AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ್

ತುಂಗಭದ್ರಾ ಅಣೆಕಟ್ಟಿನಲ್ಲಿ 19 ನೇ ಗೇಟ್ ಚೈನ್ ಕಟ್ ಆಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಇದೀಗ ಯಶಸ್ವಿಯಾಗಿ ಗೇಟ್ ದುರಸ್ತಿ ಕೆಲಸ ಮುಗಿಸಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ಮಾಡಿ ಡ್ಯಾಂ​​​ ತಜ್ಞ ಕನ್ನಯ್ಯನಾಯ್ಡುಗೆ ಧನ್ಯವಾದ ಹೇಳಿದರು.

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on:Aug 17, 2024 | 10:12 PM

Share

ಬೆಂಗಳೂರು, ಆ.17: ತುಂಗಭದ್ರಾ ಡ್ಯಾಂನ ಕ್ರಸ್ಟಗೇಟ್ 19 ಕೊಚ್ಚಿಕೊಂಡು ಹೋಗಿದ್ದರಿಂದ ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು. ಇದೀಗ ಯಶಸ್ವಿಯಾಗಿ ಗೇಟ್ ದುರಸ್ತಿ ಕೆಲಸ ಮುಗಿಸಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಮಾತನಾಡಿ, ‘ತುಂಗಭದ್ರಾ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿಯಾಗಿದೆ. ಎಲ್ಲರೂ ಒಟ್ಟಾಗಿ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ದುರಸ್ತಿ ಕಾರ್ಯ ಮಾಡಿದ್ದಾರೆ. ಆ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದ ಎಂದರು.

ರಾಜ್ಯದ ತುಂಗಭದ್ರಾ ಅಣೆಕಟ್ಟಿನಲ್ಲಿ 19 ನೇ ಗೇಟ್ ಚೈನ್ ಕಟ್ ಆಗಿ 35 ಟಿಎಂಸಿ ನೀರು ಲಾಸ್ ಆಗಿದೆ. ನಾವೆಲ್ಲ ಗಾಬರಿ ಆಗಿದ್ದೆವು, ದೊಡ್ಡ ಸಮಸ್ಯೆ ಎದುರಿಸಬೇಕಾದ ಸ್ಥಿತಿ ಇತ್ತು. ಇನ್ನು ನಾವೆಲ್ಲ ಆತಂಕದಲ್ಲಿ ಇದ್ದೆವು, ಸ್ಥಳೀಯ ಅಧಿಕಾರಿಗಳು, ಸಚಿವರು ಹಾಗೂ ಶಾಸಕರು ನಿಂತು ಕೆಲಸ ಮಾಡಿದ್ದಾರೆ. ಸೆಟ್ ಆಫ್ ಡಿಸೈನ್ ಡಾಕ್ಯುಮೆಂಟ್ ನಮ್ಮ ಬಳಿ ಇತ್ತು. ಡ್ಯಾಂ​​​ ತಜ್ಞ ಕನ್ಹಯ್ಯ ನಾಯ್ಡು ಅವರ ಹತ್ತಿರ ಚರ್ಚೆ ಮಾಡಿ ರಿಸ್ಟೋರ್ ಮಾಡಲು ಮುಂದಾದೆವು. ರಾಜ್ಯ ಸರ್ಕಾರ, ರೈತರ ಪರವಾಗಿ ಎಲ್ಲರೂ ದುಡಿದಿದ್ದಾರೆ. ಇದೀಗ ಕ್ರೆಸ್ಟ್ ಗೇಟ್ ಅಳವಡಿಸಿದ್ದಾರೆ. ಈ ಮೂಲಕ ನಮಗೆ ಇದ್ದ ಭಯವನ್ನು ದೂರ ಮಾಡಿದ್ದಾರೆ.

ಇದನ್ನೂ ಓದಿ:ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಗೊಳಿಸಿ;​ ಪ್ರತಿ ಕಾರ್ಮಿಕನಿಗೆ 50 ಸಾವಿರ ಕೊಡ್ತೇನೆ ಎಂದ ಸಚಿವ ಜಮೀರ್ ಅಹ್ಮದ್

ಕನ್ನಯ್ಯ ನಾಯ್ಡು & ತಂಡಕ್ಕೆ ಸರ್ಕಾರದಿಂದ ಅಭಿನಂದನೆಗಳು

ಮುಂದೆ ಅದಕ್ಕೆ ಏನು ಬೇಕೋ ಅದನ್ನ ನಾವು ಮಾಡುತ್ತೇವೆ. ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್ ಒಳ ಹರಿವಿದೆ. ದುರಸ್ತಿ ಕೆಲಸದಲ್ಲಿ ಭಾಗಿಯಾದ ಕನ್ನಯ್ಯ ನಾಯ್ಡು ಮತ್ತು ತಂಡಕ್ಕೆ ಸರ್ಕಾರದಿಂದ ಅಭಿನಂದನೆಗಳು. ಹಗಲೂ ರಾತ್ರಿ ಕೆಲಸ ಮಾಡಿ ರಾಜ್ಯಕ್ಕೆ ದೊಡ್ಡ ಗೌರವ ಕೊಟ್ಟಿದ್ದಾರೆ. ಅವರಿಗೆ ಸತ್ಕಾರ ಮಾಡುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಮೊಬೈಲ್ ಮೂಲಕ ಕನ್ನಯ್ಯನಾಯ್ಡುಗೆ ಧನ್ಯವಾದ ಹೇಳಿದ ಡಿಕೆಶಿ

ಇನ್ನು ಗೇಟ್‌ ದುರಸ್ತಿ ಕೆಲಸ ಯಶಸ್ವಿ ಬೆನ್ನಲ್ಲೇ ಕೈ ಮುಖಂಡ ಶ್ರೀನಿವಾಸ ರೆಡ್ಡಿ ಮೊಬೈಲ್​ಗೆ ಕರೆ ಮಾಡಿ ಕನ್ನಯ್ಯನಾಯ್ಡುಗೆ ಧನ್ಯವಾದ ಹೇಳಿದರು.

ಟ್ವೀಟ್​ ಮೂಲಕ ಧನ್ಯವಾದ ತಿಳಿಸಿದ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ ಗೇಟ್ ನಂಬರ್ 19 ಕ್ಕೆ ಬದಲಿಯಾಗಿ 5 ತಡೆ ಗೇಟುಗಳ ಅಳವಡಿಕೆ ಕಾರ್ಯ ಯಶಸ್ವಿಯಾಗಿದ್ದು, ಈ ಸವಾಲಿನ ಕಾರ್ಯಕ್ಕೆ ಸ್ಥಳದಲ್ಲೇ ಮೊಕ್ಕಾಂಹೂಡಿ ಸೂಕ್ತ ಮಾರ್ಗದರ್ಶನ ನೀಡಿದ ಡ್ಯಾಂ ಗೇಟ್ ನಿರ್ಮಾಣ ಹಾಗೂ ಸುರಕ್ಷತೆ ತಜ್ಞ ನಿವೃತ್ತ ಇಂಜಿನಿಯರ್ ಕನ್ನಯ್ಯ ನಾಯ್ಡು ಅವರಿಗೆ ಹಾಗೂ ಈ ಕಾರ್ಯದಲ್ಲಿ‌ ಅವಿರತ ಶ್ರಮಿಸಿದ ಎಲ್ಲಾ ಇಂಜಿನಿಯರರಿಗೆ, ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ, ಕಾರ್ಮಿಕರಿಗೆ ನಾಡಿನ ರೈತರ ಪರವಾಗಿ ಮತ್ತು ವೈಯಕ್ತಿಕವಾಗಿ ಧನ್ಯವಾದಗಳು ಎಂದು ಟ್ವೀಟ್​ ಮಾಡಿದ್ದಾರೆ.

ಭಾರೀ ಪ್ರಮಾಣದ ನೀರಿನ ಹೊರಹರಿವಿದ್ದರೂ ಗೇಟ್ ಅಳವಡಿಕೆಯಂತಹ ಕಷ್ಟಸಾಧ್ಯವಾದ ಕಾರ್ಯವನ್ನು ಸಾಧ್ಯವಾಗಿಸಿ, ನಾಡಿನ ರೈತರನ್ನು ಆತಂಕದಿಂದ ಮುಕ್ತಗೊಳಿಸಿದ್ದೇವೆ. ತುಂಗಭದ್ರಾ ಜಲಾಶಯದ ನೀರನ್ನು ಆಧರಿಸಿ ಎರಡು ಬೆಳೆ ಬೆಳೆಯುವ ರೈತರು ಇನ್ನು ನಿಶ್ಚಿಂತರಾಗಿ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಬಹುದು. ನಾಡಿನ ಅನ್ನದಾತರು ಬಹುದೊಡ್ಡ ಸಂಕಷ್ಟದಿಂದ ಪಾರಾದದ್ದು ನನಗೆ ಖುಷಿ ನೀಡಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 pm, Sat, 17 August 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!