ಬೆಂಗಳೂರು: ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ
ವಾಹನ ಸವಾರರ ದುಃಸ್ವಪ್ನವಾಗಿದ್ದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನ ಟ್ರಾಫಿಕ್ ಜಾಮ್ ಶೀಘ್ರದಲ್ಲಿಯೇ ಕೊನೆಯಾಗುವ ದಿನ ಹತ್ತಿರವಾಗಿದೆ. ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.36 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ಕಾಮಗಾರಿ ಕಂಪ್ಲಿಟ್ ಆಗಿದ್ದು, ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ಸಿಗಲಿದೆ.
ಬೆಂಗಳೂರು, ಜುಲೈ.17: ಇಂದು ನಗರದ ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್ (Double Decker Flyover) ಟ್ರಯಲ್ ರನ್ ನಡೆಯಲಿದೆ. ನಗರದ ಟ್ರಾಫಿಕ್ಗೆ ಬ್ರೇಕ್ ಹಾಕಲು ಡಬಲ್ ಅಸ್ತ್ರ ಬಳಸಿದ್ದು ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಚಾಲನೆ ಸಿಗಲಿದೆ. ಮುಂಬೈ ಜೈಪುರದಲ್ಲಿ ಇದ್ದ ಡಬಲ್ ಡೆಕ್ಕರ್ ವ್ಯವಸ್ಥೆ ಇನ್ಮುಂದೆ ಸಿಲಿಕಾನ್ ಸಿಟಿಯಲ್ಲೂ ಇರಲಿದೆ. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಾಯೋಗಿಕ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಡಿಸಿಎಂಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮತ್ತು ಶಾಸಕರು ಸಾಥ್ ನೀಡಲಿದ್ದಾರೆ.
ಬಹು ನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈ ಓವರ್ 3.36 ಕಿಲೋ ಮೀಟರ್ ಉದ್ದವಿದೆ. ಇದು ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಾಣವಾಗಿದೆ. 449 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಡಬಲ್ ಡೆಕ್ಕರ್ ಫ್ಲೈ ಓವರ್, ರಾಗಿಗುಡ್ಡ -ಸಿಲ್ಕ್ ಬೋರ್ಡ್ ಜಂಕ್ಷನ್ ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ. ರಾಗಿಗುಡ್ಡದಿಂದ ಇನ್ಮುಂದೆ ಸಿಗ್ನಲ್ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಪ್ರಯಾಣಿಸಲು ಅವಕಾಶ ಸಿಗಲಿದೆ.
ಈ ಡಬಲ್ ಡೆಕ್ಕರ್ ಫ್ಲೈಒವರ್ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. ಕೆಳರಸ್ತೆಯಿಂದ ಡಬ್ಬಲ್ ಡೆಕ್ಕರ್‌ನ ಮೊದಲ ಫ್ಲೈಓವರ್ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್ 16 ಮೀ. ಎತ್ತರದಲ್ಲಿದೆ. ಇದೇ ಮೊದಲ ಬಾರಿಗೆ ನಗರದ ಫ್ಲೈಓವರ್ ಮೇಲೆ ಮೆಟ್ರೋ ಲೇನ್ ಹಾದು ಹೋಗಿದೆ. ಎಚ್‌ಎಸ್‌ಆರ್ ಲೇಔಟ್ ಹಾಗೂ ಹೊಸುರ್ ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಬಹುದು.
ಇದನ್ನೂ ಓದಿ: ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರಿಗೆ ಡಿಕೆ ಶಿವಕುಮಾರ್ ಆಪ್ತರಿಂದ ಡಿನ್ನರ್ ಪಾರ್ಟಿ
ಡಬಲ್ ಡೆಕ್ಕರ್ ಫ್ಲೈ ಓವರ್ ಸಂಪರ್ಕ
- ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಐದು ಲೂಪ್‌ಗಳು ಮತ್ತು ರ‍್ಯಾಂಪ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಇವುಗಳನ್ನು ಎ, ಬಿ, ಸಿ, ಡಿ, ಮತ್ತು ಇ ರ‍್ಯಾಂಪ್‌ಗಳೆಂದು ಗುರುತಿಸಲಾಗಿದೆ.
- ಎ, ಬಿ ಮತ್ತು ಸಿ ರಾಗಿಗುಡ್ಡ/ ಬಿಟಿಎಂ ಲೇಔಟ್ ಕಡೆಯಿಂದ ಕೆಆರ್ ಪುರಂ ಮತ್ತು ಹೊಸೂರು ರಸ್ತೆ ಸಂಪರ್ಕ
- ಡಿ ಮತ್ತು ಇ ಕೆಆರ್ ಪುರಂ ಅನ್ನು ಬಿಟಿಎಂ ಲೇಔಟ್ ಮತ್ತು ರಾಗಿಗುಡ್ಡ ರಸ್ತೆಯನ್ನು ಸಂಪರ್ಕಿಸಲಿವೆ.
- ಎ, ಬಿ, ಸಿ, ರ‍್ಯಾಂಪ್‌ಗಳ ಪ್ರಮುಖ ಕಾಮಗಾರಿ ಮುಗಿದಿದ್ದು ಇಂದು ಪ್ರಾಯೋಗಿಕ ಸಂಚಾರಕ್ಕೆ ಸಿದ್ಧತೆ ನಡೆದಿದೆ.
- ಡಿ ಮತ್ತು ಇ ರ‍್ಯಾಂಪ್‌ಗಳು 2025 ರ ಜೂನ್ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ.
ಜನರಿಗೆ ಏನು ಲಾಭ
- ರಾಗಿಗುಡ್ಡ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆಯ ಉದ್ದಕ್ಕೂ ಸಂಚಾರ ದಟ್ಟಣೆ ನಿವಾರಣೆ
- ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರ
- ರಾಗಿಗುಡ್ಡದಿಂದ ಪ್ರಯಾಣಿಸುವವರು ಇನ್ನು ಮುಂದೆ ಸಿಗ್ನಲ್ ಇಲ್ಲದೆ ಪ್ರಯಾಣ
- ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಆರಾಮಾಗಿ ಪ್ರಯಾಣಿಸಬಹುದು
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ