Bengaluru: ವಿಧಾನಸೌಧದಲ್ಲಿ ಶಾಸಕರ ವಾಹನ ನಿಲ್ಲಿಸಲು ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ, ಮಧ್ಯವರ್ತಿಗಳು ಹೆಚ್ಚಾಗಿದ್ದಾರೆ ಎಂದು ಒಪ್ಪಿಕೊಂಡ ಸಚಿವ ಎಚ್‌ಕೆ ಪಾಟೀಲ್

ವಿಧಾನಸೌಧಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಚುನಾಯಿತ ಪ್ರತಿನಿಧಿಗಳ ವಾಹನ ನಿಲುಗಡೆಗೆ ಜಾಗವಿಲ್ಲ ಎಂದು ವಿಧಾನಪರಿಷತ್​ ಶೂನ್ಯ ವೇಳೆಯಲ್ಲಿ ಶಾಸಕ ಡಿ.ಎಸ್.ಅರುಣ್ ಆಕ್ರೋಶ ವ್ಯಕ್ತಪಡಿಸಿದರು.

Bengaluru: ವಿಧಾನಸೌಧದಲ್ಲಿ ಶಾಸಕರ ವಾಹನ ನಿಲ್ಲಿಸಲು ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ, ಮಧ್ಯವರ್ತಿಗಳು ಹೆಚ್ಚಾಗಿದ್ದಾರೆ ಎಂದು ಒಪ್ಪಿಕೊಂಡ ಸಚಿವ ಎಚ್‌ಕೆ ಪಾಟೀಲ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 11, 2023 | 3:13 PM

ಬೆಂಗಳೂರು: ಜನ ಕೆಲವೊಂದು ಕಡೆ ಸರಿಯಾದ ಪಾರ್ಕಿಂಗ್​ ವ್ಯವಸ್ಥೆ ಇಲ್ಲ ಎಂದು ದೂರು ನೀಡುವುದು ಸಹಜ, ಆದರೆ ನಮ್ಮನ್ನು ಆಳುವ ಜನಪ್ರತಿನಿಧಿಗಳಿಗೆ ಈಗ ಪಾರ್ಕಿಂಗ್ ಬಿಸಿ ತಟ್ಟಿದೆ. ವಿಧಾನಸೌಧದಲ್ಲಿ ನಮಗೆ ವಾಹನ ನಿಲುಗಡೆ ಮಾಡಲು ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯರೊಬ್ಬರು  ಅಕ್ರೋಶ ವ್ಯಕ್ತಪಡಿಸಿದ್ದಾರೆ, ಕರ್ನಾಟಕ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ನಮಗೆ ವಿಧಾನ ಸೌಧದಲ್ಲಿ ನಮ್ಮ ವಾಹನ ನಿಲ್ಲಿಸಲು ಸರಿಯಾದ ಪಾರ್ಕಿಂಗ್​ ವ್ಯವಸ್ಥೆ ಇಲ್ಲ ಎಂದು ಸದಸ್ಯರೊಬ್ಬರು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ. ಹೆದ್ದಾರಿಗಳಲ್ಲಿನ ಟೋಲ್ ಗೇಟ್‌ಗಳಲ್ಲಿ ತೊಂದರೆಯಾಗುತ್ತಿದೆ ಎಂಬ ವಿಷಯದ ಬಗ್ಗೆ ಪ್ರಸ್ತಾಪಿಸಿದಾಗ, ಈ ವಿಚಾರ ಬಂದಿದೆ. ಎಂಎಲ್‌ಸಿಗಳಿಗೆ ವಿಧಾನಸೌಧದಲ್ಲಿ ವಾಹನ ನಿಲುಗಡೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.

ವಿಧಾನಸೌಧಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಚುನಾಯಿತ ಪ್ರತಿನಿಧಿಗಳ ವಾಹನ ನಿಲುಗಡೆಗೆ ಜಾಗವಿಲ್ಲ ಎಂದು ವಿಧಾನಪರಿಷತ್​ ಶೂನ್ಯ ವೇಳೆಯಲ್ಲಿ ಎಮ್​ಎಲ್​​ಸಿ ಡಿ.ಎಸ್.ಅರುಣ್ ಆಕ್ರೋಶ ವ್ಯಕ್ತಪಡಿಸಿದರು. ಸಿಕ್ಕ ಸಿಕ್ಕವರಿಗೆಲ್ಲ ಪಾಸ್​ ನೀಡುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳಿಗೆ ಪಾಸ್ ಇಲ್ಲ, ಇನ್ನೂ ಕೆಲವರು ನಕಲಿ ಪಾಸ್​ ಮೂಲಕ ಎಂಟ್ರಿ ಪಡೆಯುತ್ತಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಪರಿಕಲ್ಪನೆ ಇಲ್ಲ, ತಕ್ಷಣ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಅರುಣ್ ಒತ್ತಾಯಿಸಿದರು.

ಎಂಎಲ್ಸಿಗಳಾದ ಟಿ.ಎ.ಶರವಣ, ಶಶಿಲ್ ನಮೋಶಿ, ವೈ.ಎ.ನಾರಾಯಣಸ್ವಾಮಿ ಮತ್ತಿತರರು ಈ ವಿಚಾರವಾಗಿ ದನಿಗೂಡಿಸಿದರು, ವಿಧಾನಸೌಧಕ್ಕೆ ಬರುವ ಮುನ್ನವೇ ವಾಹನಗಳನ್ನು ಬೇರೆಡೆ ನಿಲ್ಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ವಾಹನದ ಪಾಸ್‌ಗಳ ದುರ್ಬಳಕೆಯೂ ಅವ್ಯವಸ್ಥೆಗೆ ಮತ್ತೊಂದು ಕಾರಣವಾಗಿದೆ ಎಂದು ಅವರು ಹೇಳಿದರು

ಇದನ್ನೂ ಓದಿ: ಬಜೆಟ್​​ ಮಂಡನೆ ವೇಳೆ ಭದ್ರತಾ ಲೋಪ: ಬಿಗಿ ಬಂದೋಬಸ್ತ್​ ಮಧ್ಯೆಯೂ ವಿಧಾನಸೌಧ ಹೊಕ್ಕ ವ್ಯಕ್ತಿ ಯಾರು?

ಮಧ್ಯವರ್ತಿಗಳಿಂದ ಪಾಸ್‌ಗಳು ದುರ್ಬಳಕೆಯಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಒಪ್ಪಿಕೊಂಡಿದ್ದಾರೆ. ಮಧ್ಯವರ್ತಿಗಳು ವಿಧಾನಸೌಧ ಪ್ರವೇಶಿಸಲು ಶಾಸಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಪಾಸ್ ಪಡೆಯುತ್ತಿದ್ದು, ಶೀಘ್ರವೇ ಇದಕ್ಕೆ ಕಡಿವಾಣ ಹಾಕುತ್ತೇವೆ ಎಂದು ಪಾಟೀಲ್ ವಿಧಾನಪರಿಷತ್​ನಲ್ಲಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಂಎಲ್‌ಸಿ ಪಿ ಮುನಿರಾಜುಗೌಡ, ‘ಮಧ್ಯವರ್ತಿ’ ಎಂದರೆ ಏನು ಎಂದು ಸ್ಪಷ್ಟಪಡಿಸುವಂತೆ ಸಚಿವರನ್ನು ಕೇಳಿದರು. ‘ವಿಧಾನಸೌಧ ಪ್ರವೇಶಿಸುತ್ತಿರುವ ಈ ಮಧ್ಯವರ್ತಿಗಳು ವರ್ಗಾವಣೆಯಲ್ಲಿ ಶಾಮೀಲಾಗಿದ್ದಾರೆಯೇ ಎಂಬುದನ್ನು ಸಚಿವರು ಸ್ಪಷ್ಟಪಡಿಸಲಿ’ ಎಂದರು. ಇದಕ್ಕೆ ಪ್ರಕ್ರಿಯಿಸಿದ ಸಚಿವರು, ವಿಧಾನಸೌಧಕ್ಕೆ ಎಲ್ಲ ರೀತಿಯ ಮಧ್ಯವರ್ತಿಗಳು, ಅಧಿಕಾರ ದಲ್ಲಾಳಿಗಳು ಬರುವುದು ಗೊತ್ತಿರುವ ಸಂಗತಿ. ಇದಕ್ಕೆ ಕಡಿವಾಣ ಹಾಕಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು ಎಂದು ಡೆಕನ್ ಹೆರಾಲ್ಡ್ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Tue, 11 July 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ