ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ತ್ರಿದಿಪ್ ಕೊನ್ವರ್ (28) ಮೃತ ದುರ್ದೈವಿ. ಮೃತ ತ್ರಿದಿಪ್ ಕೊನ್ವರ್ ಬೆಳ್ಳಂದೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಟೆಕ್ಕಿ ತ್ರಿದಿಪ್ ಕೊನ್ವರ್ ಶೋಭಾ ಡಾಲಿಯಾ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದರು.
ಇಂದು (ಆಗಸ್ಟ್ 13) ಬೆಳಗ್ಗೆ 3 ಗಂಟೆ ಸುಮಾರಿಗೆ ಹತ್ತನೇ ಮಹಡಿಯ ಟೆರಸ್ಗೆ ಹೋಗಿದ್ದಾರೆ. ಈ ವೇಳೆ ಟೆರೆಸ್ ಮೇಲಿಂದ ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ
ಬೆಂಗಳೂರು: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ಮಾಕಳಿ ಬಳಿ ನಡೆದಿದೆ. ಬೆಂಗಳೂರಿನ RT ನಗರ ನಿವಾಸಿ ಅಂಜನಿಶಾಂತ(50)ಮೃತ ಮಹಿಳೆ. ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 5:33 pm, Sat, 13 August 22