AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ ಮಾಡ್ತಾರೆ, ನಾವಲ್ಲ; ಯತೀಂದ್ರ ಹೇಳಿಕೆಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮಾಜಿ ಶಾಸಕ ಯತೀಂದ್ರ ಹೇಳಿಕೆಗೆ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಲೋಕಸಭೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ. ನಾವು ಗ್ಯಾರಂಟಿ ಗಳನ್ನೆಲ್ಲ ಅನುಷ್ಠಾನ ಮಾಡಿದ್ದೇವೆ. ನಾವು ಹೆಚ್ಚು ಸ್ಥಾನ ಗೆಲ್ಲಬೇಕು ಅಂತ ಸಂಕಲ್ಪ ಮಾಡಿದ್ದೇವೆ. ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ. ಅದನ್ನು ನಿರ್ಧಾರ ಮಾಡುವುದು ನಾವಲ್ಲ ಎಂದರು.

ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ ಮಾಡ್ತಾರೆ, ನಾವಲ್ಲ; ಯತೀಂದ್ರ ಹೇಳಿಕೆಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ಗೃಹಸಚಿವ ಡಾ.ಜಿ.ಪರಮೇಶ್ವರ್
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು|

Updated on:Jan 17, 2024 | 11:41 AM

Share

ಬೆಂಗಳೂರು, ಜ.17: ‘MP ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ CM’ಆಗಿರುತ್ತಾರೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಡಾ.ಯತೀಂದ್ರ (Dr Yathindra Siddaramaiah) ಹೊಸ ಬಾಂಬ್ ಸಿಡಿಸಿದ್ದಾರೆ. ಸದ್ಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ನ ಅನೇಕ ನಾಯಕರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಇದೀಗ ಮಾಜಿ ಶಾಸಕ ಯತೀಂದ್ರ ಹೇಳಿಕೆಗೆ ಸಚಿವ ಡಾ.ಪರಮೇಶ್ವರ್ (Dr G Parameshwar) ಪ್ರತಿಕ್ರಿಯೆ ನೀಡಿದ್ದು ಸಿಎಂ ಮುಂದುವರಿಸುವುದು ಬಿಡುವುದು ನಮ್ಮ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಸಿಎಂ ಬಗ್ಗೆ ನಿರ್ಧಾರ ಮಾಡುವುದು ನಾವಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ. ನಾವು ಗ್ಯಾರಂಟಿ ಗಳನ್ನೆಲ್ಲ ಅನುಷ್ಠಾನ ಮಾಡಿದ್ದೇವೆ. ನಾವು ಹೆಚ್ಚು ಸ್ಥಾನ ಗೆಲ್ಲಬೇಕು ಅಂತ ಸಂಕಲ್ಪ ಮಾಡಿದ್ದೇವೆ. ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ. ಅದನ್ನು ನಿರ್ಧಾರ ಮಾಡುವುದು ನಾವಲ್ಲ. ಲೋಕ ಸಭೆಗೆ 28 ಸಚಿವರನ್ನು ಕರೆಸಿಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ. ನಮಗೆ ಒಂದೊಂದು ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದಾರೆ. ನಮಗೆ ಸಚಿವರಿಗೆಲ್ಲ ಹೈಕಮಾಂಡ್ ಜವಾಬ್ದಾರಿ ಕೊಟ್ಟಿರುವುದು ಸತ್ಯ. ಯತೀಂದ್ರ ಹೇಳಿಕೆ ಗಮನಿಸಿಲ್ಲ, ಆದರೆ ಸಚಿವರಿಗೆಲ್ಲ ಜವಾಬ್ದಾರಿ ಕೊಡಲಾಗಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

‘ಏನೇನು ತೀರ್ಮಾನ ಆಗಿದೆ ಹೈಕಮಾಂಡ್​​ಗೆ ಗೊತ್ತು’

ಯತೀಂದ್ರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ನಮ್ಮಲ್ಲಿ ಹೈಕಮಾಂಡ್ ಇದೆ, ಆ ಬಗ್ಗೆ ತೀರ್ಮಾನಿಸುತ್ತೆ. ಹೈಕಮಾಂಡ್ ಮನಸ್ಸು ಮಾಡಿದ್ರೆ ಈ ಐದು ವರ್ಷ ಅಲ್ಲ, ಮುಂದೆಯೂ ಕೂಡ ಅವರೇ ಸಿಎಂ ಆಗಿರಬಹುದು. ಏನೇನು ತೀರ್ಮಾನ ಆಗಿದೆ ಹೈಕಮಾಂಡ್​​ಗೆ ಗೊತ್ತು. ಐದು ವರ್ಷನೋ, ಎರಡೂ ವರ್ಷನೋ ಅವ್ರಿಗೆ ಗೊತ್ತು ಎಂದು ಲಕ್ಷ್ಮಣ ಸವದಿ ಹೇಳಿದರು.

ಇನ್ನು ಮತ್ತೊಂದೆಡೆ ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಯತೀಂದ್ರ ಅವರ ಹೇಳಿಕೆ ವೈಯಕ್ತಿಕ, ನನಗೆ ಸಂಬಂಧವಿಲ್ಲ. ಅವರು ಎಲ್ಲಿ? ಏನ್​ ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಯತೀಂದ್ರ ವೈಯಕ್ತಿಕ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ ಎಂದರು.

ಸಿಎಂ ಪುತ್ರ ಯತೀಂದ್ರ ಹೇಳಿದ್ದೇನು?

‘ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ. ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್​​ನಲ್ಲಿ ಮತ್ತೆ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗುವ ಕೂಗು ಕೇಳಿ ಬಂದಿದೆ. ಸರ್ಕಾರಕ್ಕೆ 1 ವರ್ಷ ತುಂಬುವ ಮೊದಲೇ 5 ಗ್ಯಾರಂಟಿ ಜಾರಿ ಮಾಡಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸ್ಬೇಕು. ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಹಾಗಾಗಿ ನೀವೆಲ್ಲ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು. ನೀವು ಬೆಂಬಲಿಸಿದ್ದರಿಂದ 2ನೇ ಬಾರಿ ಸಿದ್ದರಾಮಯ್ಯ ಸಿಎಂ ಆದ್ರು ಎಂದು ಹಾಸನದಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದರು.

ಕೇಂದ್ರ ಟಾರ್ಗೆಟ್ ಕೊಡುವ ಅವಶ್ಯಕತೆ ಇಲ್ಲ, ಇದು ನಮ್ಮ ಜವಾಬ್ದಾರಿ

ಡಾ.ಯತೀಂದ್ರ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಯಾವ ಕಾರಣಕ್ಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದೇ ನಮ್ಮ ಗುರಿ. ಡಾ.ಯತೀಂದ್ರ ಹೇಳಿಕೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರ ಟಾರ್ಗೆಟ್ ಕೊಡುವ ಅವಶ್ಯಕತೆ ಇಲ್ಲ, ಇದು ನಮ್ಮ ಜವಾಬ್ದಾರಿ. ಮತದಾರರು ಹೆಚ್ಚು ಸೀಟ್​ಗಳನ್ನು ಗೆಲ್ಲಿಸಿ ಕೊಡುತ್ತಾರೆಂಬ ನಂಬಿಕೆ ಇದೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಇನ್ನೂ ಗೊಂದಲ ಮಾಡಿಕೊಳ್ಳುವುದಿಲ್ಲ ಎಂದು ಉಡುಪಿಯಲ್ಲಿ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:33 am, Wed, 17 January 24