ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ

ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನಲ್ಲಿ ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿಸಿ ಮಹಿಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹ ಬೋರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು; ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ
ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಜರೀನಾ
Follow us
Shivaprasad
| Updated By: ಆಯೇಷಾ ಬಾನು

Updated on: Mar 14, 2024 | 7:00 AM

ಬೆಂಗಳೂರು, ಮಾರ್ಚ್​.14: ಉಜ್ಬೇಕಿಸ್ತಾನ ಮೂಲದ ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ (Death) ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜರೀನಾ ಮೃತ ಮಹಿಳೆ. ನಾಲ್ಕು ದಿನದ ಹಿಂದೆ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಸೆಕೆಂಡ್ ಪ್ಲೋರ್​ನ ಕೊಠಡಿಯೊಂದರಲ್ಲಿ ಮೃತಪಟ್ಟಿದ್ದಾರೆ. ಮೃತ ಜರೀನಾ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಆಗಮಿಸಿದ್ದರು. ನಿನ್ನೆ ಸಂಜೆ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದ್ರು ಮಹಿಳೆ ಬಂದಿರಲಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿ ಮಾಸ್ಟರ್ ಕೀ ಮೂಲಕ ಬಾಗಿಲು ತೆಗೆದಾಗ ಮಹಿಳೆ ಶವಪತ್ತೆಯಾಗಿದೆ.

ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್​ಎಸ್​ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಎಆರ್​ಡಿಸಿಪಿ ಅರುಣಾಂಶು, ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆರೋಪಿ ಉಸಿರುಗಟ್ಟಿಸಿ ಮಹಿಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹೋಟೆಲ್ ಸಿಸಿಟಿವಿ ಹಾಗೂ ಲೆಡ್ಜರ್ ಬುಕ್ ಪರಿಶೀಲಿಸಲಾಗುತ್ತಿದೆ. ಯಾರೆಲ್ಲ ಹೋಟೆಲ್​ಗೆ ಬಂದು ಹೋಗಿದ್ದಾರೆ ಎಂಬುದರ ಪರಿಶೀಲನೆ ನಡೆಯುತ್ತಿದೆ. ಸದ್ಯ ಸ್ಥಳದಲ್ಲಿ ಎಫ್​ಎಸ್​ಎಲ್ ಪರಿಶೀಲನೆ ಮುಕ್ತಾಯವಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಬೋರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕೋಲಾರ: ಭಕ್ತರು ನೀಡುವ ಕಾಣಿಕೆ ಮೂಲಕ ಶಾಲೆ ನಿರ್ಮಿಸಿದ ದೇವಾಲಯದ ಟ್ರಸ್ಟ್; ಇಲ್ಲಿದೆ ವಿವರ

ಠಾಣೆ ಬಳಿಯೇ ವಕೀಲನಿಗೆ ಚಾಕು ಇರಿತ

ಪೊಲೀಸ್ ಠಾಣೆ ಸಮೀಪವೇ ವಕೀಲನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಠಾಣೆ ಬಳಿ ನಡೆದಿದೆ. ವಕೀಲ ಮಂಜುನಾಥ್ ಬೆನ್ನು, ಕೈಗೆ ಚಾಕು ಇರಿಯಲಾಗಿದೆ. ನೆರವಿಗೆ ಬಂದ ಆಟೊ ಚಾಲಕನ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಸ್ಥಳಿಯರು ಆರೋಪಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬೈಕ್-ಕಾರು ಡಿಕ್ಕಿ ಸವಾರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಉತ್ತರಪ್ರದೇಶ ಮೂಲದ 27ವರ್ಷದ ಕೃಷ್ಣದಾಸ್ ಮೃತ ದುರ್ದೈವಿ. ಅಪಘಾತದ ಸ್ಥಳದಲ್ಲೇ ಕಾರು ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೈಸ್ಪೀಡ್ ಕ್ರೇಜ್​ಗೆ ಓರ್ವ ಬಲಿ ರಾಮನಗರ

ರಾಮನಗರ ತಾಲೂಕಿನ ಮಂಚನಬೆಲೆ ರಸ್ತೆಯ ಕಟ್ಟಮಾನದೊಡ್ಡಿಯಲ್ಲಿ, ಯುವಕರು ಹೈಸ್ಪೀಟ್​ನಲ್ಲಿ ತ್ರಿಬಲ್ ರೈಡಿಂಗ್ ಮಾಡಿ ಅಪಘಾತಕ್ಕೀಡಾಗಿದ್ದಾರೆ. ಒಬ್ಬ ಯುವಕ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಾಮನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ