ಪ್ರತಿಭಟನೆಗೆ ಫ್ರೀಡಂ ಪಾರ್ಕ್​ಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ, ಮೃತ ದೇಹ ರಾಯಚೂರಿಗೆ ರವಾನೆ

ಮೃತ ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕರಪ್ಪ ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದರು.

ಪ್ರತಿಭಟನೆಗೆ ಫ್ರೀಡಂ ಪಾರ್ಕ್​ಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ, ಮೃತ ದೇಹ ರಾಯಚೂರಿಗೆ ರವಾನೆ
ಶಂಕರಪ್ಪ ಬೋರಡ್ಡಿ
Follow us
TV9 Web
| Updated By: ಆಯೇಷಾ ಬಾನು

Updated on:Feb 23, 2023 | 11:37 AM

ಬೆಂಗಳೂರು: ಪ್ರತಿಭಟನೆಗೆ ಬಂದಿದ್ದ ಶಂಕರಪ್ಪ ಬೋರಡ್ಡಿ(47) ಎಂಬ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿನ್ನೆ(ಫೆ.22) ರಾತ್ರಿ ನಡೆದಿದೆ. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚನಿಗಾಗಿ ನಡೆಯುತ್ತಿರುವ ಅನಿರ್ದಿಷ್ಟವಧಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕ ಶಂಕರಪ್ಪ ಬೆಂಗಳೂರಿಗೆ ಆಗಮಿಸಿದ್ದರು. ಆದ್ರೆ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶಂಕರಪ್ಪ ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಂಕರಪ್ಪ ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದರು. ಬಳಿಕ ರೂಂನಲ್ಲೆ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶಿಕ್ಷಕ ಶಂಕರಪ್ಪ ಬೋರಡ್ಡಿ ಮೃತದೇಹ ಊರಿಗೆ ರವಾನಿಸಲಾಗುತ್ತಿದೆ.

ಶಂಕರಪ್ಪ, ಇದೇ ಫೆಬ್ರವರಿ 20 ರಂದು ಶಾಲೆ ಮುಗಿಸಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು. ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ಬೆಂಗಳೂರಿನಲ್ಲಿರುವ ನಂದಿನಿ ಎನ್ನುವ ಮಹಿಳೆಗೆ 27 ಲಕ್ಷ ಹಣ ನೀಡಿದ್ದರ ಬಗ್ಗೆ ಉಲ್ಲೇಖಿಸಿದ್ದಾರೆ. ಶಂಕರಪ್ಪ, ಸಾಲ ಮಾಡಿ ಮಹಿಳೆಗೆ ಹಣ ನೀಡಿದ್ದ. ಜೊತೆಗೆ ಅನುದಾನಿತ ಶಿಕ್ಷಕರ ಸಮಸ್ಯೆ ಬಗ್ಗೆಯೂ ಉಲ್ಲೇಖಿಸಿದ್ದರು. ಅನುದಾನಿತ ಶಿಕ್ಷಕರಿಗೆ ಪಿಂಚಣಿ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ರಸ್ತೆ ಅಗಲೀಕರಣಕ್ಕೆ ಸ್ಪಂದಿಸದ ಅಧಿಕಾರಿಗಳು, ಒಂದೇ ಗ್ರಾ.ಪಂ 10 ಜನ ಸದಸ್ಯರು ರಾಜೀನಾಮೆ

ಫೈನಾನ್ಸ್​ ಕಂಪನಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಮೈಸೂರು: ನಂಜನಗೂಡು ತಾಲೂಕಿನ ಚಿಕ್ಕಕವಲಂದೆ ಗ್ರಾಮದಲ್ಲಿ ಖಾಸಗಿ ಫೈನಾನ್ಸ್​ ಕಂಪನಿಯ ಕಿರುಕುಳಕ್ಕೆ ಬೇಸತ್ತು ಮಹೇಶ್(44) ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್, ಚೆನ್ನೈ ಮೂಲದ ಫೈನಾನ್ಸ್ ಕಂಪನಿಯಲ್ಲಿ 3.50 ಲಕ್ಷ ಸಾಲ ಪಡೆದಿದ್ದ. ಸಾಲ ಮರುಪಾವತಿಸುವಂತೆ ಕಿರುಕುಳ ಆರೋಪ ಕೇಳಿ ಬಂದಿದ್ದು ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:20 am, Thu, 23 February 23

ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ