ಭದ್ರಾ ಮೇಲ್ದಂಡೆ ಯೋಜನೆಗೆ ಬಗ್ಗೆ ಮತ್ತಷ್ಟು ವಿವರ ಕೇಳಿದ ಕೇಂದ್ರ; ಕಿಡಿಕಾರಿದ ಟಿ.ಬಿ.ಜಯಚಂದ್ರ

ಭದ್ರಾ ಮೇಲ್ಡಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಕುರಿತು ರಾಜ್ಯದಿಂದ ಮತ್ತಷ್ಟು ದಾಖಲೆ ಕೇಳಿದ ಕೇಂದ್ರ ಜಲಶಕ್ತಿ ಸಚಿವಾಲಯ, ರಾಜ್ಯ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದೆ. ಈ ಹಿಂದೆ 5,300 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಘೋಷಿಸಿತ್ತು. ಆದರೆ, ಇದುವರೆಗೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ. ಇದೀಗ ಯೋಜನೆ ಬಗ್ಗೆ ಮತ್ತಷ್ಟು ವಿವರ ಕೇಳಿದ್ದು, ಅಕ್ರೋಶಕ್ಕೆ ಕಾರಣವಾಗಿದೆ. ಕುರಿತು ಒಂದು ವರದಿ ಇಲ್ಲಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಬಗ್ಗೆ ಮತ್ತಷ್ಟು ವಿವರ ಕೇಳಿದ ಕೇಂದ್ರ; ಕಿಡಿಕಾರಿದ ಟಿ.ಬಿ.ಜಯಚಂದ್ರ
ಟಿಬಿ ಜಯಚಂದ್ರ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 11, 2024 | 7:34 PM

ಬೆಂಗಳೂರು, ಸೆ.11: ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಯೋಜನೆಯ ಬಗ್ಗೆ ಮತ್ತಷ್ಟು ವಿವರವನ್ನು ಕೇಂದ್ರ ಸರ್ಕಾರ ಕೇಳಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (T.B Jayachandra) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ಯೋಜನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. ಸಿಎಂ, ಡಿಸಿಎಂ ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ಈಗ ಮತ್ತೆ ಕೇಂದ್ರ ಸರ್ಕಾರ ಯೋಜನೆ ಬಗ್ಗೆ ವರದಿ ಕೇಳುತ್ತಿದೆ. ಹಣ ಬಿಡುಗಡೆ ಮಾಡುವ ಮನಸ್ಸಿಲ್ಲದೆ ಕೇಂದ್ರ ಕಾರಣ ಹುಡುಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಭದ್ರಾ ಮೇಲ್ಡಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಕುರಿತು ರಾಜ್ಯದಿಂದ ಮತ್ತಷ್ಟು ದಾಖಲೆ ಕೇಳಿದ ಕೇಂದ್ರ ಜಲಶಕ್ತಿ ಸಚಿವಾಲಯ, ರಾಜ್ಯ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದೆ. ಈ ಹಿಂದೆ 5,300 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಘೋಷಿಸಿತ್ತು. ಆದರೆ, ಇದುವರೆಗೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ. ಇದೀಗ ಬಿಡುಗಡೆಗೂ ಮುನ್ನವೇ ಮತ್ತೊಮ್ಮೆ ಯೋಜನೆ ವೆಚ್ಚದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

ಇದನ್ನೂ ಓದಿ:ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿ ಕೂಡ ಕೇಂದ್ರ ಬಿಡುಗಡೆ ಮಾಡಿಲ್ಲ: ಶಿವಲಿಂಗೇಗೌಡ

ಇನ್ನು ಈ ಕುರಿತು ನಿನ್ನೆ(ಮಂಗಳವಾರ) ವಿಧಾನಸೌಧದಲ್ಲಿ ಮಾತನಾಡಿದ್ದ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌, ‘ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಮೊದಲೇ ಘೋಷಿಸಿದಂತೆ 5,300 ಕೋಟಿ ರೂ. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಜೊತೆಗೆ  ಈ ಯೋಜನೆಗೆ ಹಣ ನೀಡಲು ಹಿಂದೇಟು ಹಾಕಿದರೆ, ರಾಜಕೀಯ ಒತ್ತಡ ಹಾಕುವುದು ಅನಿವಾರ್ಯವಾಗುತ್ತದೆ. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ