ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದವನಿಗೆ 20 ವರ್ಷ ಜೈಲು ಶಿಕ್ಷೆ ನೀಡಿದ ನ್ಯಾಯಾಲಯ
ನಗರದ ಕುಮಾರಸ್ವಾಮಿ ಲೇಔಟ್ ನಿವಾಸಿ ರಮೇಶ್ ಎಂಬ 70 ವರ್ಷದ ವೃದ್ಧನು, ತನ್ನ 3 ವರ್ಷದ ಮೊಮ್ಮಗಳಿಗೆ ಅಶ್ಲೀಲ ವಿಡಿಯೋ ತೋರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಇದೀಗ ಆತನಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಸಹಿತ 1 ಲಕ್ಷ 30 ಸಾವಿರ ದಂಡ ವಿಧಿಸಿದೆ.
ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್ ನಿವಾಸಿ ರಮೇಶ್ ಎಂಬ 70 ವರ್ಷದ ವೃದ್ಧ, ತನ್ನ ಮೊಮ್ಮಗಳ ಮೇಲೆ 3ನೇ ತರಗತಿಯಿಂದ 8ನೇ ತರಗತಿವರೆಗೂ ಅಶ್ಲೀಲ ವಿಡಿಯೋ ತೋರಿಸಿ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. ಯಾರಿಗಾದರೂ ಹೇಳಿದ್ರೆ ನಿಮ್ಮ ತಂದೆಯನ್ನು ಸಾಯಿಸುವುದಾಗಿ ಬೆದರಿಕೆ ನೀಡಿ ಈ ಕೃತ್ಯ ಎಸಗುತ್ತಿದ್ದ. ಇನ್ನು ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಇದೀಗ ಪೋಕ್ಸ್ ಕಾಯ್ದೆಯಡಿಯಲ್ಲಿ 20 ವರ್ಷ ಸೆರೆವಾಸ 1 ಲಕ್ಷ 30 ಸಾವಿರ ದಂಡವನ್ನ ಬೆಂಗಳೂರಿನ ಫಾಸ್ಟ್ ಟ್ಯ್ರಾಕ್ ಸೆಷನ್ ಕೋರ್ಟ್ ನ್ಯಾಯಾಧೀಶರು ಪ್ರಕಟಿಸಿದ್ದಾರೆ.
ಚಿಕ್ಕಬಳ್ಳಾಪುರ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ
ಚಿಕ್ಕಬಳ್ಳಾಪುರ: ಲಂಚ ಪಡೆಯುತ್ತಿದ್ದಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಮಾಲಾ ಕಿರಣ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ಮೀಟರ್ಗೆ ಅನುಮೋದನೆ ನೀಡಲು 8 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರು ದಾಳಿ ಮಾಡಿ ಹಣದ ಸಮೇತ ಅಧಿಕಾರಿಯನ್ನ ಹಿಡಿದಿದ್ದಾರೆ.
ನಾಗರಬಾವಿಯಲ್ಲಿರುವ ಕುಡಿಯುವ ನೀರಿನ ಘಟಕದಲ್ಲಿ ಅಗ್ನಿ ಅವಘಡ
ಬೆಂಗಳೂರು: ನಾಗರಬಾವಿಯಲ್ಲಿರುವ ಕುಡಿಯುವ ನೀರಿನ ಘಟಕದ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಡೀ ಘಟಕವನ್ನ ಆವರಿಸಬೇಕಿದ್ದ ಬೆಂಕಿಯನ್ನ ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ಮುಂದಾಗುವ ಬಾರಿ ಅನಾಹುತವನ್ನ ತಪ್ಪಿಸಿದ್ದಾರೆ. ಇನ್ನು ಈ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:55 pm, Tue, 7 February 23