ಪೊಲೀಸರೆಂದು ಹೇಳಿ ಮನೆಗೆ ನುಗ್ಗಿದ ಖದೀಮರು; ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ ಕಳ್ಳರು

ಮಹಾನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿರುವ ಯುವಕರೇ ಹುಷಾರು, ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಹೌದು ನಾವು ಪೊಲೀಸರೆಂದು ಹೇಳಿ ಯುವಕರಿದ್ದ ಬಾಡಿಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸರೆಂದು ಹೇಳಿ ಮನೆಗೆ ನುಗ್ಗಿದ ಖದೀಮರು; ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ  ಕಳ್ಳರು
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2023 | 10:27 AM

ಬೆಂಗಳೂರು: ಮಹಾನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿರುವ ಯುವಕರೇ ಹುಷಾರು, ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಹೌದು ನಾವು ಪೊಲೀಸರೆಂದು ಹೇಳಿ ಯುವಕರಿದ್ದ ಬಾಡಿಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ (Vidyaranyapura Police Station) ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ ರೂಂನಲ್ಲಿ ಡ್ರಗ್ಸ್​​ ಸೇವಿಸುವ ಬಗ್ಗೆ ಮಾಹಿತಿಯಿದೆ, ಪರಿಶೀಲನೆ ನಡೆಸಬೇಕೆಂದು ಒಳಗಡೆ ಬಂದಿದ್ದಾರೆ. ಮನೆಯಲ್ಲಿ ಏನೂ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ನಾಲ್ವರು ಯುವಕರಿಗೆ ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ್ದಾರೆ. ಅಷ್ಟೇ ಅಲ್ಲದೆ ಫೋನ್​ ಪೇ ಮೂಲಕ 13 ಸಾವಿರ ಹಣವನ್ನ ಅಕೌಂಟ್​ಗೆ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಖದೀಮರಿಗಾಗಿ ಬಲೆ ಬೀಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಯುವಕರು

ಇನ್ನು ಈ ಮೂವರು ಯುವಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೇ, ಓರ್ವ ಯುವಕ ವ್ಯಾಸಂಗ ಮಾಡುತ್ತಿದ್ದ. ಇಂದು(ಜು.14) ಬೆಳಗ್ಗಿನ ಜಾವ ಮನೆಯ ಬಾಗಿಲು ತಟ್ಟಿದ್ದ ಸುಲಿಗೆಕೋರರು. ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಒಳ ನುಗ್ಗಿ, ಯುವಕರಿಗೆ ಚಾಕು ತೋರಿಸಿ ಸುಲಿಗೆ ಮಾಡಿದ್ದಾರೆ. ಆರೋಪಗಳಿಗಾಗಿ ವಿದ್ಯಾರಣ್ಯಪುರ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಹಲವು ಪೊಲೀಸರಿಗೆ ವಂಚಿಸಿದ್ದ ನಕಲಿ ಐಪಿಎಸ್ ಅರ್ಜುನ್ ಅರೆಸ್ಟ್

ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯಲ್ಲಿ ‌ಕಳ್ಳನ ಕರಾಮತ್ತು

ಮಂಡ್ಯ: ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯಲ್ಲಿ ಕಳ್ಳ ತನ್ನ ಕರಾಮತ್ತು ತೋರಿಸಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಿಕ್ಕೆರೆ ಗ್ರಾಮದ ರಾಮಲಿಂಗಯ್ಯ ಎಂಬುವವರ ಸೇರಿದ ಅಂಗಡಿ ಇದಾಗಿದ್ದು, ಅಂಗಡಿಗೆ ನುಗ್ಗಿದ ಖತರ್ನಾಕ್ ಕಳ್ಳ, ಕ್ಯಾಶ್ ಕೌಂಟರ್ ಡ್ರಾಯರ್​ನಿಂದ ಹತ್ತು ಸಾವಿರ ಹಣ ಎಗರಿಸಿದ್ದಾನೆ. ಕಳ್ಳತನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​