ಮತಾಂತರ ಕಾಯ್ದೆ ಜಾರಿ ವಿಚಾರ ಚರ್ಚಿಸಲು ಸಿಎಂ ಬೊಮ್ಮಾಯಿ ಭೇಟಿಗೆ ಆಗಮಿಸಿದ ಶ್ರೀಗಳ ನಿಯೋಗ
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಸ್ವಾಮೀಜಿಗಳು ಹಾಗೂ ಪ್ರಮೋದ್ ಮುತಾಲಿಕ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಮಾಡದಿದ್ರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ಬಗ್ಗೆ ಎಚ್ಚರಿಕೆ ಕೊಡಲಾಗಿದೆ.
ಬೆಂಗಳೂರು: ಮತಾಂತರ ಕಾಯ್ದೆ ಜಾರಿ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಶ್ರೀಗಳ ನಿಯೋಗ ಮತ್ತು ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಸ್ವಾಮೀಜಿಗಳು ಹಾಗೂ ಪ್ರಮೋದ್ ಮುತಾಲಿಕ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಜಾರಿಗೆ ತರುವಂತೆ ಸಿಎಂಗೆ ಮಾದಾರ ಚನ್ನಯ್ಯ, ಸೇವಾಲಾಲ್ ಸ್ವಾಮೀಜಿ, ಸಿದ್ದಲಿಂಗಶ್ರೀ ಹಾಗೂ ಸುಮಾರು 50ಕ್ಕೂ ಹೆಚ್ಚು ಸ್ವಾಮೀಜಿಗಳ ನಿಯೋಗ ಮನವಿ ಮಾಡಿದೆ. ಕಾಯ್ದೆ ಮಾಡದಿದ್ರೆ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ಬಗ್ಗೆ ಎಚ್ಚರಿಕೆ ಕೊಡಲಾಗಿದೆ.
ಇದೇ ವೇಳೆ, ಬಿಟ್ ಕಾಯಿನ್ ವಿಚಾರದ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಬೆಂಗಳೂರಿನಲ್ಲಿ ಸ್ವಾಮೀಜಿಗಳ ನಿಯೋಗ ಒತ್ತಾಯ ಮಾಡಿದೆ. ಪ್ರಕರಣದಲ್ಲಿ ಯಾರೇ ಇದ್ದರೂ ಬಹಿರಂಗ ಪಡಿಸಬೇಕು. ಬಿಟ್ ಕಾಯಿನ್ ವಿಚಾರದಲ್ಲಿ ಪರಸ್ಪರ ದೂಷಣೆ ನಡೀತಿದೆ ವಿನಃ ಸತ್ಯ ಹೊರ ಬರ್ತಿಲ್ಲ. ತನಿಖೆ ಮಾಡಬೇಕು, ಮುಚ್ಚಿಹಾಕುವ ಕೆಲಸ ಆಗಬಾರದು ಎಂದು ಅವರು ಹೇಳಿದ್ದಾರೆ.
ಮತಾಂತರ ದೇಶಾದ್ಯಂತ ನಡೆಯುತ್ತಿದೆ. ಇದು ಬ್ರಿಟೀಷರಿಂದ ಪ್ರಾರಂಭವಾಗಿದೆ. ನಿಷೇಧ ಕಾಯ್ದೆ ಮಾಡ್ತಾರೆ ಅಂತ ಗೊತ್ತಾಗ್ತಿದ್ದಂತೆ ಪಾದ್ರಿಗಳು ಸಿಎಂ ಭೇಟಿಯಾಗಿದ್ದಾರೆ. ಇದು ಸರಿಯಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಹಾಗಾಗಿ ಸಿಎಂ ಅವರಿಗೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಅಂತ ಆಗ್ರಹ ಮಾಡುತ್ತೇವೆ. ಬಿಟ್ ಕಾಯಿನ್ ವಿಚಾರವಾಗಿ ಕೂಡ ಸಾಮಾಜಿಕ ಕಳಕಳಿಯಿಂದ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಈಗ ಕಲಬೆರಕೆ ಪಕ್ಷ; ಒರಿಜಿನಲ್ ಬಿಜೆಪಿ ಆಗಿ ಉಳಿದಿಲ್ಲ: ಪ್ರಮೋದ್ ಮುತಾಲಿಕ್
ಇದನ್ನೂ ಓದಿ: ನೀವು ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ, ಎರಡೆರಡು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ: ಆರ್‌ಎಸ್‌ಎಸ್