ಕಾಂಡಿಮೆಂಡ್ಸ್, ಚಹಾ ಅಂಗಡಿಗಳಿಗೆ ನೋಟಿಸ್: ಮತ್ತೊಂದು ಅಪ್​​ಡೇಟ್ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

ಬೆಂಗಳೂರಿನ ಬೇಕರಿ, ಕಾಂಡಿಮೆಂಟ್ಸ್ ಮತ್ತು ಚಹಾ ಅಂಗಡಿಗಳಿಗೆ ನೀಡಲಾದ ವಾಣಿಜ್ಯ ತೆರಿಗೆ ನೋಟಿಸ್‌ಗಳ ವಿರುದ್ಧ ಮುಷ್ಕರ ನಡೆಸಲು ವರ್ತಕರು ಮುಂದಾಗಿರುವ ಬೆನ್ನಲ್ಲೇ ವಾಣಿಜ್ಯ ತೆರಿಗೆ ಇಲಾಖೆ ಮತ್ತೊಂದು ಪತ್ರಿಕಾ ಪ್ರಕಟಣೆ ಹೊರಡಿಸಿ ವ್ಯಾಪಾರಿಗಳ ಮನವೊಲಿಕೆ ಮಾಡುವ ಕೆಲಸ ಮಾಡಿದೆ. ವಾಣಿಜ್ಯ ತೆರಿಗೆ ಇಲಾಖೆ ಪ್ರಕಟಣೆಯಲ್ಲೇನಿದೆ? ವರ್ಕತರಿಗೆ ನೀಡಿರುವ ಸಲಹೆಗಳೇನು? ಇಲ್ಲಿದೆ ಮಾಹಿತಿ.

ಕಾಂಡಿಮೆಂಡ್ಸ್, ಚಹಾ ಅಂಗಡಿಗಳಿಗೆ ನೋಟಿಸ್: ಮತ್ತೊಂದು ಅಪ್​​ಡೇಟ್ ನೀಡಿದ ವಾಣಿಜ್ಯ ತೆರಿಗೆ ಇಲಾಖೆ
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: Jul 18, 2025 | 11:28 AM

ಬೆಂಗಳೂರು, ಜುಲೈ 18: ಬೆಂಗಳೂರಿನ ಬೇಕರಿಗಳು, ಕಾಂಡಿಮೆಂಡ್ಸ್, ಚಹಾ ಅಂಗಡಿಗಳಿಗೆ ತೆರಿಗೆ ನೋಟಿಸ್ ನೀಡಿದ್ದ ವಾಣಿಜ್ಯ ತೆರಿಗೆ ಇಲಾಖೆ (Commercial Tax Department), ಆ ನಂತರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿತ್ತು. ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹು. ಕಂಪೋಸಿಷನ್ ಟ್ಯಾಕ್ಸ್ ಸ್ಕೀಮ್ ಆಯ್ಕೆ ಮಾಡಿ ವಿನಾಯಿತಿ ಪಡೆಯಬಹುದು ಎಂದಿತ್ತು. ಇದೀಗ ಮತ್ತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಬಾರಿಯೂ ತೆರಿಗೆ ನೋಟಿಸ್ (Tax Notice) ಬಗ್ಗೆ ಸ್ಪಷ್ಟನೆ ನೀಡಿದ್ದಲ್ಲದೆ, ವರ್ತಕರು ಏನು ಮಾಡಬೇಕು ಎಂಬ ಸಲಹೆ ನೀಡಿದೆ.

ವಾಣಿಜ್ಯ ತೆರಿಗೆ ಇಲಾಖೆ ಪ್ರಕಟಣೆಯಲ್ಲೇನಿದೆ?

ವರ್ತಕರು ನೋಟಿಸ್ ಬಂದಿರುವ ಕಚೇರಿಗೆ ತೆರಳಿ ಸೂಕ್ತ ದಾಖಲಾತಿ ನೀಡಿ ವಿವರಣೆ ನೀಡಬೇಕು. ತೆರಿಗೆ ವಿನಾಯಿತಿ ಇರುವ ಸರಕು ಸೇವೆಗಳನ್ನು ಹೊರತುಪಡಿಸಿ, ತೆರಿಗೆ ಇರುವ ಸರಕಿಗೆ ಮಾತ್ರ ತೆರಿಗೆ ವಿಧಿಸುತ್ತಾರೆ. ಈಗಾಗಲೇ 40 ಲಕ್ಷ ವಹಿವಾಟು ಮೇಲ್ಪಟ್ಟವರು ಜಿಎಸ್​​ಟಿ ನೋಂದಣಿ ಪಡೆದುಕೊಳ್ಳಬೇಕು. ಈಗಾಗಲೇ ಶೇ 90 ರಷ್ಟು ವ್ಯಾಪಾರಿಗಳು ರಾಜಿ ತೆರಿಗೆ ಪದ್ಧತಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಶೇ 10 ರಷ್ಟು ವರ್ತಕರು ತೆರಿಗೆ ಪಾವತಿ ಮಾಡದೇ ಇರುವುದು ಸರಿಯಲ್ಲ. ಅದು ತಾರತಮ್ಯ ಮಾಡಿದಂತಾಗುತ್ತದೆ ಎಂದು ವಾಣಿಜ್ಯ ತೆರಿಗೆ ಪ್ರಕಟಣೆ ತಿಳಿಸಿದೆ.

ತೆರಿಗೆ ವಿನಾಯಿತಿ ಪಡೆಯಲು ವರ್ತಕರು ಏನು ಮಾಡಬೇಕು?

ವರ್ತಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜತೆಗೆ, ಹೊಸದಾಗಿ ಜಿಎಸ್​​ಟಿ ನೋಂದಣಿ ಮಾಡಿಕೊಳ್ಳುವವರಿಗೆ ಸರಳ ವ್ಯವಸ್ಥೆಯಡಿ ಸುಸೂತ್ರವಾಗಿ ನಡೆಸಿ ಕೊಡುವಂತೆ ಸೂಚನೆ ನೀಡಲಾಗಿದೆ. ಯಾವುದೇ ರೀತಿ ವರ್ತಕರಿಗೆ ತೊಂದರೆಯಾಗದಂತೆ ನೋಂದಣಿ ಮಾಡಿಸಲು ಸೂಚನೆ ಕೊಟ್ಟಿದ್ದೇವೆ. ರಾಜ್ಯದಲ್ಲಿ 98,915 ವರ್ತಕರಿಂದ‌ ಕಂಪೋಸಿಷನ್ ಟ್ಯಾಕ್ಸ್ ಸ್ಕೀಮ್ ನಡಿ ನೋಂದಣಿ ಮಾಡಿಕೊಳ್ಳಲಾಗಿದೆ. ಕಂಪೋಸಿಷನ್ ಸ್ಕೀಮ್​​ನಡಿ ಶೇ 1 ರ ತೆರಿಗೆ ಪಾವತಿಗೆ ಅವಕಾಶ ಇದೆ. ಇದರಿಂದ ವರ್ತಕರಿಗೆ ಸಮಸ್ಯೆಯಾಗದು ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ
ಎಲ್ಲ ಬಿ ಖಾತಾದಾರರಿಗೆ ಸಿಗಲಿದೆ ಎ ಖಾತಾ ಮಾನ್ಯತೆ ನೀಡಲು ಸಂಪುಟ ನಿರ್ಧಾರ
ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು ಕೂಡ ಸಿಗಲ್ಲ!
ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ
ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ

ವರ್ತಕರಲ್ಲಿ ಜಾಗೃತಿಗೆ ತೆರಿಗೆ ಇಲಾಖೆ ಕ್ರಮ

ಏಕಾಏಕಿ 2-3 ವರ್ಷಗಳ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿರುವುದಕ್ಕೆ ಬೆಂಗಳೂರಿನಲ್ಲಿ ವರ್ತಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಲೈ 25 ರಂದು ನಮ್ಮ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಧರಣಿ ನಡೆಸಲು ಬೆಂಗಳೂರಿನ ವರ್ತಕರು ಮುಂದಾಗಿದ್ದಾರೆ. ಇದೇ ಸಂದರ್ಭದಲ್ಲಿ, ತೆರಿಗೆ ಇಲಾಖೆ ಈಗ ವರ್ತಕರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ

ಬೆಂಗಳೂರಿನ ಅನೇಕ ವರ್ಕತರಿಗೆ ಕೆಲವು ದಿನಗಳ ಹಿಂದೆ ವಾಣಿಜ್ಯ ಇಲಾಖೆಯಿಂದ ತೆರಿಗೆ ನೋಟಿಸ್ ಬಂದಿದೆ. ಕಳೆದ ನಾಲ್ಕೈದು ವರ್ಷಗಳಿಂದ ಲಕ್ಷಾಂತರ ರೂಪಾಯಿ ವ್ಯಾಪಾರ ವಹಿವಾಟು ಮಾಡಿರುವ ನೀವು, ಅದಕ್ಕಾಗಿ ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕು ಎಂದು ನೋಟಿಸ್​​ಗಳನ್ನು ನೀಡಲಾಗಿತ್ತು. ಏಕಾಏಕಿ ಲಕ್ಷಾಂತರ ರೂ. ತೆರಿಗೆ ಪಾವತಿಗೆ ಸೂಚಿಸಿರುವುದರಿಂದ ವ್ಯಾಪಾರಿ ವರ್ಗದವರು ಕಂಗಾಲಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ