ಹರ್ದೀಪ್ ಸಿಂಗ್ ಪುರಿ ಭೇಟಿ ಮಾಡಿದ ತೇಜಸ್ವಿ ಸೂರ್ಯ: ನಮ್ಮ ಮೆಟ್ರೋಗೆ ಪೂರ್ಣಾವಧಿ ಎಂಡಿ ವಿಚಾರದಲ್ಲಿ ಮಧ್ಯಸ್ಥಿಕೆಗೆ ಮನವಿ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ಪೂರ್ಣಾವಧಿ ಎಂಡಿ ನೇಮಕಕ್ಕೆ ತುರ್ತು ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು, ಜನವರಿ 03: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಬುಧವಾರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದು, ಆ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ಪೂರ್ಣಾವಧಿ ಎಂಡಿ ನೇಮಕಕ್ಕೆ ತುರ್ತು ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ನಮ್ಮ ಮೆಟ್ರೋ ಯೋಜನೆಗಳ ಪರಿಶೀಲನೆಗಾಗಿ ಶೀಘ್ರದಲ್ಲೇ ನಗರಕ್ಕೆ ಭೇಟಿ ನೀಡುವಂತೆ ಮನವಿ ಕೂಡ ಮಾಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮೂಲಕ ಮಾಹಿತಿ ಸಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ‘ಬೆಂಗಳೂರು ಮೆಟ್ರೋಗೆ ಅದರ ಕಾರ್ಯಾಚರಣೆಯನ್ನು ಮುನ್ನಡೆಸಲು ಪೂರ್ಣ ಪ್ರಮಾಣ ಎಂಡಿ ಅವಶ್ಯವಿದೆ. ಪೂರ್ಣ ಪ್ರಮಾಣದ ನಾಯಕರಿಲ್ಲದೆ, ಹಳದಿ ರೇಖೆ ಸೇರಿದಂತೆ ಇತರೆ ನಿರ್ಣಾಯಕ ಕಾರ್ಯಗಳು ವಿಳಂಬವಾಗುತ್ತಿವೆ ಎಂದಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಟ್ವೀಟ್
Bengaluru Metro needs a full-time MD to lead its operations. Without a full-time leader, most of the critical works, including the #YellowLine, is getting delayed.
The state government seems least bothered about the delay and the cost over runs of #NammaMetro, despite multiple… pic.twitter.com/QFIv3oc9tR
— Tejasvi Surya (@Tejasvi_Surya) January 3, 2024
ನಮ್ಮ ಮೆಟ್ರೋ ಕಾರ್ಯಾಚರಣೆಯಲ್ಲಿ ವಿಳಂಬ ಮತ್ತು ವೆಚ್ಚದ ಬಗ್ಗೆ ರಾಜ್ಯ ಸರ್ಕಾರವು ಕನಿಷ್ಠ ತಲೆಕೆಡಿಸಿಕೊಂಡಿಲ್ಲ. ಈ ನಿಟ್ಟಿನಲ್ಲಿ ಇಂದು ನಾನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ಈ ನಿಟ್ಟಿನಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಸಾಧ್ಯವಾದಷ್ಟು ಬೇಗ ಪೂರ್ಣಾವಧಿಯ ಎಂಡಿ ನೇಮಕವನ್ನು ಖಚಿತಪಡಿಸಿಕೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಫೆಬ್ರವರಿ ಒಳಗೆ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಪೂರ್ಣಗೊಳಿಸಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ಯೋಜನೆಗಳ ಸ್ಥಿತಿಯನ್ನು ಪರಿಶೀಲಿಸಲು ಬೆಂಗಳೂರಿಗೆ ಭೇಟಿ ನೀಡುವಂತೆ ನಾನು ಅವರನ್ನು ವಿನಂತಿಸಿದ್ದು, ಶೀಘ್ರದಲ್ಲೇ ನಗರಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ಮೆಟ್ರೋದ ಹಳದಿ ಲೈನ್ ಮಾರ್ಗವನ್ನು ಪೂರ್ಣಗೊಳಿಸುವಲ್ಲಿನ ವಿಳಂಬವನ್ನು ಸಂಸದ ತೇಜಸ್ವಿ ಸೂರ್ಯ ಆಗಾಗ ಧ್ವನಿ ಎತ್ತಿದ್ದರು. ಹಳದಿ ಮಾರ್ಗವು 16 ನಿಲ್ದಾಣಗಳೊಂದಿಗೆ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ 18.8 ಕಿಮೀ ವ್ಯಾಪಿಸಿದೆ.
ಇದು ಬೆಂಗಳೂರು ದಕ್ಷಿಣ ಕ್ಷೇತ್ರದ ಐಟಿಬಿಟಿ ಮತ್ತು ಕೈಗಾರಿಕಾ ಕಾರಿಡಾರ್‌ಗಳನ್ನು ಸಂಪರ್ಕಿಸುತ್ತದೆ. ಅಕ್ಟೋಬರ್ 4, 2023 ರಂದು ಯೆಲ್ಲೋ ಲೈನ್‌ನ ಪ್ರಗತಿಯನ್ನು ಸಂಸದರು ಪರಿಶೀಲಿಸಿದರು. ಇದು ಮೆಟ್ರೋಗಳಿಗೆ ರೋಲಿಂಗ್ ಸ್ಟಾಕ್‌ನೊಂದಿಗೆ ಪೂರೈಕೆ ಸಮಸ್ಯೆಗಳನ್ನು ಬಹಿರಂಗಪಡಿಸಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.