ಚಿದ ಆತಂಕ

ಮಂಕಿಪಾಕ್ಸ್ ಮಹಾಮಾರಿ ಬೆಂಗಳೂರಿನಲ್ಲೂ ಪತ್ತೆಯಾಗಿರುವ ಆತಂಕ ಇದೀಗ ಸೃಷ್ಟಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದ್ದು, ಅಧಿಕೃತವಾಗಿಲ್ಲ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ ವ್ಯಕ್ತಿಗೆ ಸೋಂಕು ತಗುಲಿರುವ ಶಂಕೆ ಇದೆ. ಸದ್ಯ ಅದು ಮಂಕಿಪಾಕ್ಸ್ ಹೌದೇ ಎಂಬುದನ್ನು ದೃಢಪಡಿಸುವುದಕ್ಕಾಗಿ ಪರೀಕ್ಷೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಪತ್ತೆ: ಹೆಚ್ಚಿದ ಆತಂಕ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jan 23, 2025 | 9:18 AM

Share

ಬೆಂಗಳೂರು, ಜನವರಿ 23: ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಬುಧವಾರ ತಡರಾತ್ರಿ ವರದಿಯಾಗಿದೆ. ಒಂದು ವೇಳೆ ಇದು ದೃಢಪಟ್ಟಲ್ಲಿ 2025ರಲ್ಲಿ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿರಲಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕ ಸೃಷ್ಟಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್​ ಅನ್ನು 2024 ರ ಆಗಸ್ಟ್​​ನಲ್ಲಿ ‘ಅಂತರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿತ್ತು.

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು 2024 ರ ಸೆಪ್ಟೆಂಬರ್​​​ನಲ್ಲಿ ವರದಿಯಾಗಿದೆ. ಕಳೆದ ತಿಂಗಳು, ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು.

ಮಂಕಿಪಾಕ್ಸ್ ಎಂದರೇನು?

ಆರ್ಥೋಪಾಕ್ಸ್ ವೈರಸ್ ಕುಲದ ಮಂಕಿಪಾಕ್ಸ್ ವೈರಸ್‌ನಿಂದ ಉಂಟಾಗುವ ವೈರಲ್ ಸೋಂಕೇ ಮಂಕಿಪಾಕ್ಸ್. ಇದನ್ನು ಈಗ ಎಂಪಾಕ್ಸ್ ಎಂದು ಕರೆಯಲಾಗುತ್ತದೆ. ಸೋಂಕಿತ ರೋಗಿಯ ಲಾಲಾರಸ, ಬೆವರು ಮತ್ತು ಸೋಂಕಿತ ವಸ್ತುಗಳ ಮೂಲಕ ವೈರಸ್ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ.

ಇಲ್ಲಿಯವರೆಗೆ ಈ ರೋಗಕ್ಕೆ ಯಾವುದೇ ಲಸಿಕೆ ಅಥವಾ ಶಿಫಾರಸು ಮಾಡಿದ ಔಷಧಿ ಇಲ್ಲ. ಊದಿಕೊಂಡ ದುಗ್ಧರಸ ಗ್ರಂಥಿಗಳು, ಜ್ವರ, ಚಳಿಯ ಅನುಭವ, ಸ್ನಾಯು ನೋವು, ತಲೆನೋವು, ಸುಸ್ತು ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ರೋಗಲಕ್ಷಣಗಳ ಆಧಾರದ ಮೇಲೆ ರೋಗಿಗೆ ಚಿಕಿತ್ಸೆ ನೀಡಲಾಗುತ್ತದೆ.

ಇದನ್ನೂ ಓದಿ: ಮಂಕಿಪಾಕ್ಸ್ ವೈರಸ್​​ನ ರೋಗಲಕ್ಷಣಗಳ ಬಗ್ಗೆ ಇಲ್ಲಿದೆ ಮಾಹಿತಿ

ಮಂಕಿಪಾಕ್ಸ್ ವೈರಸ್ ರೋಗಿಯ ಚರ್ಮ ಮತ್ತು ಉಸಿರಾಟ ನಾಳದ ಮೇಲೆ ಪರಿಣಾಮ ಬೀರುತ್ತದೆ. ಕೆಲವು ರೋಗಿಗಳಲ್ಲಿ ಈ ವೈರಸ್ ನರಮಂಡಲದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದು ನರಮಂಡಲ ಮತ್ತು ಮೆದುಳಿನ ಜೀವಕೋಶಗಳಿಗೆ ಹಾನಿಯನ್ನು ಉಂಟು ಮಾಡುತ್ತದೆ ಎಂದು ತಜ್ಞ ವೈದ್ಯರು ಈಗಾಗಲೇ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 am, Thu, 23 January 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು