AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ ವಿತರಣೆ-ಟಿಬಿ ಜಯಚಂದ್ರ

ಮುಂದಿನ ವರ್ಷದ ಜನವರಿಯಲ್ಲಿ ರೈತರಿಂದ ಕುರಿ ಮೇಕೆಗಳನ್ನು ಖರೀದಿಸಿ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮಾಂಸ ಸಂಸ್ಕರಣೆ ಮಾಡಿ ಗ್ರಾಹಕರಿಗೆ ಒದಗಿಸಲಾಗುವುದು. ರೈತರು ಬೆಳೆಸಿರುವ ಕುರಿ ಹಾಗೂ ಮೇಕೆಗಳಿಗೆ ಸ್ಪರ್ಧಾತ್ಮಕ ಬೆಲೆ ನೀಡುವುದು ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ಧ ಮಾಂಸವನ್ನು ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿದರು.

KMF ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ ವಿತರಣೆ-ಟಿಬಿ ಜಯಚಂದ್ರ
ಟಿಬಿ ಜಯಚಂದ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 16, 2023 | 4:46 PM

ಬೆಂಗಳೂರು, ನ.16: ತುಮಕೂರು ಜಿಲ್ಲೆಯ ಶಿರಾದಲ್ಲಿ ಅತ್ಯಾಧುನಿಕ ಕುರಿ-ಮೇಕೆಗಳ ವಧಾಗಾರ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಮುಂದಿನ ವರ್ಷದ ಜನವರಿಯಲ್ಲಿ ಲೋಕಾರ್ಪಣೆ ಮಾಡುವುದಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ(TB Jayachandra) ಅವರು ಹೇಳಿದ್ದಾರೆ. ಇಂದು(ನ.16) ಚೀಲನಹಳ್ಳಿ(Cheelanahalli)  ವಧಾಗಾರ ನಿರ್ಮಾಣದ ಕಾಮಗಾರಿ ಪ್ರಗತಿಗೆ ಸಂಬಂಧಿಸಿದಂತೆ ಟಿ.ಬಿ ಜಯಚಂದ್ರ ಅವರು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ‘ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ ವಧಾಗಾರ ಕೇಂದ್ರವನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸುವ ಕಾರ್ಯ ಮುಗಿದಿದೆ ಎಂದರು.

ರೈತರಿಂದ ಕುರಿ-ಮೇಕೆಗಳ ಖರೀದಿ

ಇನ್ನು ಮುಂದಿನ ವರ್ಷದ ಜನವರಿಯಲ್ಲಿ ರೈತರಿಂದ ಕುರಿ ಮೇಕೆಗಳನ್ನು ಖರೀದಿಸಿ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮಾಂಸ ಸಂಸ್ಕರಣೆ ಮಾಡಿ ಗ್ರಾಹಕರಿಗೆ ಒದಗಿಸಲಾಗುವುದು. ರೈತರು ಬೆಳೆಸಿರುವ ಕುರಿ ಹಾಗೂ ಮೇಕೆಗಳಿಗೆ ಸ್ಪರ್ಧಾತ್ಮಕ ಬೆಲೆ ನೀಡುವುದು ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ಧ ಮಾಂಸವನ್ನು ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ರೈತರ ಮನೆ ಬಾಗಿಲಿಗೆ ತೆರಳಿ ಕುರಿ-ಮೇಕೆಗಳನ್ನು ಖರೀದಿ ಮಾಡಲು ಸಹ ಯೋಜನೆ ರೂಪಿಸುವುದಾಗಿ ತಿಳಿಸಿದರು.

ಇದನ್ನೂ ಓದಿ:ಅಮುಲ್​ನೊಂದಿಗೆ, KMF ನಂದಿನಿಯನ್ನು ವಿಲೀನಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಮಾಧುಸ್ವಾಮಿ

KMF ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ

ಇದೇ ವೇಳೆ ‘ಕೆಎಂಎಫ್ ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸವನ್ನು ಬ್ರಾಂಡ್ ಮಾಡಲಾಗುವುದು. ಕೆಎಂಎಫ್ ಬೂತ್​ನಲ್ಲಿ ಹಾಲಿನ ಎಲ್ಲಾ ಉತ್ಪನ್ನಗಳು ಗ್ರಾಹಕರಿಗೆ ದೊರೆಯುತ್ತಿರುವ ಮಾದರಿಯಲ್ಲಿ ಶುದ್ದವಾದ ಕುರಿ ಮತ್ತು ಮೇಕೆ ಮಾಂಸ ಹಾಗೂ ಕುರಿ ಮಾಂಸದ ಉತ್ಪನ್ನಗಳನ್ನು ಗ್ರಾಹಕರಿಗೆ ಸರಬರಾಜು ಮಾಡುವುದಾಗಿ ಹೇಳಿದರು. KMF ಮಾದರಿಯಲ್ಲಿ ಮಾಂಸ ಮಾರುಕಟ್ಟೆ ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ‌. ಹೈನುಗಾರಿಕೆಯಲ್ಲಿ ರೈತರಿಗೆ ಯಾವ ರೀತಿ ಆದಾಯ ಬರುತ್ತಿದೆಯೋ ಅದೇ ಮಾದರಿಯಲ್ಲಿ ಕುರಿ ಹಾಗೂ ಮೇಕೆ ಸಾಕಾಣಿಕೆಯಲ್ಲಿ ಆದಾಯ ಬರುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ ಎಂದರು.

ಈ ಮೂಲಕ ಗ್ರಾಮೀಣ ಜನತೆಯ ಆರ್ಥಿಕ ಮಟ್ಟವನ್ನ ಸುಧಾರಣೆ ಮಾಡಲಾಗುವುದು‌. ಅಷ್ಟೇ ಅಲ್ಲ, ಸ್ಥಳೀಯ ಯುವಕ ಯುವತಿಯರು ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವುದು ತಮ್ಮ ಈ ಯೋಜನೆಯ ಉದ್ದೇಶವಾಗಿದೆ ಎಂದ ಅವರು, ಕುರಿ ಹಾಗೂ ಮೇಕೆ ಚರ್ಮ ಸಂಸ್ಕರಣೆ ಹಾಗೂ ಅದರ ಉತ್ಪನ್ನಗಳನ್ನು ತಯಾರಿಸಲು ತಮಿಳುನಾಡಿನ ಆಂಬೂರು ಹಾಗೂ ಕೊಲ್ಕತ್ತಾಗೆ ಅಧಿಕಾರಿಗಳನ್ನು ಕಳುಹಿಸಿ ಅಧ್ಯಯನ ಮಾಡಲು ತಿಳಿಸಿರುವುದಾಗಿ ಹೇಳಿದರು.

ಇದನ್ನೂ ಓದಿ:ಹಾಸನ: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ; ಸಾವಿರಾರು ಲೀಟರ್ ಹಾಲು ಚೆಲ್ಲಿ ರೈತರ ಆಕ್ರೋಶ

ಪರಿಸರಕ್ಕೆ ಹಾನಿಯಾಗದಂತೆ ಚರ್ಮ ಸಂಸ್ಕರಣೆ ಮಾಡಬೇಕು ಹಾಗೂ ಸ್ಪರ್ಧಾತ್ಮಕ ಬೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಚರ್ಮದ ಉತ್ಪನ್ನಗಳು ಗ್ರಾಹಕರಿಗೆ ಸಿಗುವಂತಾಗಬೇಕು ಎಂದಿದ್ದಾರೆ. ಒಟ್ಟಾರೆ ರೈತರ ಕುರಿ ಮೇಕೆಗಳಿಗೆ ಉತ್ತಮ ಬೆಲೆ ಸಿಗಬೇಕು ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ಶುದ್ಧವಾದ ಹಾಗೂ ಆರೋಗ್ಯಕರವಾದ ಮಾಂಸವನ್ನು ಸರಬರಾಜು ಮಾಡಬೇಕು ಸ್ಥಳೀಯರಿಗೆ ಉದ್ಯೋಗ ಅವಕಾಶ ಸಿಗಬೇಕು ಎಂಬುದು ತಮ್ಮ ಈ ಮಹತ್ವಾಕಾಂಕ್ಷೆ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಟಿ.ಬಿ ಜಯಚಂದ್ರ ಅವರು ಹೇಳಿದರು. ಈ ವೇಳೆ ಪಶು ಸಂಗೋಪನೆ ಇಲಾಖೆಯ ಕಾರ್ಯದರ್ಶಿಗಳಾದ ಸಲ್ಮಾ ಫಾತಿಮಾ ಹಾಗೂ ಪಶು ಸಂಗೋಪನೆ ಇಲಾಖೆಯ ಹಿರಿಯ ಅಧಿಕಾರಿಗಳಾದ ಡಾ. ಮುರಳಿಧರ್ ಡಾ ಜೆ ಪಂಪಾಪತಿ ಸೇರಿದಂತೆ ಇತರೆ ಅಧಿಕಾರಿಗಳು ಸೇರಿದಂತೆ ಖಾಸಗಿ ಸಹಭಾಗಿತ್ವದ pratha Meatworks pvt Ltd CEO ಸುದರ್ಶನ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ ಎನ್ ಅಭಿಷೇಕ್ ಅವರು ಸಹ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Thu, 16 November 23

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​