ಟೈಮ್​ ಕೊಡಿ ಎಂದ ಶಾಸಕರಿಗೆ ಸಿಎಂ ಅಸ್ತು; ಶಾಸಕರ ಭೇಟಿಗೆ ಸಿದ್ದರಾಮಯ್ಯ ಸಮಯ ನಿಗದಿ

ಬಹಳ ದಿನಗಳಿಂದ ಸಿಎಂ ಸಿಗಬೇಕು, ನಮ್ಮ ಮನವಿ ಆಲಿಸಲು ಟೈ ಕೊಡಿ ಎಂದು ಹಲವು ಶಾಸಕರು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸಿದ್ದರಾಮಯ್ಯನವರು ಅಸ್ತು ಎಂದಿದ್ದು, ಹೀಗಾಗಿ ಪ್ರತಿ ಗುರುವಾರ ‌ಶಾಸಕರುಗಳ ಭೇಟಿಗೆ ಸಮಯ ನಿಗದಿ ಮಾಡಿದ್ದಾರೆ. ಜೊತೆಗೆ ಕೇವಲ ಕಾಂಗ್ರೆಸ್ ಅಷ್ಟೇ ಅಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಹ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.

ಟೈಮ್​ ಕೊಡಿ ಎಂದ ಶಾಸಕರಿಗೆ ಸಿಎಂ ಅಸ್ತು; ಶಾಸಕರ ಭೇಟಿಗೆ ಸಿದ್ದರಾಮಯ್ಯ ಸಮಯ ನಿಗದಿ
ಸಿದ್ದರಾಮಯ್ಯ
Follow us
|

Updated on: Jul 04, 2024 | 6:03 PM

ಬೆಂಗಳೂರು, ಜು.04: ಎಲ್ಲಾ ಶಾಸಕರಗಳನ್ನು ವಿಶ್ವಾಸಕ್ಕೆ ತಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ (Siddaramaiah) ಮುಂದಾಗಿದ್ದು, ಇಂದಿನಿಂದ ಪ್ರತಿ ಗುರುವಾರ ಶಾಸಕರ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ. ಬಹಳ ದಿನಗಳಿಂದ ಸಿಎಂ ಸಿಗಬೇಕು, ನಮ್ಮ ಮನವಿ ಆಲಿಸಲು ಟೈ ಕೊಡಿ ಎಂದು ಹಲವು ಶಾಸಕರು ಮನವಿ ಮಾಡಿಕೊಂಡಿದ್ದರು. ಹೀಗಾಗಿ ‌ಶಾಸಕರುಗಳ ಭೇಟಿಗೆ ಸಮಯ ನಿಗದಿ ಮಾಡಿದ್ದಾರೆ.

ಮೂರು ಪಕ್ಷದ ಶಾಸಕರುಗಳ ಭೇಟಿಗೆ ಅವಕಾಶ

ಪ್ರತಿ ಗುರುವಾರ ಬೆಳಗ್ಗೆ ಕ್ಯಾಬಿನೆಟ್ ಸಭೆ ಇದ್ದು, ಸಂಜೆ 4.30 ರಿಂದ 6 ಗಂಟೆ ತನಕ ಶಾಸಕರ ಭೇಟಿಗೆ ಸಮಯ ನಿಗದಿ ಮಾಡಲಾಗಿದೆ. ಕೇವಲ ಕಾಂಗ್ರೆಸ್ ಅಷ್ಟೇ ಅಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಹ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಭೇಟಿ ವೇಳೆ ತಮ್ಮ ಕ್ಷೇತ್ರದ ಸಮಸ್ಯೆಗಳು, ಅನುದಾನ ಸೇರಿದಂತೆ ಇನ್ನಿತರೆ ಮನವಿಗಳನ್ನ ಶಾಸಕರುಗಳು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರಬಹುದು. ಇದೀಗ ಸಿಎಂ ಭೇಟಿಗೆ ಶಾಸಕಿ ನಯನ ಮೊಟಮ್ಮ, KMF ಎಂಡಿ ಮಾಜಿ ಶಾಸಕ ಭಿಮಾ ನಾಯಕ್, ಸಂಸದ ತುಕಾರಾಂ, ಸಾಗರ್ ಖಂಡ್ರೆ ಮತ್ತು ಸಚಿವ ರಾಮಲಿಂಗ ರೆಡ್ಡಿ ಆಗಮಿಸಿದ್ದಾರೆ.

ಇದನ್ನೂ ಓದಿ:ಬಟ್ಟೆ ಮಾತ್ರ ಪರಿಶುದ್ದವಾಗಿದ್ದರೆ ಸಾಲದು, ಆಡಳಿತವೂ ಶುದ್ಧವಾಗಿರಬೇಕು: ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ

ಇನ್ನು ಶಾಸಕರ ಭೇಟಿ ಸಿಎಂ ಅವಕಾಶ ಕುರಿತು ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ‘ನಮ್ಮ ಕ್ಷೇತ್ರದ ಸಮಸ್ಯೆ ತಿಳಿಸಲು ಅವಕಾಶ ಕೊಟ್ಟಿದ್ದಾರೆ. ಜುಲೈ 15 ರಿಂದ ಸದನ ಪ್ರಾರಂಭವಾಗುತ್ತಿದೆ. ಅದರ ಬಗ್ಗೆ ಅವರ ಜೊತೆ ಮಾತನಾಡಿದ್ದೇನೆ. ಜೊತೆಗೆ ನಮ್ಮ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರು ಹೆಚ್ಚಿದ್ದಾರೆ. ಅದಕ್ಕೋಸ್ಕರ ಕಳಸದಲ್ಲಿ ಇಂದಿರಾ ಕ್ಯಾಂಟೀನ್ ಕೇಳಿದ್ದೇನೆ. ಇನ್ನು ಜಿಲ್ಲೆಗ ಚುನಾವಣೆ ಮುನ್ನ ವಿಶೇಷ ಅನುದಾನ ಸಿಕ್ಕಿದೆ. ಆರ್​ಡಿಪಿಆರ್ ಅನುದಾನವೂ ನಮಗೆ ಸಿಕ್ಕಿದೆ. ಹೀಗಾಗಿ ನಮ್ಮ ಕ್ಷೇತ್ರಕ್ಕೆ ಯಾವುದೇ ಅನುದಾನ ಕೊರತೆಯಾಗಿಲ್ಲ ಎಂದರು.

ಇದೇ ವೇಳೆ ಸಂಸದ ರಾಜಶೇಖರ್ ಹಿಟ್ನಾಳ್ ಮಾತನಾಡಿ, ನಾವು ಸಿಎಂಗೆ ಮನವಿ ಮಾಡಿದ್ದೇವೆ. ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದಿದ್ದೇವೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇನೆ. ಅದಕ್ಕೆ ಸಹಕಾರ ಕೊಡುವುದಾಗಿ ಸಿಎಂ ಕೂಡ ಹೇಳಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ