ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್

ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು‌ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್
Follow us
TV9 Web
| Updated By: preethi shettigar

Updated on:Jan 09, 2022 | 2:09 PM

ಬೆಂಗಳೂರು: ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ. ಬಳಿಕ ಜ.22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ. ಆನೇಕಲ್ ಗಡಿಯಲ್ಲಿ ಕನ್ನಡಪರ ಸಂಘಟನೆಗಳ ಹೋರಾಟ ನಡೆಸಲಿವೆ. ಈ ವೇಳೆ ಕಳಸಾಬಂಡೂರಿ ಯೋಜನೆ ಜಾರಿಗೂ ಆಗ್ರಹಿಸಲಾಗುವುದು ಎಂದು ಬೆಂಗಳೂರಿನ ಮೈಸೂರು ಬ್ಯಾಕ್‌ ಸರ್ಕಲ್‌ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಕಾವೇರಿ ವಿಚಾರದಲ್ಲಿ ತಮಿಳರು ನಮ್ಮ ಶತೃಗಳು.‌ ಸಿಎಂ ಸ್ಟಾಲಿನ್ ಕರ್ನಾಟಕದ ಯೋಜನೆ ವಿರೋಧಿಸಬಾರದು. ಕಾಂಗ್ರೆಸ್​ನವರು ಕೇಂದ್ರ ಹಾಗೂ ರಾಜ್ಯದಲ್ಲಿ ಡಿಎಂಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಬೇಕು. ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು‌ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕಾಂಗ್ರೆಸ್​ನವರು ಅಪರಾಧಿ ಸ್ಥಾನದಲ್ಲಿ ಇದ್ದಾರೆ: ವಾಟಾಳ್ ನಾಗರಾಜ್ ಕಾಂಗ್ರೆಸ್​ನವರು ಅಪರಾಧಿ ಸ್ಥಾನದಲ್ಲಿ ಇದ್ದಾರೆ. ಅವರಿಗೆ ಹೋರಾಡುವ ನೈತಿಕತೆ ಇಲ್ಲ. ಇನ್ನೂ ಕನ್ನಡದ ನಾಡು ನುಡಿ ಹೋರಾಟ ಬೆಂಬಲಿಸದ ಕನ್ನಡ ಚಿತ್ರರಂಗ, ಇವತ್ತು ಮೇಕೆದಾಟು ಬೆಂಬಲಿಸುತ್ತಿರುವುದು ಸರಿಯಲ್ಲ ಎಂದು ಚಿತ್ರರಂಗದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ: ಡಿಕೆ ಶಿವಕುಮಾರ್​ ಮೇಕೆದಾಟು ಪಾದಯಾತ್ರೆಗೆ ಬರುವವರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ ನೀವು ಯಾರನ್ನೂ ತಡೆಯುವುದಕ್ಕೆ ಆಗಲ್ಲ. ಉದಯಿಸುವ ಸೂರ್ಯ, ಹರಿಯುವ ನೀರನ್ನು ತಡೆಯಲಾಗಲ್ಲ. ಅದೇ ರೀತಿ ನಮ್ಮ ಪಾದಯಾತ್ರೆಯನ್ನು ತಡೆಯುವುದಕ್ಕೆ ಆಗಲ್ಲ. ಪಾದಯಾತ್ರೆಗೆ ನಮ್ಮ ತಾಲೂಕಿನಲ್ಲಿ ಎಲ್ಲರೂ ಬೆಂಬಲಿಸುತ್ತಿದ್ದಾರೆ. ಆದರೆ ಕೆಲವರು ಪಾದಯಾತ್ರೆಗೆ ಹೋಗದಂತೆ ಕರೆ ಮಾಡಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಎಲ್ಲರಿಗೂ ಪಾದಯಾತ್ರೆಗೆ ಬನ್ನಿ ಎಂದು ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಬರಲು ನಾನು ಯಾರಿಗೂ ಬಲವಂತ ಮಾಡಲ್ಲ. ಪಾದಯಾತ್ರೆ ನಮ್ಮ ಕಾರ್ಯಕ್ರಮವಲ್ಲ, ನಿಮ್ಮ ಕಾರ್ಯಕ್ರಮ. ಯಾರು ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು. ಎಸ್‌ಪಿ, ಡಿಸಿ ಏನು ಮಾಡುತ್ತಾರೆ. ಹೆಚ್ಚು ಎಂದರೆ ಇವರು ಸಿದ್ದರಾಮಯ್ಯ ಮತ್ತು ನನ್ನ ಮೇಲೆ ಕೇಸ್ ಹಾಕಬಹುದು. ನಾನು ಫಿಲ್ಮ್ ಚೇಂಬರ್‌ಗೆ ಕೂಡ ಹೋಗಿ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಯಾರು ಬರುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: Mekedatu Project: ಮೇಕೆದಾಟು ಪಾದಯಾತ್ರೆ; ಕಾಂಗ್ರೆಸ್​ ಹೋರಾಟ ಹೇಗಿರಲಿದೆ? ಸಂಪೂರ್ಣ ವಿವರ ಇಲ್ಲಿದೆ

Mekedatu Padayatra: ಪಾದಯಾತ್ರೆಗೆ ಬರುವ ಯಾರನ್ನು ನೀವು ತಡೆಯುವುದಕ್ಕೆ ಆಗಲ್ಲ: ಡಿಕೆ ಶಿವಕುಮಾರ್

Published On - 1:34 pm, Sun, 9 January 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?