AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ

ಬೀದಿ ನಾಯಿಗಳ (Street Dogs) ಸಂತಾನ ನಿಯಂತ್ರಣ ಕಾನೂನು ಜಾರಿಗೆ ಸರ್ಕಾರ ಮೀನಮೇಷ ಮಾಡುತ್ತಿದೆ. ಈ ಹಿನ್ನಲೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ತನ್ನ ನಡತೆ ಸರಿಪಡಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಶೀಘ್ರವಾಗಿ ಉತ್ತರಿಸಬೇಕಿದೆ. 3 ವಾರದಲ್ಲಿ ಉತ್ತರಿಸದಿದ್ರೆ, ಸರ್ಕಾರದ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ ನೀಡಿದೆ.

ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ
ಪ್ರಾತಿನಿಧಿಕ ಚಿತ್ರ
Ramesha M
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 05, 2023 | 3:10 PM

Share

ಬೆಂಗಳೂರು, ಅ.05: ಬೀದಿ ನಾಯಿಗಳ (Street Dogs) ಸಂತಾನ ನಿಯಂತ್ರಣ ಕಾನೂನು ಜಾರಿಗೆ ಸರ್ಕಾರ ಮೀನಮೇಷ ಮಾಡುತ್ತಿದೆ. ಈ ಹಿನ್ನಲೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದ್ದು, ಪಿಐಎಲ್​ಗೆ ಉತ್ತರಿಸಲು ಸರ್ಕಾರ ಕಾಲಾವಕಾಶ ಕೋರಿದೆ. ‘ಸರ್ಕಾರ ತಂತ್ರಜ್ಞಾನ ಬಳಕೆಯಲ್ಲಿ‌ ಮುಂಚೂಣಿಯಲ್ಲಿದೆ ಎಂದು ಭಾವಿಸಿದ್ದೆವು. ಆದರೆ, ಖಾತಾ ಎಂಟ್ರಿಗೂ ಜನ ಕೋರ್ಟ್​​ಗೆ ಬರಬೇಕಾದ ಪರಿಸ್ಥಿತಿ ಇದೆ. ಸರ್ಕಾರದ ಐಟಿ, ಬರಿ ತೋರಿಕೆನಾ, ಪರಿಣಾಮಕಾರಿನಾ? ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ S.ದೀಕ್ಷಿತ್​ರಿದ್ದ ಪೀಠ ಅಸಮಾಧಾನ ತೋರಿದೆ.

3 ವಾರದಲ್ಲಿ ಉತ್ತರಿಸದಿದ್ರೆ ಸರ್ಕಾರ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ

ರಾಜ್ಯ ಸರ್ಕಾರ ತನ್ನ ನಡತೆ ಸರಿಪಡಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಶೀಘ್ರವಾಗಿ ಉತ್ತರಿಸಬೇಕಿದೆ. 3 ವಾರದಲ್ಲಿ ಉತ್ತರಿಸದಿದ್ರೆ, ಸರ್ಕಾರದ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ ನೀಡಿದೆ. ಹೌದು, ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿ ಅನುಷ್ಠಾನ ಪಿಐಎಲ್ ಕೋರಿದ್ದು, ವಿಧಾನಸೌಧದ ಗೇಟ್ ಬಳಿ ನಾಯಿ,‌ ಪಕ್ಷಿಗಳಿಗೆ ಆಹಾರ ಹಾಕಲಾಗುತ್ತಿದೆ. ಬೀದಿ ನಾಯಿಗಳಿಗೆ ಆಹಾರ ನೀಡಲು ನಿಗದಿತ ಸ್ಥಳವಿಲ್ಲದಿರುವುದರಿಂದ ಪಾದಚಾರಿಗಳಿಗೆ,‌ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಜೊತೆಗೆ ನಾಯಿಗಳಿಗೆ ವ್ಯಾಕ್ಸಿನ್, ಸಂತಾನಶಕ್ತಿ ಹರಣದ ಬಗ್ಗೆ ಕ್ರಮಕ್ಕೆ ಮುಂದಾಗುತ್ತಿಲ್ಲ. ಈ ಕುರಿತು ನವೆಂಬರ್ 15ರೊಳಗೆ ಸಮಗ್ರ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ಕಾಟ: ಕಳೆದ 9 ತಿಂಗಳಲ್ಲಿ 5507 ಜನರಿಗೆ ಕಚ್ಚಿದ ಶ್ವಾನಗಳು

ಬೀದಿ ನಾಯಿಗಳ ಸಮೀಕ್ಷೆ ಮಾಡಿದ್ದ ಬಿಬಿಎಂಪಿ

ಇತ್ತೀಚೆಗೆ ಬಿಬಿಎಂಪಿ ಬೀದಿ ನಾಯಿಗಳ ಸಮೀಕ್ಷೆಗೆ ಒಟ್ಟು 50 ತಂಡಗಳನ್ನು ರಚಿಸಿ, ಬೀದಿ ನಾಯಿಗಳ ಸಮೀಕ್ಷೆ ನಡೆಸಿದ್ದರು. ಬೆಂಗಳೂರಲ್ಲಿ ಒಟ್ಟು 2,79,335 ಬೀದಿ ನಾಯಿಗಳನ್ನು ಪಾಲಿಕೆ ಗುರುತಿಸಿತ್ತು. 2019ರ ಸಮೀಕ್ಷೆ ಪ್ರಕಾರ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಆಗಿದ್ದು, ಸುಮಾರು 32 ಸಾವಿರ ಬೀದಿ ನಾಯಿಗಳು ಕಾಲಕ್ರಮೇಣವಾಗಿ ಕಡಿಮೆಯಾಗಿದೆ. ಹೌದು, ಬೆಂಗಳೂರು ಜನರು ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮೂರು ತಿಂಗಳ ಹಿಂದೆ ಸಮೀಕ್ಷೆ ನಡೆಸುವುದಾಗಿ ಬಿಬಿಎಂಪಿ ಹೇಳಿತ್ತು. ಹಾಗಾಗಿ ಇದೀಗ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿ, ವಲಯವಾರು ಬೀದಿ ನಾಯಿಗಳ ಪಟ್ಟಿಯನ್ನು ಪಾಲಿಕೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಬಿಡುಗಡೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ