ರಾಜ್ಯ ನಿಗಮ ಮಂಡಳಿ ನೇಮಕ ಅಸಮಾಧಾನ; ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬೇಡ ಎಂದ ತನ್ವೀರ್ ಸೇಠ್!

ಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿರುವುದಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಹಿರಿತನಕ್ಕೆ ತಕ್ಕ ಸ್ಥಾನ ಸಿಗುವ ವಿಶ್ವಾಸವಿತ್ತು, ಆದರೆ ಈ ಹುದ್ದೆ ತಮಗೆ ಸೂಕ್ತವಲ್ಲ ಎಂದಿದ್ದಾರೆ. ಸಿಎಂ ಕಚೇರಿಯಿಂದ ಈವರೆಗೆ ಕರೆ ಬಂದಿಲ್ಲ ಎಂದು ತಿಳಿಸಿರುವ ಅವರು, ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಹುದ್ದೆ ಸ್ವೀಕರಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರಾಜ್ಯ ನಿಗಮ ಮಂಡಳಿ ನೇಮಕ ಅಸಮಾಧಾನ; ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬೇಡ ಎಂದ ತನ್ವೀರ್ ಸೇಠ್!
ತನ್ವೀರ್ ಸೇಠ್
Edited By:

Updated on: Nov 21, 2026 | 3:33 PM

ಮುಖ್ಯಾಂಶಗಳು

  • ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನನಗೆ ಸೂಕ್ತವಲ್ಲ ಎಂದ ಶಾಸಕ ತನ್ವೀರ್ ಸೇಠ್.
  • ಹಿರಿತನಕ್ಕೆ ತಕ್ಕ ಸ್ಥಾನ ಸಿಗುವ ವಿಶ್ವಾಸವಿತ್ತು, ಹುದ್ದೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
  • ಸಿಎಂ ಜೊತೆ ಮಾತುಕತೆ ಬಳಿಕ ಹುದ್ದೆ ಸ್ವೀಕಾರದ ಬಗ್ಗೆ ಅಂತಿಮ ನಿರ್ಧಾರ.

ಮೈಸೂರು, ನವೆಂಬರ್ 21: ರಾಜ್ಯ ಕಾಂಗ್ರೆಸ್‌ನಲ್ಲಿ ನಿಗಮ-ಮಂಡಳಿ ಹಾಗೂ ಪ್ರಮುಖ ಹುದ್ದೆಗಳ ನೇಮಕಾತಿ ಬೆನ್ನಲ್ಲೇ ಅಸಮಾಧಾನದ ಧ್ವನಿ ಕೇಳಿಬಂದಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ತನ್ವೀರ್ ಸೇಠ್ ಅವರನ್ನು ನೇಮಕ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದ ಬೆನ್ನಲ್ಲೇ, ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ಸೂಕ್ತವಲ್ಲ. ಅದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹುದ್ದೆಯಲ್ಲ. ಈ ಹುದ್ದೆಯಿಂದ ನನಗೆ ತೃಪ್ತಿಯಿಲ್ಲ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ರಾಜಕೀಯ ಕಾರ್ಯದರ್ಶಿ ಹುದ್ದೆ ನನಗಲ್ಲ ಎಂದ ಶಾಸಕ

ಕಾಂಗ್ರೆಸ್ ಹೈಕಮಾಂಡ್ ನವೆಂಬರ್ 21ರಂದು ರಾಜ್ಯದ 18 ಪ್ರಮುಖ ನಾಯಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಗಳನ್ನು ಹಂಚಿಕೆ ಮಾಡಿದೆ. ಈ ಪಟ್ಟಿಯಲ್ಲಿ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಆದರೆ ಈ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿ ಅವರಿಗೆ ರಾಜಕೀಯವಾಗಿ ಶಕ್ತಿ ತುಂಬುವ ಕೆಲಸವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ನನ್ನ ಹಿರಿತನಕ್ಕೆ ತಕ್ಕ ಸ್ಥಾನವನ್ನು ಕಲ್ಪಿಸುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಈ ಹುದ್ದೆ ನನಗೆ ಸೂಕ್ತವಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

Loading...

ಅಷ್ಟೇ ಅಲ್ಲ, ಈ ಹಿಂದೆ ಕೂಡ ಈ ಹುದ್ದೆ ಬೇಡ ಎಂದು ತಿಳಿಸಿದ್ದೆ. ಆದರೆ ಈವರೆಗೆ ಮುಖ್ಯಮಂತ್ರಿ ಕಚೇರಿಯಿಂದ ಯಾವುದೇ ಕರೆ ಬಂದಿಲ್ಲ. ಹೀಗಾಗಿ ಸಿಎಂ ಏನು ಹೇಳುತ್ತಾರೆ ಎಂಬುದನ್ನು ನೋಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಜೊತೆ ಮಾತುಕತೆ ಬಳಿಕ ಅಂತಿಮ ನಿರ್ಧಾರ

ಉಳಿದಿರುವ ಮೂರು ಸಚಿವ ಸ್ಥಾನಗಳಲ್ಲಿ ನನ್ನ ಕೋಟಾ ಇಲ್ಲ. ಹೀಗಾಗಿ ಸಚಿವ ಸ್ಥಾನವನ್ನು ಕೇಳುವುದಿಲ್ಲ ಎಂದಿರುವ ತನ್ವೀರ್ ಸೇಠ್, ನನ್ನ ಸಿದ್ಧಾಂತಕ್ಕೆ ಒಪ್ಪಿಕೊಂಡು ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ಸಿಕ್ಕಿದ್ದಕ್ಕೂ, ಸಿಗದೇ ಇರುವುದಕ್ಕೂ ತೃಪ್ತಿಯಿದೆ ಎಂದು ಹೇಳಿದ್ದಾರೆ.

ಹೊಸ ಸಂಪುಟ ರಚನೆಯಾದ ಬಳಿಕದಿಂದಲೂ ಮುಖ್ಯಮಂತ್ರಿ ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಿಲ್ಲ. ಸಿಎಂ ಕರೆದು ಮಾತನಾಡಿಸಿದರೆ ಖಂಡಿತಾ ಚರ್ಚಿಸುತ್ತೇನೆ. ಅವರೊಂದಿಗೆ ಮಾತುಕತೆ ನಡೆಸಿದ ಬಳಿಕವೇ ರಾಜಕೀಯ ಕಾರ್ಯದರ್ಶಿ ಹುದ್ದೆ ಸ್ವೀಕರಿಸಬೇಕೋ ಬೇಡವೋ ಎಂಬುದನ್ನು ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಕಾಂಗ್ರೆಸ್‌ನಲ್ಲಿ ಹುದ್ದೆಗಳ ಹಂಚಿಕೆ ಬೆನ್ನಲ್ಲೇ ಹಿರಿಯ ಶಾಸಕ ತನ್ವೀರ್ ಸೇಠ್ ಅವರ ಅಸಮಾಧಾನ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ಅವರು ಒಪ್ಪಿಕೊಳ್ಳುತ್ತಾರೆಯೇ ಅಥವಾ ತಮ್ಮ ನಿಲುವಿಗೆ ಬದ್ಧರಾಗುತ್ತಾರೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us