ಮತ್ತೆ ತೃತೀಯ ರಂಗ ರಚನೆಗೆ ಜೋತು ಬಿದ್ದರಾ? ತೆಲಂಗಾಣ ಸಿಎಂ – ದೇವೇಗೌಡರ ಭೇಟಿ ತೃತೀಯ ರಂಗ ರಚನೆ ಮೊದಲ ಹಂತ ಎಂದ ಹೆಚ್ಡಿ ಕುಮಾರಸ್ವಾಮಿ

ರಾಜಕೀಯದ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಹೆಚ್ಡಿ ದೇವೇಗೌಡರು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಭೇಟಿ ಮಾಡುತ್ತಿದ್ದಾರೆ. ಎಲ್ಲ ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ಬಗ್ಗೆ ಚರ್ಚಿಸಲು ಬಂದಿರಬಹುದು. ಸದ್ಯ ಎಲ್ಲಾ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ.

ಮತ್ತೆ ತೃತೀಯ ರಂಗ ರಚನೆಗೆ ಜೋತು ಬಿದ್ದರಾ? ತೆಲಂಗಾಣ ಸಿಎಂ - ದೇವೇಗೌಡರ ಭೇಟಿ ತೃತೀಯ ರಂಗ ರಚನೆ ಮೊದಲ ಹಂತ ಎಂದ ಹೆಚ್ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on:May 26, 2022 | 5:57 PM

ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮತ್ತೆ ತೃತೀಯ ರಂಗ ರಚನೆ ಸುಳಿವು ನೀಡಿದ್ದಾರೆ. ತೆಲಂಗಾಣ ಸಿಎಂ ಮತ್ತು ದೇವೇಗೌಡರ ಸಂಬಂಧ ತುಂಬಾ ಅನೋನ್ಯವಾಗಿದೆ. ರಾಜಕೀಯದ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಹೆಚ್ಡಿ ದೇವೇಗೌಡರು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಭೇಟಿ ಮಾಡುತ್ತಿದ್ದಾರೆ. ಎಲ್ಲ ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ಬಗ್ಗೆ ಚರ್ಚಿಸಲು ಬಂದಿರಬಹುದು. ಸದ್ಯ ಎಲ್ಲಾ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ. ದೇವೇಗೌಡರ ಭೇಟಿ ವೇಳೆ ತೃತೀಯ ರಂಗ ರಚನೆ ಬಗ್ಗೆ ಚರ್ಚೆ ಆಗಬಹುದು. ಈ ಭೇಟಿ ತೃತೀಯ ರಂಗ ರಚನೆ ಮೊದಲ ಹಂತವಾಗಿದೆ ಎಂದು ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈಗಾಗಲೇ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸಲು H.D.ದೇವೇಗೌಡರ ಮಾರ್ಗದರ್ಶನ ಪಡೆಯಲು ಕೆಸಿಆರ್ ಬರುತ್ತಿದ್ದಾರೆ. ಜೆಡಿಎಸ್ ಮುಗಿದೇ ಹೋಯಿತು, ಮುಳುಗಿದ ಹಡಗು ಎಂದು ಹೇಳುವ ಕಾಂಗ್ರೆಸ್ & ಬಿಜೆಪಿ ನಾಯಕರಿಗೆ ಇಲ್ಲಿಂದಲೇ ಉತ್ತರ ಕೊಡುತ್ತೇವೆ ಎಂದು ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ವಿರುದ್ಧ ಸಿಎಂ ಕೆ.ಚಂದ್ರಶೇಖರ್ ರಾವ್‌ ವಾಗ್ದಾಳಿ ಕೇಂದ್ರಸರ್ಕಾರ, ದೇಶದ ಸಮಸ್ಯೆ ಬಗ್ಗೆ HDD ಜತೆ ಚರ್ಚಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಹೆಚ್‌ಡಿಡಿ ಭೇಟಿ ಬಳಿಕ ಸಿಎಂ ಕೆಸಿಆರ್‌ ಹೇಳಿದ್ರು. ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಉಜ್ವಲ ಭಾರತ ನಮಗೆ ಬೇಕಿದೆ, ಈ ಬಗ್ಗೆ ಗಮನಹರಿಸಬೇಕು. ಭರವಸೆಗಳನ್ನ ಸಾಕಷ್ಟು ಕೊಡಬಹುದು ಇದನ್ನು ಈಡೇರಿಸಿದ್ದಾರಾ? ಯುವಕರಿಗೆ ಉದ್ಯೋಗ ಕೊಟ್ರಾ?, ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಕೆ.ಚಂದ್ರಶೇಖರ್ ರಾವ್‌ ವಾಗ್ದಾಳಿ ನಡೆಸಿದ್ದಾರೆ. ಶೀಘ್ರವೇ ದೇಶದಲ್ಲಿ ಬದಲಾವಣೆ ಆಗಲಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಸೇರಿ ಪ್ರಯತ್ನ ನಡೆಸುತ್ತಿದ್ದೇವೆ. ಕರ್ನಾಟಕದ ರಾಜಕೀಯ ಬಗ್ಗೆಯೂ ನನಗೆ ಗೊತ್ತಿದೆ. ಕರ್ನಾಟಕ ವಿಧಾನಸಭೆಯ ಚುನಾವಣೆ ಸಮೀಪಿಸುತ್ತಿದೆ ಎಂದರು.

ತೃತೀಯ ರಂಗ ರಚನೆಯ ಕನಸಿನಲ್ಲಿ ಬೆಂಗಳೂರಿಗೆ ತೆಲಂಗಾಣ ಸಿಎಂ ಕೆಸಿಆರ್: ಹೈದರಾಬಾದ್​ಗೆ ಮೋದಿ ಬಂದರೂ ಆಗುತ್ತಿಲ್ಲ ಭೇಟಿ ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಮೇ 26) ಹೈದರಾಬಾದ್​ಗೆ ಭೇಟಿ ನೀಡಿ, ಭಾರತೀಯ ವಾಣಿಜ್ಯ ಸಂಸ್ಥೆಯ (Indian School of Business – ISB) 20ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಯಾವುದೇ ರಾಜ್ಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಮುಖ್ಯಮಂತ್ರಿಯನ್ನು ಸ್ವಾಗತಿಸಬೇಕಾದ್ದು ಶಿಷ್ಟಾಚಾರ. ಆದರೆ ಈ ಬಾರಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್ ಈ ಶಿಷ್ಟಾಚಾರ ಉಲ್ಲಂಘಿಸಿ, ಬೆಂಗಳೂರಿಗೆ ತೆರಳಿದ್ದಾರೆ. 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜಕೀಯ ಚಟುವಟಿಕೆ ಚುರುಕುಗೊಳಿಸಿರುವ ಕೆಸಿಆರ್, ಬಿಜೆಪಿ ವಿರುದ್ಧ ಕಾಂಗ್ರೆಸ್ಸೇತರ ಪಕ್ಷಗಳನ್ನು ಸಂಘಟಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: PM Modi in Hyderabad: ಹೈದರಾಬಾದಿನಲ್ಲಿ ಯೋಗಿ ಆದಿತ್ಯನಾಥರನ್ನು ಹೊಗಳಿ, KCR ಕುಟುಂಬವಾದಕ್ಕೆ ಛೀಮಾರಿ ಹಾಕಿದ ಪ್ರಧಾನಿ ಮೋದಿ! ಇನ್ನೂ ಏನು ಹೇಳಿದರು?

ಕಳೆದ ನಾಲ್ಕು ತಿಂಗಳಲ್ಲಿ ಎರಡನೇ ಬಾರಿ ಮೋದಿ ಅವರ ಭೇಟಿಯನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಕಳೆದ ಫೆಬ್ರುವರಿ 5ರಂದು ರಾಮಾನುಜಾಚಾರ್ಯರ ಬೃಹತ್ ಪ್ರತಿಮೆ ಅನಾವರಣಗೊಳಿಸಲೆಂದು ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್​ಗೆ ಬಂದಿದ್ದರು. ಅಂದೂ ಸಹ ಮೋದಿ ಅವರನ್ನು ಕೆಸಿಆರ್ ಭೇಟಿಯಾಗಿರಲಿಲ್ಲ.

Published On - 5:21 pm, Thu, 26 May 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್