AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014-15ರ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ: ಶಿಕ್ಷಣ ಇಲಾಖೆಯ ಹಾಲಿ ಹಾಗೂ ಮಾಜಿ ಅಧಿಕಾರಿಗಳ ಬಂಧನ

Teachers recruitment scam: 2014-15ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಶಿಕ್ಷಣ ಇಲಾಖೆಯ ಹಾಲಿ ಅಧಿಕಾರಿಗಳು ಹಾಗೂ ಮಾಜಿ ಅಧಿಕಾರಿಗಳು ಸೇರಿದಂತೆ ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

2014-15ರ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ: ಶಿಕ್ಷಣ ಇಲಾಖೆಯ ಹಾಲಿ ಹಾಗೂ ಮಾಜಿ ಅಧಿಕಾರಿಗಳ ಬಂಧನ
ಸಿಐಡಿ
TV9 Web
| Updated By: ವಿವೇಕ ಬಿರಾದಾರ|

Updated on:Sep 26, 2022 | 8:53 PM

Share

ಬೆಂಗಳೂರು: 2014-15ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಶಿಕ್ಷಣ ಇಲಾಖೆಯ ಹಾಲಿ ಅಧಿಕಾರಿಗಳು ಹಾಗೂ ಮಾಜಿ ಅಧಿಕಾರಿಗಳು ಸೇರಿದಂತೆ ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

1.  ಗೀತಾ, ನಿರ್ದೇಶಕರು, ಸಮಗ್ರ ಶಿಕ್ಷಣ ಅಭಿಯಾನ

2. ಮಾದೇಗೌಡ, ನಿರ್ದೇಶಕ ಪಠ್ಯ ಪುಸ್ತಕಗಳು

3. ಜಿ.ಆರ್.ಬಸವರಾಜು, Rtd JD (ನಿವೃತ್ತ ಜಂಟಿ ನಿರ್ದೇಶಕ)

4. ಕೆ.ರತ್ನಯ್ಯ,Rtd JD (ನಿವೃತ್ತ ಜಂಟಿ ನಿರ್ದೇಶಕ)

5. ಡಿ.ಕೆ.ಶಿವಕುಮಾರ, Rtd JD (ನಿವೃತ್ತ ಜಂಟಿ ನಿರ್ದೇಶಕ)

ಬಂಧಿತ ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸವ ಹಿನ್ನೆಲೆ ಸಿಐಡಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಘಟನೆ ಹಿನ್ನೆಲೆ

2014-15 ರಲ್ಲಿ ನಡೆದ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಸೌಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 465, 768, 471ರ ಅಡಿ ಎಫ್​ಐಆರ್​ ದಾಖಲಾಗಿತ್ತು. ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ತನಿಕೆ ಆರಂಭಿಸಿದ ಸಿಐಡಿ ಅಧಿಕಾರಿಗಳು  11 ಜನರನ್ನು ಬಂಧಸಿದ್ದಾರೆ. ತುಮಕೂರಿನ ಹತ್ತು ಜನ, ವಿಜಯಪುರದ ಓರ್ವ ಶಿಕ್ಷಕನನ್ನು ಸೆರೆ‌ ಹಿಡಿಯಲಾಗಿತ್ತು.

1. ಶಮೀನಾಜ್, ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಬೋರನ ಕಣಿವೆ, ಚಿಕ್ಕನಾಯಕನಹಳ್ಳಿ.

2. ರಾಜೇಶ್ವರಿ ಜಗ್ಲಿ, ಶಿಕ್ಷಕರು ಸರ್ಕಾರಿ ಪ್ರೌಢಶಾಲೆ, ಕೊಡವತ್ತಿ, ಕುಣಿಗಲ್

3. ಕಮಲಾ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಅಲ್ದೂರ್, ತಿಪಟೂರು

4. ನಾಗರತ್ನ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ನಾಗಸಂದ್ರ ಕುಣಿಗಲ್.

5. ದಿನೇಶ್, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹುಲಿಕಲ್, ತುರುವೇಕೆರೆ.

6. ನವೀನ್ ಹನುಮಗೌಡ, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕಮ್ಲಾಪುರ, ಚಿಕ್ಕನಾಯಕನಹಳ್ಳಿ.

7. ನವೀನ್ ಕುಮಾರ್, ಶಿಕ್ಷಕರು, ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಅಮೃತೂರು ಕುಣಿಗಲ್.

8. ದೇವೇಂದ್ರ ನಾಯ್ಕ್, ಶಿಕ್ಷಕರು, ಸರ್ಕಾರಿ ಕಂಪೋಸಿಟ್ ಪ್ರೌಢಶಾಲೆ ಕೆ.ಮತ್ತಿಘಟ್ಟ ಗುಬ್ಬಿ.

9. ಹರೀಶ್ ಆರ್, ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಹೊಳಗೇರಿಪುರ, ಕುಣಿಗಲ್.

10 ಪ್ರಸನ್ನ ಬಿಎಂ, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಹುಲಿಕೆರೆ, ತುರುವೇಕೆರೆ.

11. ಮಹೇಶ ಶ್ರೀಮಂತ ಸೂಸಲಾಡಿ, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಹತ್ತಳ್ಳಿ,

ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಪ್ರೌಢ ಶಾಲೆಯ ಅಶೋಕ್ ಚೌಹಾಣ್ ಬಂಧಿತ ಶಿಕ್ಷಕ. ಅಶೋಕ್ ಚೌಹಾಣ್ ಮೊದಲು ಚಿತ್ರದುರ್ಗ ಜಿಲ್ಲೆಯ ಜಗಳೂರಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದನು. ಬಳಿಕ ವಿಜಯಪುರ ಜಿಲ್ಲೆಗೆ ವರ್ಗವಾಗಿ ಬಂದಿದ್ದನು. ಅಶೋಕ್ ಚೌಹಾಣ್ ನೇಮಕಾತಿಯಲ್ಲಿ ಬಂಧನವಾದ ಜಿಲ್ಲೆಯ ಮೂರನೇ ಶಿಕ್ಷಕ.

ಈಗಾಗಲೇ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಚಡಚಣ ತಾಲುಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಮಹೇಶ ಸೂಸಲಾದಿ. ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಿದ್ರಾಮಪ್ಪ ಬಿರಾದಾರ್ ಬಂಧಿತ ಶಿಕ್ಷಕರು.

ಅಶೋಕ್ ಚೌಹಾಣ್ 2012-13 ಹಾಗೂ 2014-15 ರ ಸಾಲಿನಲ್ಲಿ ನಡೆಸಲಾಗಿರೊ ಶಿಕ್ಷಕರ ನೇಮಕಾತಿಯ ಸಿಇಟಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹಾಗೂ ನೇಮಕಾತಿಯಾಗಿ ಸೇವೆಗೆ ಹೋಗದವರ ಸ್ಥಾನಕ್ಕೆ ಅಕ್ರಮವಾಗಿ ನೇಮಕವಾಗಿರೋ ಆರೋಪ ಕೇಳಿ ಬಂದಿದೆ. ಅಶೋಕ್ ಚೌಹಾಣ್  ಅನ್ಯ ಜಿಲ್ಲೆಗಳಲ್ಲಿ ನೇಮಕವಾಗಿ ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡಿಕೊಂಡು ಬಂದಿದ್ದಾನೆ.

ದಾವಣಗೆರೆಯಲ್ಲಿ ಮೂವರು ಆರೋಪಿಗಳ ಬಂಧನ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ದಾವಣಗೆರೆಯಲ್ಲಿ ಮೂವರು ಆರೋಪಿಗಳ ಬಂಧಸಿದ್ದಾರೆ.  ಯಾಸ್ಮೀನ್ ಅಫ್ಜಾ, ಚೈತ್ರಾ ಬಿಸಿ, ಅಶೋಕ್ ನಾಯಕ್ ಬಂಧಿತ ಆರೋಪಿಗಳು. ಆರೋಪಿಗಳು ದಾವಣಗೆರೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂವರು ಮೂವರು ಅಕ್ರಮವಾಗಿ ನೇಮಕವಾಗಿದ್ದರು.

10 ಆರೋಪಿಗಳನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್​ 6 ರಂದು ಸಿಐಡಿ  ಅಧಿಕಾರಿಗಳು 10 ಜನ ಆರೋಪಿಗಳನ್ನು ಬಂಧಿಸಿದ್ದರು. ವಿಧಾನಸೌಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 465, 768, 471ರ ಅಡಿ ಎಫ್​ಐಆರ್​ ದಾಖಲಾಗಿತ್ತು. ಎಫ್​ಐಆರ್ ದಾಖಲಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.

ಈ ಸಂಬಂಧ ತನಿಕೆ ಆರಂಭಿಸಿದ್ದ ಸಿಐಡಿ ಅಧಿಕಾರಿಗಳಿಗೆ, ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿ ಅಕ್ರಮದಲ್ಲಿ ಭಾಗಿಯಾದವರಿಗೆ ಶೋಧಕಾರ್ಯ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Mon, 26 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!