ಬೆಂಗಳೂರು, (ಡಿಸೆಂಬರ್ 01): ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat Email)ಹಾಕಲಾಗಿದ್ದು, ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇ-ಮೇಲ್ ಬೆದರಿಕೆ ಪ್ರತಿ ಟಿ9ಗೆ ಲಭ್ಯವಾಗಿದ್ದು, ಮುಜಾಹಿದ್ದಿನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಕೂಡ ಅಲ್ಲಾಹುವಿನ ವಿರೋಧಿಗಳು. ನೀವೆಲ್ಲರೂ ಸಾಯಲು ಸಿದ್ಧರಾಗಿರಿ ’ಎಂದು ಇಮೇಲ್ನಲ್ಲಿ ಬರೆಯಲಾಗಿದೆ.
ಆದ್ರೆ, ಮುಜಾಹಿದ್ದಿನ್ ಯಾರು? ಎಲ್ಲಿಂದ ಈ ಇ-ಮೇಲ್ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಿಂದೂ-ಮುಸ್ಲಿಂ ಗಲಾಟೆಗಳ ಮಧ್ಯೆ ಈ ರೀತಿ ಬೆದರಿ ಹಾಕಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ಹಿಂದೆ ಅನೇಕ ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಆದ್ರೆ, ಬಾರಿ ಉಗ್ರವಾದ ಪದಗಳೊಂದಿಗೆ ಬೆದರಿಕೆ ಬಂದಿದ್ದು, ಆರಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಸವೇಶ್ವರ ನಗರದ ಶಾಲೆಯ ಮೂಲೆ ಮೂಲೆಯಲ್ಲಿ ತಪಾಸಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ: Bomb Threat: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!
ಶಾಲೆ ಮೈದಾನದಲ್ಲಿ ಸ್ಫೋಟಕಗಳನ್ನು ಇರಿಸಿದ್ದೇವೆ. ನವೆಂಬರ್ 26ರಂದು ಅಲ್ಲಾಹನ ಮಾರ್ಗದಲ್ಲಿ ನಮ್ಮ ಹುತಾತ್ಮರು ನೂರಾರು ಮೂರ್ತಿ ಪೂಜಕರನ್ನು ಹತ್ಯೆ ಮಾಡಿದ್ದಾರೆ. ಲಕ್ಷಾಂತರ ಕಾಫಿರರ ಕುತ್ತಿಗೆಗೆ ಕತ್ತಿ ಹಿಡಿಯೋದರಲ್ಲಿ ಅವರು ಶಕ್ತಿಶಾಲಿಗಳಾಗಿದ್ದಾರೆ. ಅವನು ವಿಫಲನಾಗಿ ಬೀಳುತ್ತಾನೆ. ನೂರಾರು ಮುಜಾಹಿದ್ಗಳು ಅಲ್ಲಾಹನ ಮಾರ್ಗದಲ್ಲಿ ಹೋರಾಡಲು ಸಜ್ಜಾಗಿದ್ದೇವೆ. ನೀವೆಲ್ಲರೂ ಅಲ್ಲಾಹನ ಶತ್ರುಗಳು. ನಾವು ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಹತ್ಯೆ ಮಾಡುತ್ತೇವೆ. ನೀವು ನಮ್ಮ ಗುಲಾಮರಾಗದೆ ಬೇರೆ ಆಯ್ಕೆಗಳಿಲ್ಲ. ಅಲ್ಲಾಹನ ನೈಜ ಧರ್ಮವನ್ನು ಸ್ವೀಕರಿಸಿ. ಬಿಸ್ಮಿಲ್ಲಾಹ್, ನಾವು ಇಡೀ ಭಾರತದಲ್ಲಿ ಅಲ್ಲಾಹನ ನೈಜ ಧರ್ಮವನ್ನು ಎಲ್ಲೆಡೆ ಹರಡಲಿದ್ದೇವೆ. ನಾವು ನಿಮ್ಮ ಮೇಲೆ ದಾಳಿಕೋರರನ್ನು ಕಳಿಸಿದ್ದು,.ನಿಮ್ಮನ್ನು ಮುಳುಗಿಸಲು ಬರುತ್ತಿದ್ದೇವೆ. ಬಿಸ್ಮಿಲ್ಲಾಹ್, ನಾಳೆ ಪ್ರಪಂಚದಾದ್ಯಂತ ಸಾವಿರಾರು ಝಿಯೋನಿಸ್ಟ್ಗಳು ಸಾಯಲಿದ್ದಾರೆ. ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಇಸ್ಲಾಂನ ಅರಿತವಾದ ಖಡ್ಗಕ್ಕೆ ಸಿಲುಕಿ ಸಾಯಿರಿ. ಸತ್ಯನಿಷೇಧಿಗಳು ನಿಮ್ಮೆ ಮುಂದೆ ಸಿಕ್ಕಾಗ ಅವರ ಶಿರಚ್ಛೇದ ಮಾಡಿರಿ. ಶಿರಚ್ಛೇದ ಮಾಡಿರಿ ಹಾಗೂ ಅವರ ಎಲ್ಲಾ ಬೆರಳುಗಳನ್ನೂ ಕತ್ತರಿಸಿ. ಬಹುದೇವಾರಾಧಕರು ನಿಮ್ಮ ವಿರುದ್ಧ ಹೋರಾಟ ಮಾಡುವಂತೆ ನೀವೂ ಅವರ ವಿರುದ್ಧ ಹೋರಾಡಿರಿ. ಅಲ್ಲಾಹು ಅಕ್ಬರ್ ಎಂದು ಬೆದರಿಕೆ ಇಮೇಲ್ನಲ್ಲಿ ಉಲ್ಲೇಖವಾಗಿದೆ.
ಇನ್ನು ಶಾಲೆಗಳಿಗೆ ಬಾಂಬ್ ಬೆದರಿಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮಕೈಗೊಳ್ಳುತ್ತೇವೆ. ಪೋಷಕರು, ಮಕ್ಕಳು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇ-ಮೇಲ್ ಬೆದರಿಕೆ ಪ್ರಕರಣವನ್ನು ಲಘುವಾಗಿ ಪರಿಗಣಿಸುವುದಿಲ್ಲ. ಇಂತಹ ಬೆದರಿಕೆ ಹಾಕುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಖಡಕ್ ಆಗಿ ಹೇಳಿದರು.
ಬಾಂಬ್ ಬೆದರಿಕೆ ಬಂದಿರುವ ಬಸವೇಶ್ವರನಗರದಲ್ಲಿರುವ ನ್ಯಾಫಲ್ ಶಾಲೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿರು ಸುರೇಶ್ ಕುಮಾರ್, ಬಸವೇಶ್ವರ ನಗರದ ನ್ಯಾಫಲ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ. ಕಳೆದ ಬಾರಿಯೂ ವಿದ್ಯಾರ್ಥಿಯೊಬ್ಬ ಬೆದರಿಕೆ ಮೇಲ್ ಕಳಿಸಿದ್ದ. ಈಗ ಬಂದಿರುವ ಮೇಲ್ನಲ್ಲಿ ಉಗ್ರವಾದ ಪದಗಳನ್ನ ಬಳಸಿದ್ದಾರೆ. ಖರಿಜಿಟೆಸ್.ಬೀಬಲ್.ಕಾಮ್ ಎಂಬ ಹೆಸರಿನ ಮೇಲ್ನಿಂದ ಸಂದೇಶ ಬಂದಿದ್ದು, ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಬಸವೇಶ್ವರನಗರದ ನ್ಯಾಫಲ್ ಶಾಲೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಜತೆ ಮಾತನಾಡಿದ್ದೇನೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಇ-ಮೇಲ್ ಪತ್ರದಲ್ಲಿದೆ. ದೇಶದಲ್ಲಿ ಅಲ್ಲಾಗೆ ಮೋಸ ಮಾಡಲಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಧರ್ಮಾಧರಿತವಾಗಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗುತ್ತಿದೆ. ಉಗ್ರವಾದ ಅರ್ಥದಲ್ಲಿ ಇ-ಮೇಲ್ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದರು.
ಟೈಪ್ ಮಾಡಿದ್ದನು ನೋಡಿದ್ರೆ ಹೈ ಲೆವೆಲ್ ಟೆರರಸ್ಟ್ ತರ ಕಾಣುತ್ತೆ. ಅಲ್ಲಾಹ್ ಗೆ ತೊಂದರೆ ಮಾಡುತ್ತಿದ್ದಿರಿ, ಮುಂಬೈನಲ್ಲಿ ಗಲಾಟೆ ಮಾಡಿದ್ರಿ ಹೀಗೆಲ್ಲಾ ಮೆಸೇಜ್ ಮಾಡಿದ್ದಾರೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್ ,ಡಾಗ್ ಸ್ಕ್ವಾಡ್ ಬಂದಿದೆ . ಇಲ್ಲಿವರೆಗೇ ಏನೂ ಸಿಕ್ಕಿಲ್ಲ. ಸದ್ಯ ಹದಿನೈದು ಶಾಲೆಗೆ ಮೇಲ್ ಬಂದಿದೆ . ಜನರಲ್ಲಿ ಆತಂಕ ಶುರುವಾಗಿದೆ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:17 am, Fri, 1 December 23