Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಪುತ್ರನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್​

ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಪುತ್ರನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಅಪರಾಧಿ ಶರತ್ ಕುಮಾರ್ ಕೃತ್ಯ ನ್ಯಾಯಾಲಯದಲ್ಲಿ ಸಾಭೀತಾದ ಹಿನ್ನಲೆ CCH 65 ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು (Bengaluru) ಆದೇಶಿಸಿದೆ.

ಬೆಂಗಳೂರು: ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಪುತ್ರನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್​
ಪ್ರಾತಿನಿಧಿಕ ಚಿತ್ರ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 20, 2023 | 5:01 PM

ಬೆಂಗಳೂರು, ಡಿ.20: ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಪುತ್ರನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಅಪರಾಧಿ ಶರತ್ ಕುಮಾರ್ ಕೃತ್ಯ ನ್ಯಾಯಾಲಯದಲ್ಲಿ ಸಾಭೀತಾದ ಹಿನ್ನಲೆ CCH 65 ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು (Bengaluru) ಆದೇಶಿಸಿದೆ. 2018 ರ ಜೂನ್ 13 ರಂದು ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಇದೀಗ 5 ವರ್ಷಗಳ ನಂತರ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಶೀಮತಿ ಎಂ.ಎಸ್, ಕಲ್ಪನಾ ಅವರು​ ಆದೇಶಿಸಿದೆ.

ಸಾಕ್ಣ್ಯಧಾರಗಳ ನಾಶಕ್ಕೂ ಯತ್ನಿಸಿದ್ದ ಆರೋಪಿ ಶರತ್ ಕುಮಾರ್

ಇನ್ನು ಮನೆ ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಾಯಿ ಕಾತ್ಯಾಯಿನಿ ಎಂಬುವವರ ಜೊತೆ ಜಗಳವಾಡಿದ್ದ. ಇದಾದ ಬಳಿಕ ರೊಚ್ಚಿಗೆದ್ದ ಶರತ್​, ತಾಯಿಯ ಮೂಗು ಮತ್ತು ಬಾಯಿಯನ್ನು ಬಲವಾಗಿ ಮುಚ್ಚಿ ಉಸಿರುಗಟ್ಟಿಸಿ ಕೊಂದಿದ್ದ. ಇಷ್ಟೇ ಅಲ್ಲ, ಬಳಿಕ ಸಾಕ್ಷ್ಯಾಧಾರಗಳ ನಾಶಕ್ಕೂ ಯತ್ನಿಸಿದ್ದ ಆರೋಪಿ ಶರತ್ ಕುಮಾರ್​ಗೆ IPC ಕಲಂ 302 ಕ್ಕೆ ಜೀವಾವಧಿ ಶಿಕ್ಷೆ, ಹಾಗೂ ಕಲಂ 201 ಸಾಕ್ಷಿ ನಾಶಪಡಿಸಿದಕ್ಕೆ 3 ವರ್ಷ ಶಿಕ್ಷೆ ವಿಧಿಸಲಾಗಿದೆ. ಸರ್ಕಾದಪರ ಅಭಿಯೋಜಕ ಎಂ.ವಿ ತ್ಯಾಗರಾಜ ಅವರು ವಾದಿಸಿದ್ದರು.

ಇದನ್ನೂ ಓದಿ:ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್

ಹೊಲದಲ್ಲಿ ಕೆಲಸ ಮಾಡ್ತಿದ್ದಾಗ ಹಾವು ಕಡಿದು ಮಹಿಳೆ ಸಾವು

ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮುತ್ಯಾಲಮ್ಮನಹಳ್ಳಿಯಲ್ಲಿ ನಡೆದಿದೆ. ಮುತ್ಯಾಲಮ್ಮನಹಳ್ಳಿ ನಿವಾಸಿ ಪಾರ್ವತಮ್ಮ(45) ಮೃತಪಟ್ಟವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪಾರ್ವತಮ್ಮಗೆ ಹಾವು ಕಚ್ಚಿತ್ತು. ತಕ್ಷಣ ಕೊಡಿಗೇನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪಾರ್ವತಮ್ಮ ಮೃತಪಟ್ಟಿದ್ದಾರೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Wed, 20 December 23