ಭಗವದ್ಗೀತೆ ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ: ವಕೀಲ ಸುರೇಂದ್ರ ಉಗಾರೆ

ಮಕ್ಕಳಿಗೆ ಕಲಿಸಲು ಮುಂದಾಗಿರುವ ಭಗವದ್ಗೀತೆ ಯಾವುದು? ಸಂಸ್ಕೃತದಲ್ಲಿದ್ದ ಭಗವದ್ಗೀತೆ ಹಿಂದಿ, ಇಂಗ್ಲಿಷ್​, ಕನ್ನಡ ಭಾಷೆಗೆ ಅಧಿಕೃತವಾಗಿ ಭಾಷಾಂತರ ಮಾಡಿದವರು ಯಾರು? ಈ ಬಗ್ಗೆ ಕೇಂದ್ರ ಸರ್ಕಾರ ಸಂಸ್ಕೃತಿ ಇಲಾಖೆ ಬಳಿಯೇ ಮಾಹಿತಿ ಇಲ್ಲ ಎಂದು ವಕೀಲ ಸುರೇಂದ್ರ ಉಗಾರೆ ತಿಳಿಸಿದ್ದಾರೆ.

ಭಗವದ್ಗೀತೆ ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ: ವಕೀಲ ಸುರೇಂದ್ರ ಉಗಾರೆ
ವಕೀಲ ಸುರೇಂದ್ರ ಉಗಾರೆ
Follow us
TV9 Web
| Updated By: preethi shettigar

Updated on:Mar 21, 2022 | 3:20 PM

ಬೆಳಗಾವಿ: ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಾಕಷ್ಟ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಸದ್ಯ ಈ ಕುರಿತು ಬೆಳಗಾವಿಯಲ್ಲಿ ಆರ್‌ಟಿಐ(RTI) ಕಾರ್ಯಕರ್ತ, ವಕೀಲ ಸುರೇಂದ್ರ ಉಗಾರೆ ಹೇಳಿಕೆ ನೀಡಿದ್ದಾರೆ. ಭಗವದ್ಗೀತೆ(Bhagavad Gita) ಮೂಲ ಪುಸ್ತಕದ ಬಗ್ಗೆ ಕೇಂದ್ರ ಸರ್ಕಾರದ ಬಳಿಯೇ ಮಾಹಿತಿ ಇಲ್ಲ ಎಂದಿರುವ ಅವರು, ಭಗವದ್ಗೀತೆ ಮೂಲ ಪುಸ್ತಕದ ಪ್ರತಿ ಎಲ್ಲಿದೆ? ಮಾನ್ಯತೆ ಪಡೆದ ಅಧಿಕೃತ ಪುಸ್ತಕ(Book), ಪ್ರಕಾಶಕರ ಪಟ್ಟಿ ಬಗ್ಗೆ ಮಾಹಿತಿ ನೀಡುವಂತೆ ಅರ್ಜಿ ಕೇಂದ್ರ ಸಂಸ್ಕೃತಿ ಇಲಾಖೆಗೆ ಆರ್‌ಟಿಐಯಡಿ ಅರ್ಜಿ ಸಲ್ಲಿಸಿದ್ದಾರೆ.

ಈ ಬಗ್ಗೆ ತಮ್ಮ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದಿಂದ ಉತ್ತರ ಬಂದಿದೆ. ಪವಿತ್ರಗ್ರಂಥ ಭಗವದ್ಗೀತೆ ಪಠ್ಯದಲ್ಲಿ ಅಳವಡಿಕೆ ಬಗ್ಗೆ ನಮಗೆ ಅಭ್ಯಂತರ ಇಲ್ಲ. ಆದರೆ ಭಗವದ್ಗೀತೆ ಮೂಲ ಪ್ರತಿ, ಪ್ರಕಾಶಕರ ಪಟ್ಟಿ ನೀಡಬೇಕು. ಮಕ್ಕಳಿಗೆ ಕಲಿಸಲು ಮುಂದಾಗಿರುವ ಭಗವದ್ಗೀತೆ ಯಾವುದು? ಸಂಸ್ಕೃತದಲ್ಲಿದ್ದ ಭಗವದ್ಗೀತೆ ಹಿಂದಿ, ಇಂಗ್ಲಿಷ್​, ಕನ್ನಡ ಭಾಷೆಗೆ ಅಧಿಕೃತವಾಗಿ ಭಾಷಾಂತರ ಮಾಡಿದವರು ಯಾರು? ಈ ಬಗ್ಗೆ ಕೇಂದ್ರ ಸರ್ಕಾರ ಸಂಸ್ಕೃತಿ ಇಲಾಖೆ ಬಳಿಯೇ ಮಾಹಿತಿ ಇಲ್ಲ ಎಂದು ವಕೀಲ ಸುರೇಂದ್ರ ಉಗಾರೆ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಗುಜರಾತ್ ಸರ್ಕಾರ, ರಾಜ್ಯ ಸರ್ಕಾರ ಮಕ್ಕಳಿಗೆ ಕಲಿಸಲು ಹೊರಟಿರುವ ಭಗವದ್ಗೀತೆ ಯಾವುದು? ಭಗವದ್ಗೀತೆ ಮೂಲ ಭಾಷೆ ಸಂಸ್ಕೃತಿಯಲ್ಲಿತ್ತು ಅಂತಾ ಹೇಳ್ತಾರೆ. ಮೂಲ ಗ್ರಂಥ, ಅಧಿಕೃತವಾಗಿ ಭಾಷಾಂತರ ಮಾಡಿದವರು ಯಾರು? ಈ ಬಗ್ಗೆ ಹೇಳದಿದ್ರೆ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ಹೋಗುತ್ತದೆ. ಮೊದಲು ಇದನ್ನು ಬಹಿರಂಗಪಡಿಸಿ ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದು ನಮ್ಮ ಧ್ಯೇಯವಾಗಿದೆ; ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಮಾತು

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ; ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ

Published On - 3:09 pm, Mon, 21 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್