AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ಬೆಂಗಳೂರು ಮೆಟ್ರೋ ದರ ಏರಿಕೆ ಮತ್ತೊಮ್ಮೆ ವಿವಾದದ ಸುಳಿಯಲ್ಲಿದೆ. ಬಿಎಂಆರ್‌ಸಿಎಲ್ ಪ್ರತಿ ವರ್ಷ ಫೆಬ್ರವರಿಯಲ್ಲಿ ಶೇ 5 ಸ್ವಯಂಚಾಲಿತ ದರ ಏರಿಕೆಗೆ ಸಿದ್ಧತೆ ನಡೆಸಿದೆ. ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಹಿಂದಿನ ದರ ಏರಿಕೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಮತ್ತೊಮ್ಮೆ ಮೆಟ್ರೋ ದರ ಏರಿಸಿದಲ್ಲಿ ಹೋರಾಟ ಮಾಡುವುದಾಗಿ ಪ್ರಯಾಣಿಕರ ವೇದಿಕೆಗಳು ಎಚ್ಚರಿಕೆ ನೀಡಿವೆ.

Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ
ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ
Kiran Surya
| Edited By: |

Updated on:Jan 17, 2026 | 10:32 AM

Share

ಬೆಂಗಳೂರು, ಜನವರಿ 17: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ (BMRCL) ಅಧಿಕಾರಿಗಳು ಶೇ 105.5 ರಷ್ಟು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದರವನ್ನು ಶೇ 71.5 ಕ್ಕೆ ಇಳಿಸಲಾಗಿತ್ತು. ಈ ಗೊಂದಲದ ನಡುವೆಯೇ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಅಣಿಯಾಗಿದ್ದು, ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳಿಗೆ ತೇಜಸ್ವಿ ಸೂರ್ಯ ಪತ್ರ

ಪ್ರತಿವರ್ಷ ಫೆಬ್ರವರಿಯಲ್ಲಿ 5% ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್​ಗೆ ಕಳುಹಿಸಲಾಗಿದೆ.

ಇದನ್ನೂ ಓದಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ

ಬಿಎಂಆರ್ಸಿಎಲ್ ವಿರುದ್ಧ ಹೋರಾಟದ ಎಚ್ಚರಿಕೆ

ಇತ್ತ, ಸೇವ್ ಬೆಂಗಳೂರು ಕಮಿಟಿ ಹಾಗೂ ಬೆಂಗಳೂರು ಮೆಟ್ರೋ ಪ್ರಯಾಣಿಕರ ವೇದಿಕೆ ಬಿಎಂಆರ್ಸಿಎಲ್ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಮುಂದಿನ ತಿಂಗಳಿಂದ ದರ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದೆ. ಪದೇಪದೇ ದರ ಏರಿಕೆ ಪ್ರಯಾಣಿಕರ ಮೇಲೆ ಭಾರೀ ಹೊರೆ ಆಗುತ್ತಿದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:26 am, Sat, 17 January 26