AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾತನಾದ ಡಿ.ಕೆ. ಶಿವಕುಮಾರ್​​: ಗಮನಸೆಳೆದ BJP ಸಂಸದ ತೇಜಸ್ವಿ ಸೂರ್ಯ ಶುಭಾಶಯದ ಪೋಸ್ಟ್​​

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾತನಾಗಿದ್ದು, ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಶುಭ ಸಂದರ್ಭದಲ್ಲಿ, ವಿಪಕ್ಷ ಸಂಸದ ತೇಜಸ್ವಿ ಸೂರ್ಯ ಅವರು ಡಿಕೆಶಿಗೆ ಶುಭಾಶಯ ಕೋರಿ ಮಾಡಿದ ಎಕ್ಸ್ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ಸಾರ್ವಜನಿಕ ಜೀವನದಲ್ಲಿ ವೈಯಕ್ತಿಕ ಕ್ಷಣಗಳ ಮಹತ್ವವನ್ನು ಈ ಪೋಸ್ಟ್ ಎತ್ತಿ ಹಿಡಿದಿದ್ದು, ತಾತನಾದ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತೇಜಸ್ವಿ ಸೂರ್ಯ ಶುಭಕೋರಿದ್ದಾರೆ.

ತಾತನಾದ ಡಿ.ಕೆ. ಶಿವಕುಮಾರ್​​: ಗಮನಸೆಳೆದ BJP ಸಂಸದ ತೇಜಸ್ವಿ ಸೂರ್ಯ ಶುಭಾಶಯದ ಪೋಸ್ಟ್​​
ತಾತನಾದ ಡಿಕೆಶಿಗೆ ಶುಭಕೋರಿದ ತೇಜಸ್ವಿ ಸೂರ್ಯ
ಪ್ರಸನ್ನ ಹೆಗಡೆ
|

Updated on:May 02, 2026 | 10:57 AM

Share

ಬೆಂಗಳೂರು, ಮೇ 02: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಡಿಕೆಶಿ ಖುಷಿಯಲ್ಲಿ ಆಸ್ಪತ್ರೆಗೆ ಬಂದು ಮೊಮ್ಮಗಳನ್ನು ಮುದ್ದಾಡುವ ಜೊತೆಗೆ ಮಗಳ ಆರೋಗ್ಯ ವಿಚಾರಿಸಿದ್ದರು. ವಿಶೇಷ ಅಂದ್ರೆ ಕಾರ್ಮಿಕ ದಿನಾಚರಣೆ, ಕರ್ನಾಟಕದ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಜನ್ಮದಿನ ಹಾಗೂ ಶುಭ್ರ ಪೂರ್ಣಿಮೆಯ ದಿನವೇ ತಾತನಾಗಿ ಡಿಸಿಎಂ ಭಡ್ತಿ ಪಡೆದಿದ್ದು, ಮಾಧ್ಯಮದವರ ಪ್ರಶ್ನೆಗೆ ಮುಗುಳ್ನಕ್ಕಿ ಸಂತಸ ವ್ಯಕ್ತಪಡಿಸಿದ್ದರು. ಈ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಡಿರುವ ಎಕ್ಸ್​​ ಪೋಸ್ಟ್​​ ನೆಟ್ಟಿಗರ ಗಮನ ಸೆಳೆದಿದೆ.

ಸದಾ ಒಂದಿಲ್ಲೊಂದು ರಾಜಕೀಯ ವಿಚಾರಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಮತ್ತು ಸಂಸದ ತೇಜಸ್ವಿಸೂರ್ಯ ನಡುವೆ ಜಟಾಪಟಿ ನಡೆಯುತ್ತಲೇ ಇರುತ್ತವೆ. ಈ ನಡುವೆಯೂ ಅಭಿವೃದ್ಧಿ ವಿಚಾರ ಬಂದಾಗ ಇಬ್ಬರೂ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಉದಾಹರಣೆಗಳಿವೆ. ಅದರಂತೆ ನಿನ್ನೆಯೂ ವಿವಿಧ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ ನಿಮಿತ್ತ ಡಿಸಿಎಂ ಭಾಗವಹಿಸಿದ್ದ ಕೆಲ ಕಾರ್ಯಕ್ರಮಗಳಲ್ಲಿ ಸಂಸದರೂ ಭಾಗಿಯಾಗಿದ್ದರು. ಈ ವೇಳೆ ತಾನು ತಾತ ಆಗುತ್ತಿದ್ದೇನೆ ಎಂದು ಡಿಕೆಶಿ ತಮ್ಮ ಬಳಿ ಸಂತಸ ಹಂಚಿಕೊಂಡ ವಿಚಾರವನ್ನು ತೇಜಸ್ವಿ ಸೂರ್ಯ ತಮ್ಮ ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ

ಸಂಸದ ತೇಜಸ್ವಿ ಸೂರ್ಯ ಪೋಸ್ಟ್​​ನಲ್ಲಿ ಏನಿದೆ?

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ ಎಂದರು. ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು. The first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ. ತಾತನಾದ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ತೇಜಸ್ವಿ ಸೂರ್ಯ ಎಕ್ಸ್​​ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:54 am, Sat, 2 May 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ