ಗುಂಡಿ, ಧೂಳಿನಿಂದ ಕೂಡಿದ ಬೆಂಗಳೂರಿನ ರಸ್ತೆಗಳು: ಡಿಕೆ ಶಿವಕುಮಾರ್​ಗೆ ತೇಜಸ್ವಿ ಸೂರ್ಯ ಪತ್ರ

ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಓಟಗಾರರು ಕೆಟ್ಟ ರಸ್ತೆಗಳಿಂದಾಗಿ ತೊಂದರೆ ಅನುಭವಿಸಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಗುಂಡಿಗಳು, ಧೂಳು, ಅಪಾಯಕಾರಿ ಪರಿಸ್ಥಿತಿಗಳು ಓಟಗಾರರ ಅನುಭವವನ್ನು ಹಾಳು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರಿನ ರಸ್ತೆಗಳ ಮೂಲಸೌಕರ್ಯ ಸುಧಾರಣೆಗೆ ಅವರು ಒತ್ತಾಯಿಸಿದ್ದಾರೆ.

ಗುಂಡಿ, ಧೂಳಿನಿಂದ ಕೂಡಿದ ಬೆಂಗಳೂರಿನ ರಸ್ತೆಗಳು: ಡಿಕೆ ಶಿವಕುಮಾರ್​ಗೆ ತೇಜಸ್ವಿ ಸೂರ್ಯ ಪತ್ರ
ಸಂಸದ ತೇಜಸ್ವಿ ಸೂರ್ಯ

Updated on: Apr 27, 2025 | 7:14 PM

ಬೆಂಗಳೂರು, ಏಪ್ರಿಲ್​ 27: ಟಿಸಿಎಸ್​ ವರ್ಲ್ಡ್ 10ಕೆ-2025 ಆಯೋಜಿಸಲಾಗಿದ್ದ ಮ್ಯಾರಥಾನ್​ ಆಯೋಜಿಸಿದ್ದ ಅಥ್ಲೀಟ್​ಗಳು ಸುಂದರ ಓಟದ ಬದಲು, ಗುಂಡಿಗಳ ಓಟ, ಧೂಳಿನ ಓಟ, ಅಪಾಯದಿಂದ ಕೂಡಿದ ಓಟ ಎಂಬ ಅನುಭವ ಪಡೆದಿದ್ದು ಬಹಳ ಬೇಸರದ ಸಂಗತಿಯಾಗಿ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ ?

“ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಅವರು
ಭಾನುವಾರ (ಏ.27) ಬೆಳಿಗ್ಗೆ ಟಿಸಿಎಸ್ ವರ್ಲ್ಡ್ 10ಕೆ ಕಾರ್ಯಕ್ರಮದ ಚಾಲನಾ ಸಮಾರಂಭದಲ್ಲಿ ಭಾಗವಹಿಸಿರುವುದು ನೋಡಿ ಸಂತಸವಾಯಿತು. ಈ ತರಹದ ಕಾರ್ಯಕ್ರಮಗಳು ನಮ್ಮ ಬೆಂಗಳೂರಿನ ಬ್ರ್ಯಾಂಡ್ ಮೌಲ್ಯ ಹೆಚ್ಚಿಸುವುದಕ್ಕೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಉತ್ತೇಜಿಸಲು ತೊಡಗಿಸಿಕೊಂಡಿರುವುದು ಗಮನಾರ್ಹ” ಎಂದಿದ್ದಾರೆ.

ಇದನ್ನೂ ಓದಿ
ತೇಜಸ್ವಿ ಸೂರ್ಯ-ಶಿವಶ್ರೀ ಅದ್ಧೂರಿ ಆರತಕ್ಷತೆ ಫೋಟೋ ಅಲ್ಬಂ
HTT 40 ಟ್ರೈನಿ ಏರ್ ಕ್ರಾಫ್ಟ್​ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ
ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ

“ಆದರೆ, ನಾನು ಬೆಂಗಳೂರು ಸಂಸದನಾಗಿ ಮಾತ್ರವಲ್ಲ, ಒಬ್ಬ ಓಟಗಾರನಾಗಿ, ನಾಗರಿಕನಾಗಿ, ಅತ್ಯಂತ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಇಂದು ನಡೆದ ಓಟದಲ್ಲಿ ಜಗತ್ತಿನ ಶ್ರೇಷ್ಠ ಅಥ್ಲೀಟ್ ಗಳು, ಹಿರಿಯ ನಾಗರಿಕರು, ಸಾಮಾನ್ಯ ನಾಗರಿಕರು ಸೇರಿದಂತೆ ಸುಮಾರು 40 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಆದರೆ, ಅವರೆಲ್ಲರೂ ಸುಂದರ ಓಟದ ಬದಲು, ಗುಂಡಿಗಳ ಓಟ, ಧೂಳಿನ ಓಟ, ಅಪಾಯದಿಂದ ಕೂಡಿದ ಓಟ ಎಂಬ ಅನುಭವ ಪಡೆದದ್ದು ಬಹಳ ಬೇಸರದ ಸಂಗತಿ” ಎಂದಿದ್ದಾರೆ.

“ನಗರದ ಹೃದಯವಾಗಿರುವ ಸಿಬಿಡಿ ರಸ್ತೆಗಳ ಪರಿಸ್ಥಿತಿ ಶೋಚನೀಯವಾಗಿದ್ದು, ಒಂದು ಸಣ್ಣ ಸುಗಮ ರಸ್ತೆ ಕೂಡ ಇಲ್ಲದ್ದು. ಎಲ್ಲೆಲ್ಲೂ ಗುಂಡಿಗಳು. ಓಟಗಾರರು ಮುಗ್ಗರಿಸಿದ್ದು ಗಾಯಗೊಂಡಿದ್ದು, ಹಿರಿಯ ನಾಗರಿಕರು ಹೆಜ್ಜೆ ಹಾಕಲು ಹೆದರುವ ಸ್ಥಿತಿ ಉಂಟಾಗಿದ್ದು ಸಮಂಜಸ ಉಂಟು ಮಾಡಿದ್ದು ಸುಳ್ಳಲ್ಲ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಟ್ವಿಟರ್ ಪೋಸ್ಟ್​

“ವೀಲ್‌ಚೇರ್‌ನಲ್ಲಿ ಓಡಿದವರು ಸ್ವಂತ ಶಕ್ತಿಯಿಂದ ಸಾಗಲಾರದೆ, ಅನ್ಯರ ಸಹಾಯ ಪಡೆಯಬೇಕಾದ ಪರಿಸ್ಥಿತಿ ಉಂಟಾಗಿತ್ತು. ಇದರ ಜೊತೆಗೆ ಅನೇಕ ಸ್ಥಳಗಳಲ್ಲಿ ಕಸದ ರಾಶಿಗಳು, ಅನೈರ್ಮೈಲದ ಬದಿಗಳು, ಮುರಿದ ಪಾದಚಾರಿ ಮಾರ್ಗಗಳು ಇವು ಬ್ರ್ಯಾಂಡ್ ಬೆಂಗಳೂರಿನ ಚಿತ್ರಣಗಳಾಗಿದ್ದವು” ಎಂದು ವಾಗ್ದಾಳಿ ಮಾಡಿದ್ದಾರೆ.

“ಇದು ವರ್ಲ್ಡ್ ಅಥ್ಲೆಟಿಕ್ಸ್ ಪ್ರಮಾಣಿತ ಗೋಲ್ಡ್ ಲೇಬಲ್ ಈವೆಂಟ್ ಆಗಿದ್ದು. ಜಗತ್ತಿನ ನೂರಾರು ಅತಿಥಿಗಳು ನಮ್ಮತ್ತ ಗಮನಿಸುತ್ತಿದ್ದು, ಈ ಬಗ್ಗೆ ಸೂಕ್ತ ಗಮನ ಹರಿಸಿ ಬ್ರ್ಯಾಂಡ್ ಬೆಂಗಳೂರಿನ ಮೌಲ್ಯವನ್ನು ಹೆಚ್ಚಿಸುವಂತೆ ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಕೇವಲ 2 ತಿಂಗಳುಗಳ ಹಿಂದೆ ನಾನು ಮುಂಬಯಿಯಲ್ಲಿ ನಡೆದ ಮ್ಯಾರಥಾನ್​ನಲ್ಲಿಯೂ ಭಾಗವಹಿಸಿದ್ದು, ಅಲ್ಲಿನ ಅನುಭವ ಇಷ್ಟೊಂದು ಕಳಪೆ ಆಗಿರಲಿಲ್ಲ ಎಂಬುದು ನನ್ನ ಅಭಿಪ್ರಾಯ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಧಾವಿಸಿದ ಸಂಸದ ತೇಜಸ್ವಿ ಸೂರ್ಯ

“ಕೇವಲ TCS 10ಕೆ ಹಿನ್ನೆಲೆಯಿಂದ ಮಾತ್ರ ನೋಡದೆ, ಬೆಂಗಳೂರು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ತಾವುಗಳು ವಿಶೇಷ ಕಾಳಜಿ ವಹಿಸಿ, ಸಾರ್ವಜನಿಕರ ಅನುಕೂಲಕ್ಕೆ ನಗರದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೋರುತ್ತೇನೆ” ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ