Bus Ticket Rates: ಪ್ರಯಾಣಿಕರೆ ಇತ್ತ ಗಮನಿಸಿ: ಕ್ರಿಸ್​ಮಸ್​ ಹಬ್ಬ ಹಿನ್ನೆಲೆ ವಿಮಾನ ಪ್ರಯಾಣದಷ್ಟೇ ದುಬಾರಿಯಾದ ಖಾಸಗಿ ಬಸ್ ದರ

ಕ್ರಿಸ್​ಮಸ್ ಹಬ್ಭದಂದು ಖಾಸಗಿ ಬಸ್​​ಗಳು ಪ್ರಯಾಣ ದರವನ್ನು ಏಕಾಏಕಿ ಏರಿಸಿವೆ. ಇದು ಸಾಮಾನ್ಯ ದರಕ್ಕಿಂತ ಕೊಂಚ ಹೆಚ್ಚಾಗಿದೆ. ಇದರಿಂದ ಟಿಕೆಟ್ ದರ ನೋಡಿ ಪ್ರಯಾಣಿಕರು ಬೆರಗಾಗುತ್ತಿದ್ದಾರೆ.

Bus Ticket Rates: ಪ್ರಯಾಣಿಕರೆ ಇತ್ತ ಗಮನಿಸಿ: ಕ್ರಿಸ್​ಮಸ್​ ಹಬ್ಬ ಹಿನ್ನೆಲೆ ವಿಮಾನ ಪ್ರಯಾಣದಷ್ಟೇ ದುಬಾರಿಯಾದ ಖಾಸಗಿ ಬಸ್ ದರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 23, 2022 | 11:13 PM

ಬೆಂಗಳೂರು: ಕ್ರಿಸ್​ಮಸ್ ಹಬ್ಬ (Christmas) ಇನ್ನೇನು ಒಂದು ದಿನ ಕಳೆದರೆ ಬಂದೇ ಬಿಡುತ್ತದೆ. ಆದರೆ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ (passengers) ಮಾತ್ರ ಈ ಸುದ್ದಿ ಶಾಕ್​ ನೀಡುತ್ತದೆ. ಇದೀಗ ಕ್ರಿಸ್​ಮಸ್​ ಹಬ್ಭದ ಪ್ರಯುಕ್ತ ಊರುಗಳಿಗೆ ಪ್ರಯಾಣ ಮಾಡುವ ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳುವ ಪರಿಸ್ಥಿತಿ ಬಂದಿದೆ. ಕ್ರಿಸ್​ಮಸ್ ಹಬ್ಭದಂದು ಖಾಸಗಿ ಬಸ್​​ಗಳು (Private bus) ಪ್ರಯಾಣ ದರವನ್ನು ಏಕಾಏಕಿ ಏರಿಸಿವೆ. ಇದು ಸಾಮಾನ್ಯ ದರಕ್ಕಿಂತ ಕೊಂಚ ಹೆಚ್ಚಾಗಿದೆ. ವಿಮಾನ ಪ್ರಯಾಣದಷ್ಟೇ ಖಾಸಗಿ ಬಸ್​ಗಳ ಟಿಕೆಟ್ ದರ ಕೂಡ ದುಬಾರಿಯಾಗಿದೆ.

ಕ್ರಿಸ್​ಮಸ್ ಹಬ್ಬಕ್ಕೆ ಊರುಗಳತ್ತ ಹೋಗುವವರ ಸಂಖ್ಯೆ ಜಾಸ್ತಿಯಾಗಿದ್ದು, ಎರಡು ದಿನದಿಂದ ಖಾಸಗಿ ಬಸ್​ಗಳ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಸಾಮಾನ್ಯ ದರಕ್ಕೆ ಹೋಲಿಸಿದ್ರೆ ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಲಾಗಿದ್ದು, ಇದರಿಂದ ಟಿಕೆಟ್ ದರ ನೋಡಿ ಪ್ರಯಾಣಿಕರು ಬೆರಗಾಗುತ್ತಿದ್ದಾರೆ, ಜೊತೆಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಖಾಸಗಿ ಬಸ್​ಗಳು ಮಾತ್ರವಲ್ಲದೇ ಸರ್ಕಾರಿ ಬಸ್​ಗಳಲ್ಲಿ 200 ರೂಪಾಯಿ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: Covid19 Scare: ಬಿಎಮ್ ಟಿಸಿ ಮತ್ತು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ!

ಯಾವ ಯಾವ ಜಿಲ್ಲೆಗಳಿಗೆ ಎಷ್ಟೇಷ್ಟು ದರ ನಿಗದಿಯಾಗಿದೆ ಇಲ್ಲಿದೆ ಮಾಹಿತಿ

ಜಿಲ್ಲೆ             ಇಂದಿನ ದರ         ಹಿಂದಿನ ದರ

  1. ಬೆಳಗಾವಿ –        4500                      900
  2. ಮೈಸೂರ್-       1500                       700
  3. ಶಿವಮೊಗ್ಗ –     1800                       900
  4. ಹುಬ್ಬಳ್ಳಿ —       4900                      1200
  5. ಮಂಗಳೂರು-  4000                       550
  6. ಉಡುಪಿ –          3449                       660
  7. ಹಾಸನ್ –         1924                        600
  8. ಚಿಕ್ಕಮಂಗಳೂರು- 1200                 650
  9. ಕೊಡಗು –         1450                        650
  10. ಕಲ್ಬುರ್ಗಿ –         2999                       450
  11. ಎರ್ನಾಕುಲಂ –  7000                    1200
  12. ಗೋವಾ –           7000                     1200

ಇನ್ನು ಖಾಸಗಿ ಬಸ್​ಗಳ ಟಿಕೆಟ್ ದರ ಏರಿಕೆ ಹಿನ್ನೆಲೆ ಸಾರಿಗೆ ಇಲಾಖೆಯ ಆಡಿಷನಲ್ ಕಮಿಷರ್ ಮಲ್ಲಿಕಾರ್ಜುನ್​ರಿಂದ ರೇಸ್ ಕೋರ್ಸ್ ಬಳಿ ಪರಿಶೀಲನೆ ಮಾಡಲಾಗಿದೆ. ಖಾಸಗಿ ಬಸ್​ಗಳಲ್ಲದೇ ಸರ್ಕಾರಿ ಬಸ್​ಗಳಲ್ಲಿಯೂ ಪರಿಶೀಲನೆ ಮಾಡಲಾಗುತ್ತಿದೆ. ಐರಾವತ, ಅಂಬಾರಿ ಬಸ್​ಗಳಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್‌ ಕಡ್ಡಾಯ

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು (Coronavirus) ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (BMTC Bus) ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್​ (Mask) ಕಡ್ಡಾಯ ಮಾಡಲಾಗಿದೆ.

ಇದನ್ನೂ ಓದಿ: COVID 19: ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್‌ ಕಡ್ಡಾಯ: ಇಲ್ಲದಿದ್ದರೆ ನೋ ಎಂಟ್ರಿ…!

ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್​ಲೈನ್ಸ್​​​​​ ಬಿಡುಗಡೆ ಮಾಡಲಿದೆ. ನಾಳೆಯಿಂದ (ಡಿಸೆಂಬರ್ 24) ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್​ ಕಡ್ಡಾಯವಾಗಿ ಧರಸಬೇಕು. ಒಂದು ವೇಳೆ ಮಾಸ್ಕ್​ ಹಾಕಿಲ್ಲ ಅಂದ್ರೆ ಬಸ್​ ಹತ್ತುವಂತಿಲ್ಲ.

ಈ ಬಗ್ಗೆ ಸಂಚಾರ ನಿಯಂತ್ರಕರು ಮೆಜೆಸ್ಟಿಕ್, ಬಿಎಂಟಿಸಿ ಬಸ್​ ಡ್ರೈವರ್, ಕಂಡಕ್ಟರ್ ಗಳಿಗೂ ಗೈಡ್​​ಲೈನ್ಸ್​ ನೀಡುತ್ತಿದ್ದು,​ ಮಾಸ್ಕ್ ಧರಿಸುವಂತೆ ಹೇಳುತ್ತಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂಚಾರ ನಿಯಂತ್ರಕರು, ಇಂದು ಮೊದಲನೇ ದಿನವಾದ್ದರಿಂದ ಎಲ್ಲರಿಗೂ ಸೂಚನೆ ನೀಡಿದ್ದೇವೆ. ನಾಳೆ(ಡಿ.24) ಬೆಳಗ್ಗೆ ಮಾಸ್ಕ್ ಹಾಕಿಲ್ಲ ಅಂದ್ರೆ ಗಾಡಿಯೊಳಗೆ(ಬಸ್​) ಪ್ರವೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:55 pm, Fri, 23 December 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್