ಇಂದು ಪರಿಷತ್ನ 4 ಕ್ಷೇತ್ರಗಳ ಚುನಾವಣಾ ಫಲಿತಾಂಶ: 3 ಪಕ್ಷಗಳ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಜೂ.13ರಂದು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.
ಬೆಂಗಳೂರು: ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣಾ ಫಲಿತಾಂಶ ಇಂದು ಹೊರಬಿಳಲಿದೆ. ವಾಯವ್ಯ ಪದವೀಧರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟಕಗೊಳ್ಳಲಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.
ಇದನ್ನೂ ಓದಿ: Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ತಮ್ಮ ಕಠಿಣ ಪರಿಶ್ರಮದ ಫಲ ಇಂದು ಸಿಗುವುದು ಖಚಿತ
ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿದ್ದವು. ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳಿದ್ದವು. ದಕ್ಷಿಣ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳಿದ್ದವು.
ಮತ ಎಣಿಕೆಗೆ ಸಕಲ ಸಿದ್ಧತೆ
ಮೈಸೂರು: ನಗರದ ಪಡುವಾರಹಳ್ಳಿ ಮಹಾರಾಣಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆಗಾಗಿ 28 ಟೇಬಲ್ ಸಿದ್ಧಪಡಿಸಲಾಗಿದೆ. ಪ್ರತಿ ಮತ ಎಣಿಕೆ ಟೇಬಲ್ಗೆ ಇಬ್ಬರು ಮೇಲ್ವಿಚಾರಕರು. ಇಬ್ಬರು ಮತ ಎಣಿಕೆ ಸಹಾಯಕರು ಸೇರಿ 90 ಸಿಬ್ಬಂದಿ ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಪರವಾಗಿ ಮತ ಎಣಿಕೆ ಟೇಬಲ್ಗೆ ಒಬ್ಬರಂತೆ ಎಣಿಕಾ ಏಜೆಂಟ್ ನೇಮಿಸಲಾಗಿದೆ. ಪದವೀಧರ ಕ್ಷೇತ್ರದಲ್ಲಿ 1,41,963 ಮತದಾರರಿದ್ದು, 99,304 ಮಂದಿ ಮತದಾನ ಮಾಡಿದ್ದಾರೆ. ಒಟ್ಟಾರೆಯಾಗಿ 69.95% ಮತದಾನ ದಾಖಲಾಗಿತ್ತು. ಇಂದು 19 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆಯಾಗಿದ್ದು, ಸುಮಾರು 200 ಮತ ಎಣಿಕೆ ಸಿಬ್ಬಂದಿಯನ್ನು ನೇಮಿಸಲಾಗಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹತ್ತು ಟೇಬಲ್. ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಹತ್ತು ಟೇಬಲ್. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಹನ್ನೊಂದು ಟೇಬಲ್ ಮಾಡಿ ಮತ ಎಣಿಕೆ ನಡೆಯಲಿದೆ. ಈಗಾಗಲೇ ಮತ ಎಣಿಕಾ ಸಿಬ್ಬಂದಿಗಳಿಗೆ ಚುನಾವಣಾ ಅಧಿಕಾರಿಗಳು ಮೂರು ಬಾರಿ ತರಬೇತಿ ನೀಡಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇಕಡಾ 69ರಷ್ಟು, ಶೇಕಡಾ 86ರಷ್ಟು ಶಿಕ್ಷಕರ ಕ್ಷೇತ್ರದಲ್ಲಿ, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇಕಡಾ 86.67ರಷ್ಟು ಮತದಾನ ಆಗಿದೆ. ಮತ ಎಣಿಕೆಗೆ ಇಬ್ಬರು ಡಿಸಿಪಿ ಸೇರಿ 320ಪೊಲೀಸರ ನಿಯೋಜನೆ ಮಾಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.