ಬೆಂಗಳೂರು, ಅ.29: ನಾಳೆ 2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ ಪ್ರಕಟ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈಗಾಗಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಈ ಬಾರಿ 68 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿ ಸೇರಿ ಕರ್ನಾಟಕ ಸಂಭ್ರಮ 50 ವರ್ಷ ಎಂಬ 10 ಪ್ರಶಸ್ತಿ ನೀಡಲು ನಿರ್ಧರಿಸಿದೆ. ಇನ್ನು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಬರೊಬ್ಬರಿ 3,523 ಅರ್ಜಿಗಳು ಹಾಗೂ ಒಟ್ಟು 26, 555 ಶಿಫಾರಸ್ಸು ಪತ್ರ ಬಂದಿದೆ. ಇದರಲ್ಲಿ ಶಾರ್ಟ್ ಲಿಸ್ಟ್ ಮಾಡಿ ಸಮಿತಿ ಸಾಧಕರ ಪಟ್ಟಿಯನ್ನ ಸಿಎಂ ಗೆ ನೀಡಲಾಗಿತ್ತು. ಈ ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆ ಮಾಡಿ ಅಂತಿಮ ಪಟ್ಟಿ ಇಂದು ನಿರ್ಧಾರವಾಗಿದೆ.
ಹೌದು, ಅಕ್ಟೋಬರ್ 26 ರಂದು ಈ ಕುರಿತು ಸಭೆ ನಡೆಸಿದ್ದ ಸಿದ್ದರಾಮಯ್ಯನವರು ಪ್ರಶಸ್ತಿ ಆಯ್ಕೆಗೆ ಕೆಲ ಮಾನದಂಡ, ಸಲಹೆ ಸೂಚನೆಗಳು ನೀಡಿದ್ದರು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಸೂಚಿಸಿದ್ದರು. ಇದರ ಜೊತೆಗೆ ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಿ ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದಿದ್ದರು.
ಇದನ್ನೂ ಓದಿ:Kannada Rajyotsava 2023: ಈ ಬಾರಿ 10 ಸಂಘ ಸಂಸ್ಥೆಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ
ಇನ್ನು ಸಭೆ ಬಳಿಕ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ‘ಈ ಬಾರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧಾರಿಸಲಾಗಿದ್ದು, 10 ಸಂಘ ಸಂಸ್ಥೆಗಳಿಗೆ ವಿಶೇಷವಾದ ಪ್ರಶಸ್ತಿ ನೀಡಲು ತೀರ್ಮಾನವಾಗಿದೆ ಎಂದಿದ್ದರು. ಜೊತೆಗೆ ಈಗಾಗಲೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 3,523 ಅರ್ಜಿಗಳ ಜೊತೆಗೆ ಶಿಪಾರಸ್ಸು ಪತ್ರ ಕೂಡ ಬಂದಿದ್ದು, 28 ಸಮಿತಿ ಸದಸ್ಯರು ಈಗಾಗಲೇ ಅರ್ಹರನ್ನು ಆಯ್ಕೆ ಮಾಡಿದ್ದಾರೆ. ಸಮಿತಿ ಸದಸ್ಯರು ಕೂಡ ಸಿಎಂ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ