ಬೆಂಗಳೂರು, (ನವೆಂಬರ್ 09): ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ(Taluk And zilla panchayat Elections) 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್(Karnataka high court) ಸೂಚಿಸಿದೆ. TP, ZP ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಂವಿಧಾನದ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದೆ. ಈಗ 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ರೂಪಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡುವಂತೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಆದ್ರೆ, ಹೈಕೋರ್ಟ್, ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದ್ದು, ಇನ್ನು 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಪೂರ್ಣಗೊಳಿಸುವಂತೆ ಸೂಚಿಸಿ ವಿಚಾರಣೆಯನ್ನು 4 ವಾರ ಮುಂದೂಡಿತು.
ಸರ್ಕಾರ ಬದಲಾದರೂ, ಸ್ಥಳೀಯ ಸಂಸ್ಥೆಗಳಾದ ಬಿಬಿಎಂಪಿ (BBMP), ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ (Zilla and Taluk Panchayat) ಚುನಾವಣೆ ವಿಳಂಬವಾಗುವ ಸಾಧ್ಯತೆಯಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆಯ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Election) ನಡೆಯಲಿವೆ ಎನ್ನಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ