Karnataka Rains: ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ಸಿಎಂ ಬೊಮ್ಮಾಯಿ ಘೋಷಣೆ
ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಅದರಲ್ಲೂ 13 ತಾಲೂಕುಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಆಗಿದೆ. ಭೂಕುಸಿತ ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಸೂಚಿಸಿದ್ದೇವೆ. ರಸ್ತೆ ಹಾನಿಯ ಬಗ್ಗೆಯೂ ಕೂಡಲೇ ವರದಿ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವ ಮಳೆ(Karnataka Rain), ಪ್ರಕೃತಿ ವಿಕೋಪ ಹಿನ್ನೆಲೆ ಮಳೆ ಹಾನಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದ್ದು ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರು, 13 ಡಿಸಿಗಳು, ಜಿ.ಪಂ ಸಿಇಒ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. 13 ಜಿಲ್ಲೆಯಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ್ರು. ವಿಡಿಯೋ ಕಾನ್ಫರೆನ್ಸ್ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮಳೆಯಿಂದ ಜೂನ್ 1ರಿಂದ 12 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯಿದ 62 ಜಾನುವಾರು ಮೃತಪಟ್ಟಿವೆ. ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ಪರಿಹಾರ ನೀಡಲಾಗುವುದು. ಅಧಿಕಾರಿಗಳು ವರದಿ ನೀಡಿದ ಬಳಿಕ ಮನೆ ಹಾನಿಗೆ ತಕ್ಕಂತೆ ಮುಂದೆ ಹೆಚ್ಚುವರಿ ಪರಿಹಾರ ನೀಡುತ್ತೇವೆ. ಕಳೆದ 3-4 ದಿನಗಳಿಂದ ವಾಡಿಕೆಗಿಂತ ಅತಿ ಹೆಚ್ಚು ಮಳೆ ಆಗಿದೆ.
ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಅದರಲ್ಲೂ 13 ತಾಲೂಕುಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಆಗಿದೆ. ಭೂಕುಸಿತ ಪ್ರದೇಶಗಳಲ್ಲಿ ಜನರ ಸ್ಥಳಾಂತರಕ್ಕೆ ಸೂಚಿಸಿದ್ದೇವೆ. ರಸ್ತೆ ಹಾನಿಯ ಬಗ್ಗೆಯೂ ಕೂಡಲೇ ವರದಿ ನೀಡಲು ಸೂಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಸೂಚಿಸಿದ್ದೇವೆ. ಮತ್ತಷ್ಟು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಡ್ಯಾಂಗಳಿಂದ ನೀರು ಬಿಡುಗಡೆ ಮುನ್ನ ತಿಳಿಸುವಂತೆ ನೆರೆಯ ಮಹಾರಾಷ್ಟ್ರದ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.
ಮಳೆ ಪೀಡಿತ ಜಿಲ್ಲೆಗಳಲ್ಲಿ ಟೀಮ್ ಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಲಾಗಿದೆ. ಬಿದ್ದಿರೋ ಎಲೆಕ್ಟ್ರಿಕ್ ಪೊಲ್ಸ್ ಗಳನ್ನ ರಿಸ್ಟೋರ್ ಮಾಡಬೇಕು. ಮಳೆ ನಿಂತ ಮೇಲೆ ಬೆಳೆ ಹಾನಿ ಕೊಡಲು ಸೂಚಿಸಿದ್ದೇನೆ. ಕಡಲ ಕೊರತೆಯನ್ನ ಟೆಕ್ನಾಲಜಿ ಮೂಲಕ ಪರ್ಮೆನೆಂಟ್ ಸಲೂಷನ್ ಮಾಡಬೇಕು ಎಂಬ ಚಿಂತನೆ ಇದೆ ಎಂದರು.
ಮಳೆಹಾನಿ ಪರಿಹಾರಕ್ಕೆ 55 ಕೋಟಿ ರೂ ಹಣ ಬಿಡುಗಡೆ ಮಾಡಿದ ಸರ್ಕಾರ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮಳೆಹಾನಿ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ಸರ್ಕಾರದಿಂದ ಹೆಚ್ಚುವರಿಯಾಗಿ 55 ಕೋಟಿ ಹಣ ರಿಲೀಸ್ ಮಾಡಲಾಗಿದೆ. ಡಿಸಿಗಳ ಖಾತೆಗೆ ಕಂದಾಯ ಇಲಾಖೆಯಿಂದ ಹಣ ರಿಲೀಸ್ ಮಾಡಲಾಗಿದ್ದು ಈಗಾಗಲೇ ಡಿಸಿಗಳ ಖಾತೆಯಲ್ಲಿ 680.59 ಕೋಟಿ ರೂ. ಹಣ ಜಮೆಯಾಗಿದೆ.
Published On - 6:35 pm, Fri, 8 July 22