ಬೆಂಗಳೂರು: ಸಿಎಂ ಮನೆಗೆ ಬರಬೇಕೇಂದು ದೇವಿ ಸೂಚನೆ ಕೊಟ್ಟಿದ್ದಾಳೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ದೇವರ ಉತ್ಸವ ಮೂರ್ತಿ ಜತೆಗೆ ದೇವಸ್ಥಾನದ ಆಡಳಿತ ಮಂಡಳಿ ಬಂದಿದ್ದಾರೆ. ದೇವಿ ಸೂಚನೆಯಂತೆ ಸಿಎಂ ಬೊಮ್ಮಾಯಿ ಅವರಿಗೆ ದೇವಿ ವಿಗ್ರಹ ನೀಡಲು ತಂದಿರುವುದಾಗಿ ಕೆಂಗೇರಿ ಬಳಿಯ ಹೆಚ್. ಗೊಲ್ಲಹಳ್ಳಿಯ ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ. ಆದರೆ ಸಿಎಂ ಭೇಟಿಗೆ ಅವಕಾಶ ನೀಡದ ಹಿನ್ನೆಲೆ ಬೇಸರದಿಂದ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ವಾಪಾಸ್ ಆಗಿದ್ದಾರೆ.
ಸಂಪೂರ್ಣ ಭರ್ತಿಯಾದ ಆಲಮಟ್ಟಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಂಪೂರ್ಣ ಭರ್ತಿಯಾದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಡ್ಯಾಂಗೆ ಸಿಎಂ ಪೂಜೆ ಸಲ್ಲಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ ನಿರಾಣಿ, ಉಮೇಶ ಕತ್ತಿ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎ. ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಾಥ್ ನೀಡಿದ್ದಾರೆ.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ಮೂಲಕ ಇಂದು ಆಗಮಿಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದು, ಆಲಮಟ್ಟಿ ಬಳಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರದ ಆವರಣದಲ್ಲಿನ ಹೆಲಿಪ್ಯಾಡ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲುಪಿದ್ದಾರೆ. ಸಿಎಂಗೆ ಪೊಲೀಸ್ ಪಡೆ ಗೌರವ ವಂದನೆ ನೀಡಿದ್ದಾರೆ.
ಗಂಗಾ ಪೂಜೆ ಬಳಿಕ ಜನಪ್ರನಿಧಿಗಳ ಭೇಟಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿ ವೀಕ್ಷಿಸಲಿದ್ದು, ಸೂಕ್ತ ಪರಿಹಾರ ಘೋಷಣೆ ಮಾಡುವ ನಿರೀಕ್ಷೆ ಇದೆ.
ಇದನ್ನೂ ಓದಿ:
ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ರಾಖಿ ಕಟ್ಟಿದ ಬ್ರಹ್ಮಕುಮಾರಿ ಸಹೋದರಿಯರು
ಬಸವರಾಜ ಬೊಮ್ಮಾಯಿ ಪೂರ್ಣಾವಧಿ ಪೂರೈಸುವುದಿಲ್ಲ; ಗಡ್ಡಧಾರಿಯೋರ್ವರು ಮುಂದಿನ ಸಿಎಂ ಆಗ್ತಾರೆ: ಭವಿಷ್ಯವಾಣಿ
Published On - 9:57 am, Tue, 24 August 21