IT Raids: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಚಿನ್ನದ ವ್ಯಾಪಾರಿಗಳಿಗೆ ಶಾಕ್

IT Raids in Bengaluru ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ಇಂದು (ಅಕ್ಟೋಬರ್ 12) ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.

IT Raids: ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ, ಚಿನ್ನದ ವ್ಯಾಪಾರಿಗಳಿಗೆ ಶಾಕ್
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 12, 2023 | 9:14 AM

ಬೆಂಗಳೂರು, (ಅಕ್ಟೋಬರ್ 12): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಐಟಿ ದಾಳಿಯಾಗಿದೆ (IT Raid). ತೆರಿಗೆ ವಂಚನೆ ಸಂಬಂಧ ಇಂದು (ಅಕ್ಟೋಬರ್ 12) ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.

ಕಾಫಿ ಬೋರ್ಡ್ ನಿರ್ದೇಶಕನ ಮನೆ ಮೇಲೂ ದಾಳಿ

ಈ ಹಿಂದೆ ದಾಳಿ ಮಾಡಿದ್ದ ವೇಳೆ ಚಿನ್ನದ ವ್ಯಾಪಾರಿಗಳ ಜೊತೆ ಕಾಫಿ ಬೋರ್ಡ್ ನಿರ್ದೇಶಕ ವ್ಯವಹಾರ ನಡೆಸಿರುವ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಅಕ್ಟೋಬರ್ 06ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬಂದಿದ್ದ ತಂಡ ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಮೇಲೆ ದಾಳಿ ಮಾಡಿತ್ತು.

ಇದನ್ನೂ ಓದಿ: ತೆರಿಗೆ ವಂಚನೆ: ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ಇನ್ನು ತೆರಿಗೆ ವಂಚನೆ ಆರೋಪಡಿ ಮೊನ್ನೇ ಅಷ್ಟೇ (ಅಕ್ಟೋಬರ್ 10) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದರು. ಅಲ್ಲದೇ .ಮಾಲೀಕರ ಮನೆಯಿಂದ 1.47 ಕೋಟಿ ರೂಪಾಯಿ ನಗದು ಸಿಕ್ಕಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Thu, 12 October 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ