AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಾನವನಗಳ ಶೇ.5ರಷ್ಟು ಜಾಗ ಬಳಕೆಗೆ ವಿರೋಧ: ‘ಬೆಂಗಳೂರಿನ ಹಸಿರನ್ನು ಮಾರಾಟಕ್ಕಿಡಬೇಡಿ’ ಸಿಎಂಗೆ ತೇಜಸ್ವಿ ಸೂರ್ಯ ಪತ್ರ

ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರ ಉದ್ದೇಶಗಳಿಗೆ ಮೀಸಲಿಡುವ ರಾಜ್ಯ ಸರ್ಕಾರದ ತೀರ್ಮಾನವನ್ನು ಹಿಂಪಡೆಯುವಂತೆ ಸಿಎಂ ಡಿಕೆ‌ ಶಿವಕುಮಾರ್​ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆಯುವ ಮೂಲಕ ಆಗ್ರಹಿಸಿದ್ದಾರೆ. ಈ ಕ್ರಮವು ಬೆಂಗಳೂರಿನ 'ಗಾರ್ಡನ್ ಸಿಟಿ' ಹೆಗ್ಗಳಿಕೆಗೆ ಧಕ್ಕೆ ತರಲಿದೆ ಎಂದಿದ್ದಾರೆ.

ಉದ್ಯಾನವನಗಳ ಶೇ.5ರಷ್ಟು ಜಾಗ ಬಳಕೆಗೆ ವಿರೋಧ: ‘ಬೆಂಗಳೂರಿನ ಹಸಿರನ್ನು ಮಾರಾಟಕ್ಕಿಡಬೇಡಿ’ ಸಿಎಂಗೆ ತೇಜಸ್ವಿ ಸೂರ್ಯ ಪತ್ರ
ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯImage Credit source: tv9 kannada
ಕಿರಣ್​ ಹನಿಯಡ್ಕ
| Edited By: |

Updated on:Aug 22, 2026 | 10:35 PM

Share

ಬೆಂಗಳೂರು, ಆಗಸ್ಟ್​​ 22: ರಾಜ್ಯದ ಸರ್ಕಾರಿ ಉದ್ಯಾನವನಗಳ ಜಾಗವನ್ನು ಇತರೆ ಸಾರ್ವಜನಿಕ ಉದ್ದೇಶಗಳಿಗೂ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ತಿದ್ದುಪಡಿ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ಈ ಜನವಿರೋಧಿ ತೀರ್ಮಾನವನ್ನು ತಕ್ಷಣವೇ ಹಿಂಪಡೆಯುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಸಿಎಂ ಡಿ.ಕೆ. ಶಿವಕುಮಾರ್​ಗೆ (DK Shivakumar) ಪತ್ರದ ಮೂಲಕ ಆಗ್ರಹಿಸಿದ್ದಾರೆ. ನಗರದ ಹಸಿರು ವಲಯ ಹಾಗೂ ಸಾರ್ವಜನಿಕರ ಶ್ವಾಸಕೋಶದಂತಿರುವ ಉದ್ಯಾನವನಗಳ ಜಾಗವನ್ನು ಇತರ ಯೋಜನೆಗಳಿಗೆ ಬಲಿ ಕೊಡುವುದು ಪರಿಸರ ಮತ್ತು ನಾಗರಿಕರ ಹಿತದೃಷ್ಟಿಯಿಂದ ಮಾರಕವಾಗಲಿದ್ದು, ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್​ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಈ ಕುರಿತಾಗಿ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ‘ಸಿಎಂ ಡಿಕೆ ಶಿವಕುಮಾರ್ ಅವರೇ, ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಐತಿಹಾಸಿಕ ಬೆಂಗಳೂರಿನ ಭವಿಷ್ಯವನ್ನೇ ಹಾಳು ಮಾಡಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ? ಬೆಂಗಳೂರು ‘ಗಾರ್ಡನ್ ಸಿಟಿ’ ಎಂಬ ಹೆಗ್ಗಳಿಕೆಯನ್ನು ಗಳಿಸಿದ್ದು ನಿಮ್ಮ ಸರ್ಕಾರದ ಭಿಕ್ಷೆಯಿಂದಲ್ಲ, ತಲೆಮಾರುಗಳ ಜನರ ಪರಿಶ್ರಮದಿಂದ, ಉಳಿದಿರುವ ಹಸಿರಿನಿಂದ. ಇಂದು ಅದೇ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ಮಾಡಿಕೊಡುವ ಮೂಲಕ ಬೆಂಗಳೂರಿನ ಭವಿಷ್ಯವನ್ನೇ ಹಾಳುಗೆಡವಲು ಹೊರಟಿದ್ದೀರಿ’ ಎಂದು ಕಿಡಿಕಾರಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್ 

‘ಪಾರ್ಕ್‌ಗಳು ರಿಯಲ್ ಎಸ್ಟೇಟ್‌ಗಾಗಿ ಮೀಸಲಿಟ್ಟ ಖಾಲಿ ಜಾಗವಲ್ಲ. ಅವು ಬೆಂಗಳೂರಿನ ಶ್ವಾಸಕೋಶ. ಈಗಾಗಲೇ ಕಾಂಕ್ರೀಟೀಕರಣ, ವಾಯುಮಾಲಿನ್ಯ, ಹೆಚ್ಚುತ್ತಿರುವ ನಗರ ಉಷ್ಣತೆ ಹಾಗೂ ಮಳೆನೀರು ಸಮಸ್ಯೆಯಿಂದ ಬೆಂಗಳೂರು ನಲುಗುತ್ತಿದೆ. ಇಂತಹ ಸಂದರ್ಭದಲ್ಲಿ ಉಳಿದಿರುವ ಹಸಿರು ಪ್ರದೇಶಗಳ ಮೇಲೂ ಕಣ್ಣು ಹಾಕುವುದು ಯಾವ ರೀತಿಯ ಅಭಿವೃದ್ಧಿ? ಇಂದು 5% ಜಾಗಕ್ಕೆ ಬಾಗಿಲು ತೆರೆದರೆ, ನಾಳೆ ಮತ್ತಷ್ಟು ಹಸಿರು ಪ್ರದೇಶಗಳ ಮೇಲೆ ಇದೇ ಒತ್ತಡ ಬರಲಿದೆ. ಒಮ್ಮೆ ಪಾರ್ಕ್ ಕಳೆದುಕೊಂಡರೆ, ಅದನ್ನು ಮತ್ತೆ ಸೃಷ್ಟಿಸಲು ಸಾಧ್ಯವಿಲ್ಲ. ಯಾವುದೇ ಯೋಜನೆಗೆ ಜಾಗ ಬೇಕಿದ್ದರೆ ಪರ್ಯಾಯ ಸರ್ಕಾರಿ ಜಾಗಗಳನ್ನು ಹುಡುಕಿ. ಬೆಂಗಳೂರಿನ ಹಸಿರನ್ನೇ ಬಲಿಕೊಡುವ ಸುಲಭ ದಾರಿ ಹಿಡಿಯಬೇಡಿ’ ಎಂದಿದ್ದಾರೆ.

ಇದನ್ನೂ ಓದಿ: ಉದ್ಯಾನವನಗಳ ಮೇಲೆ ಸರ್ಕಾರದ ಕಣ್ಣು: ಶೇ 5ರಷ್ಟು ಜಾಗ ಸಾರ್ವಜನಿಕ ಬಳಕೆಗೆ, ಬೆಂಗಳೂರಿಗರ ತೀವ್ರ ವಿರೋಧ

‘ಕೆಂಪೇಗೌಡರು ಕಟ್ಟಿದ ಬೆಂಗಳೂರು, ತಲೆಮಾರುಗಳು ಉಳಿಸಿದ ಬೆಂಗಳೂರು ಯಾರೊಬ್ಬರ ರಿಯಲ್ ಎಸ್ಟೇಟ್ ಪ್ರಯೋಗಾಲಯವಲ್ಲ. ಬೆಂಗಳೂರು ನಿಮ್ಮ ರಾಜಕೀಯ ಪ್ರಯೋಗಗಳಿಗೆ, ನಿಮ್ಮ ಸರ್ಕಾರದ ಅಸಮರ್ಥ ಯೋಜನೆಗಳಿಗೆ ಅಥವಾ ರಿಯಲ್ ಎಸ್ಟೇಟ್ ಲಾಬಿಯ ಹಿತಾಸಕ್ತಿಗಳಿಗೆ ಬಲಿಯಾಗಲು ನಾವು ಬಿಡುವುದಿಲ್ಲ. ಡಿಕೆ ಶಿವಕುಮಾರ್ ಅವರೇ, ಬೆಂಗಳೂರಿನ ಹಸಿರನ್ನು ಮಾರಾಟಕ್ಕಿಡುವ ನಿರ್ಧಾರವನ್ನು ತಕ್ಷಣ ಹಿಂಪಡೆಯಿರಿ. ಅಭಿವೃದ್ಧಿ ಹೆಸರಿನಲ್ಲಿ ಬೆಂಗಳೂರಿನ ಉಸಿರನ್ನು ಕಸಿದುಕೊಳ್ಳಲು ಯಾವುದೇ ಕಾರಣಕ್ಕೂ ಬೆಂಗಳೂರಿನ ಜನತೆ ಸಿದ್ಧರಿಲ್ಲ’ ಎಂದು ಹೇಳಿದ್ದಾರೆ.

ಗಾರ್ಡನ್ ಸಿಟಿ ಇತಿಹಾಸದ ಪುಟಗಳಲ್ಲಿ ಉಳಿಯುವ ಅಪಾಯ

‘ಈ ಕ್ರಮಕ್ಕೆ ತಡೆ ಹಾಕುವಂತೆ ಹಾಗೂ ವಿಷಯವನ್ನು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪ್ರಬಲವಾಗಿ ಪ್ರಸ್ತಾಪಿಸಿ, ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ನಾನು ಮನವಿ ಮಾಡಿದ್ದೇನೆ. ಇಂದು ಶೇ.5 ಎನ್ನುತ್ತಾರೆ. ನಾಳೆ ಇನ್ನಷ್ಟು ಜಾಗಕ್ಕೆ ಬೇಡಿಕೆ ಬರಬಹುದು. ಹೀಗೆ ಹಂತ ಹಂತವಾಗಿ ಉದ್ಯಾನವನಗಳ ವಾಣಿಜ್ಯೀಕರಣಕ್ಕೆ ಬಾಗಿಲು ತೆರೆದರೆ, ಬೆಂಗಳೂರಿನ ‘ಗಾರ್ಡನ್ ಸಿಟಿ’ ಎಂಬ ಹೆಗ್ಗಳಿಕೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿಯುವ ಅಪಾಯವಿದೆ’ ಎಂದಿದ್ದಾರೆ.

ಇದನ್ನೂ ಓದಿ: ಹಳ್ಳ ಹಿಡಿದ ಬಿ-ಖಾತೆಯಿಂದ ಎ-ಖಾತೆ ನೀಡುವ ಯೋಜನೆ: ಆಗಿದ್ದೇನು?

‘ಉದ್ಯಾನವನ ಎಂದರೆ ಕೇವಲ ಖಾಲಿ ಜಾಗವಲ್ಲ. ಅದು ಮಕ್ಕಳ ಆಟದ ಮೈದಾನ. ವಯೋವೃದ್ಧರ ನಡಿಗೆಯ ಸ್ಥಳ. ಜನರ ಆರೋಗ್ಯದ ಆಧಾರ. ನಗರದ ಪರಿಸರದ ರಕ್ಷಣಾ ಕವಚ. ಈ ಕುರಿತು ಪಕ್ಷಾತೀತವಾಗಿ ವಿರೋಧಿಸುವ ಅನಿವಾರ್ಯತೆ ಇದ್ದು, ಇದು ನಮ್ಮೆಲ್ಲರ ನೈತಿಕ ಜವಾಬ್ದಾರಿ ಕೂಡ’ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Sat, 22 August 26

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್