ಐಸಿಸ್ ಉಗ್ರರೊಂದಿಗೆ ಸಂಬಂಧ ಹೊಂದಿದ್ದ ಆರೋಪ: ಶಂಕಿತನ ಬಂಧಿಸಿದ ಎನ್​ಐಎ

2020ರ ಏಪ್ರಿಲ್​ನಲ್ಲಿ ಈತನ ಇಬ್ಬರು ಸಹಚರರಾದ ಅಹ್ಮದ್​​ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸಿರ್​ನನ್ನು ಬಂಧಿಸಲಾಗಿತ್ತು

ಐಸಿಸ್ ಉಗ್ರರೊಂದಿಗೆ ಸಂಬಂಧ ಹೊಂದಿದ್ದ ಆರೋಪ: ಶಂಕಿತನ ಬಂಧಿಸಿದ ಎನ್​ಐಎ
ರಾಷ್ಟ್ರೀಯ ತನಿಖಾ ದಳ (ಎನ್​ಐಎ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 24, 2021 | 9:26 PM

ಬೆಂಗಳೂರು: ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (National Investigation Agency – NIA) ಬಂಧಿಸಿದೆ. ಬೆಂಗಳೂರು ಮೂಲದ ಮೊಹಮದ್ ತಾಕಿರ್ ಬಂಧಿತ. ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ಐಸಿಸ್, ಐಎಸ್​ಐಎಲ್, ಡಾಯಿಶ್​ ಜತೆ‌ ಸಂಪರ್ಕ ಹೊಂದಿದ್ದ ಆರೋಪ ಇವರ ಮೇಲಿದೆ.

2020ರ ಏಪ್ರಿಲ್​ನಲ್ಲಿ ಈತನ ಇಬ್ಬರು ಸಹಚರರಾದ ಅಹ್ಮದ್​​ ಅಬ್ದುಲ್ ಖಾದರ್ ಮತ್ತು ಇರ್ಫಾನ್ ನಾಸಿರ್​ನನ್ನು ಬಂಧಿಸಲಾಗಿತ್ತು. ಇಬ್ಬರ ವಿರುದ್ಧವೂ ಎನ್​ಐಎ ಆರೋಪಪಟ್ಟಿ ಸಲ್ಲಿಸಿತ್ತು. ತನಿಖೆ ವೇಳೆ ಮೊಹಮದ್ ತಾಕಿರ್​ಗೆ ಉಗ್ರರೊಂದಿಗೆ ಸಂಪರ್ಕ ಇರುವ ವಿಚಾರ ಒತ್ತೆಯಾಗಿತ್ತು. ನಿಷೇಧಿತ ಸಂಘಟನೆಗಳಿಗೆ ಫಂಡಿಂಗ್ ಮಾಡಿಸುತ್ತಿದ್ದ ತಾಕಿರ್, ಯುವಕರನ್ನು ಪ್ರೇರೇಪಿಸಿ ಸಿರಿಯಾಗೆ ಕಳುಹಿಸುತ್ತಿದ್ದ ಎನ್ನಲಾಗಿದೆ. 2013ರಲ್ಲಿ ತನ್ನ ಸಹಚರರೊಂದಿಗೆ ಸಿರಿಯಾಗೆ ಭೇಟಿ ನೀಡಿದ್ದ ಎಂದು ಎನ್​ಐಎ ಹೇಳಿದೆ.

ರಾಯಚೂರು: ಮಹಿಳೆ ಸಾವು, ಸಂಬಂಧಿಕರ ಪ್ರತಿಭಟನೆ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆಂದು ಆರೋಪಿಸಿ ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿಪುಡಿ ಮಾಡಿ ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಹೊಸೂರು ನಿವಾಸಿ ದೀಪಾ ಭಾನುವಾರ ಸುರಕ್ಷಾ ಆಸ್ಪತ್ರೆಗೆ ಬಂದಿದ್ದರು. ಆಕೆಯ ಪರಿಸ್ಥಿತಿ ಪರಿಶೀಲಿಸಿದ್ದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್​ ಆಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದ್ದರು.

ಮಾರ್ಗಮಧ್ಯೆಯೇ ಆ್ಯಂಬುಲೆನ್ಸ್​​ನಲ್ಲಿ ದೀಪಾ ಮೃತಪಟ್ಟಿದ್ದರು. ಆ್ಯಂಬುಲೆನ್ಸ್​ನಲ್ಲಿ ಆಮ್ಲಜನಕ ವ್ಯವಸ್ಥೆ ಇಲ್ಲದಿದ್ದುದೇ ರೋಗಿ ಸಾವನ್ನಪ್ಪಲು ಕಾರಣ ಎಂದು ಮೃತರ ಸಂಬಂಧಿಕರು ದೂರಿದ್ದಾರೆ. ಸ್ಥಳಕ್ಕೆ ರಾಯಚೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ವಿಜಯಪುರ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಅಲಮೇಲ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ರವಿ ನಿಂಬರಗಿ (32) ಕೊಲೆಯಾದ ಯುವಕ. ಯುವತಿಯ ಇಬ್ಬರು ಪೋಷಕರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ; ತಲೆಮರೆಸಿಕೊಂಡಿರುವ ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ ಇದನ್ನೂ ಓದಿ: ಮನ್​ಸುಖ್ ಹಿರೇನ್ ಪ್ರಕರಣವನ್ನು ರಾಷ್ಟ್ರಿಯ ತನಿಖಾ ದಳಕ್ಕೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

Published On - 9:22 pm, Sun, 24 October 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?