Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ: ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್

Taluk And zilla panchayat Elections: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ ಗಡುವು ನೀಡಿದೆ. ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಪೂರ್ಣಗೊಳಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ: ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Nov 09, 2023 | 1:14 PM

ಬೆಂಗಳೂರು, (ನವೆಂಬರ್ 09): ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ(Taluk And zilla panchayat Elections) 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್(Karnataka high court) ​ ಸೂಚಿಸಿದೆ. TP, ZP ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಂವಿಧಾನದ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದೆ. ಈಗ 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ರೂಪಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡುವಂತೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಆದ್ರೆ, ಹೈಕೋರ್ಟ್, ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದ್ದು, ಇನ್ನು 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಪೂರ್ಣಗೊಳಿಸುವಂತೆ ಸೂಚಿಸಿ ವಿಚಾರಣೆಯನ್ನು 4 ವಾರ ಮುಂದೂಡಿತು.

ಸರ್ಕಾರ ಬದಲಾದರೂ, ಸ್ಥಳೀಯ ಸಂಸ್ಥೆಗಳಾದ ಬಿಬಿಎಂಪಿ (BBMP), ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ (Zilla and Taluk Panchayat) ಚುನಾವಣೆ ವಿಳಂಬವಾಗುವ ಸಾಧ್ಯತೆಯಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆಯ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Election) ನಡೆಯಲಿವೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ