ಬುರ್ಖಾನೂ ತೆಗೆಸಬಾರದು, ಹಿಜಾಬ್ ಕೂಡ ತೆಗೆಸಬಾರದು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಫರ್ಮಾನು
ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಈ ದೇಶದ ಸಂವಿಧಾನದಲ್ಲಿ ಹಕ್ಕಿದೆ. ಉಚಿತ ಮತ್ತು ಕಡ್ಡಾಯದ ಹಕ್ಕಿದೆ. ಅವರವರ ಧರ್ಮದ ಬಗ್ಗೆ ಎಲ್ಲರಿಗೂ ಅವಕಾಶ ಇದೆ. ಸಮವಸ್ತ್ರ ವಿಚಾರದಲ್ಲಿ ಯಾರಿಗೂ ನಿರ್ಬಂಧ ಇರಲಿಲ್ಲ. ಫೆಬ್ರವರಿ 5ರವರೆಗೆ ಯಾವುದೇ ಗೈಡ್‌ಲೈನ್ಸ್ ಕೂಡ ಇರಲಿಲ್ಲ. -ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ(Hijab-Kesari Row) ತಾರಕಕ್ಕೇರಿದೆ. ಈ ಸಂಬಂಧ ಹೈಕೋರ್ಟ್ ಮಧ್ಯಂತರ ಆದೇಶ ಜಾರಿ ಮಾಡಿದ್ರೂ ದಿನೇ ದಿನೇ ಒಂದಲ್ಲಾ ಒಂದು ಬೆಳವಣಿಗೆಗಳು ಆಗುತ್ತಲೇ ಇವೆ. ಸದ್ಯ ಹಿಜಾಬ್(Hijab) ವಿವಾದದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಪ್ರತಿಕ್ರಿಯೆಸಿದ್ದಾರೆ. ಬುರ್ಖಾನೂ ತೆಗೆಸಬಾರದು, ಹಿಜಾಬ್ ಕೂಡ ತೆಗೆಸಬಾರದು. ಮೊದಲಿನಿಂದ ಹೇಗೆ ಬರುತ್ತಿದ್ದಾರೋ ಹಾಗೆಯೇ ಬಿಡಬೇಕು ಎಂದಿದ್ದಾರೆ.
ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಈ ದೇಶದ ಸಂವಿಧಾನದಲ್ಲಿ ಹಕ್ಕಿದೆ. ಉಚಿತ ಮತ್ತು ಕಡ್ಡಾಯದ ಹಕ್ಕಿದೆ. ಅವರವರ ಧರ್ಮದ ಬಗ್ಗೆ ಎಲ್ಲರಿಗೂ ಅವಕಾಶ ಇದೆ. ಸಮವಸ್ತ್ರ ವಿಚಾರದಲ್ಲಿ ಯಾರಿಗೂ ನಿರ್ಬಂಧ ಇರಲಿಲ್ಲ. ಫೆಬ್ರವರಿ 5ರವರೆಗೆ ಯಾವುದೇ ಗೈಡ್‌ಲೈನ್ಸ್ ಕೂಡ ಇರಲಿಲ್ಲ. ಗೈಡ್‌ಲೈನ್ಸ್ ಹೊರಡಿಸುವ ಪ್ರಶ್ನೆ ಹುಟ್ಟುಕೊಂಡಿದ್ದು ಹೇಗೆ? ಎಂದು ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈಗ ಮೂಲಭೂತ ಹಕ್ಕಿಗೆ ತೊಂದರೆ ಬಂದಿದೆ. ಶಾಲಾ ಅಭಿವೃದ್ಧಿ ಸಮಿತಿಗಳು ಎಲ್ಲೆಲ್ಲಿ ಇವೆ ಎಂದು ಹೇಳಲಿ. ಸರ್ಕಾರ ಹೇಳದೆ ಕೋರ್ಟ್ ಆದೇಶ ವಿರುದ್ಧ ಅಧಿಕಾರಿ ಸುತ್ತೋಲೆ ಹೊರಡಿಸುವುದಿಲ್ಲ. ಪೊಲೀಸರಿಗೆ, ಶಾಲೆಗಳಿಗೆ ಏನು ಸಂಬಂಧವೆಂದು ಡಿಕೆಶಿ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲೆಗೆ ಹೋಗದಂತೆ ತಡೆಯುವ ಹಕ್ಕಿದ್ಯಾ? ರಾಜ್ಯದಲ್ಲಿ ಕೇವಲ ಶಾಂತಿ ಮಾತ್ರ ಕದಡುವ ಕೆಲಸ ಮಾಡ್ತಿಲ್ಲ. ಮುಂದಿನ ದಿನಗಳಲ್ಲಿ ಹೂಡಿಕೆದಾರರು ರಾಜ್ಯಕ್ಕೆ ಬರುವುದಿಲ್ಲ. ಆರ್ಥಿಕತೆ ಅಭಿವೃದ್ಧಿಗೆ ದೊಡ್ಡ ಹೊಡೆತ ಬೀಳುತ್ತದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಕೂಡ ಸೃಷ್ಟಿಯಾಗುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ನೆನೆಪಿನಲ್ಲಿಟ್ಟುಕೊಳ್ಳಬೇಕು. ಸರ್ಕಾರ ಎಲ್ಲರಿಗೂ ವಿದ್ಯಾಭ್ಯಾಸವನ್ನು ನೀಡಬೇಕು. ವಿದ್ಯಾಭ್ಯಾಸದಲ್ಲಿ ರಾಜಕಾರಣವನ್ನು ತರಬಾರದು. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ. ಎಲ್ಲರೂ ಸೇರಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡೋಣ. ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸೋಣ. ‘ದೇಶದ ಸಂಸ್ಕೃತಿ ಅವರ ಧರ್ಮ ಕಾಪಾಡಿಕೊಳ್ಳುವುದು’ ಎಂದು ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಬಚ್ಚಲಬಾಯಿ ಈಶ್ವರಪ್ಪ ಎಂದ ಡಿಕೆ ಶಿವಕುಮಾರ್, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು
ಸಚಿವ ಈಶ್ವರಪ್ಪ ವಜಾಗೆ ಕಾಂಗ್ರೆಸ್ ಬಿಗಿ ಪಟ್ಟು, ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿದ ಸ್ಪೀಕರ್
Published On - 2:14 pm, Fri, 18 February 22