ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪೋಕ್ಸೊ ಪ್ರಕರಣಗಳ ಸಂಖ್ಯೆ ಏರಿಕೆ

ಸಿಲಿಕಾನ್ ಸಿಟಿ ಬೆಂಗಳೂರು ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿಲ್ಲವಾ? ಇತದ್ದೊಂದು ಪ್ರಶ್ನೆ ಶುರುವಾಗೊದಕ್ಕೆ ಕಾರಣ ಅಂದ್ರೆ ಅದು ಪೋಕ್ಸೊ ಕೇಸ್ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿರುವುದು. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪೋಕ್ಸೊ ಪ್ರಕರಣಗಳ ಸಂಖ್ಯೆ ಏರಿಕೆ
ಪ್ರಾತಿನಿಧಿಕ ಚಿತ್ರImage Credit source: lawinsider.in
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 30, 2023 | 10:59 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿಲ್ಲವಾ? ಇತದ್ದೊಂದು ಪ್ರಶ್ನೆ ಶುರುವಾಗೊದಕ್ಕೆ ಕಾರಣ ಅಂದ್ರೆ ಅದು ಪೋಕ್ಸೊ ಕೇಸ್ (POCSO cases) ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿರುವುದು. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ನಿರಂತರವಾಗಿ ಪೋಕ್ಸೊ ಕೇಸ್ ಏರಿಕೆಯಾಗುತ್ತಿದೆ. ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಪೋಕ್ಸೋ ಕೇಸ್ಗಳ ವರದಿಯೇ ಶಾಕಿಂಗ್ ಆಗಿದ್ದು, ವೈದ್ಯರು ಕೂಡ ಈ  ಬಗ್ಗೆ ಆತಂಕ ಹೊರ ಹಾಕುತ್ತಿದ್ದಾರೆ. ರಾಜ್ಯದಲ್ಲಿ 2018 ರಲ್ಲಿ 2,063 ಪೋಕ್ಸೊ ಪ್ರಕರಣಗಳು, 2020ರಲ್ಲಿ 2,166, 2021ರಲ್ಲಿ 2863, 2022ರ ವೇಳೆಗೆ 3,097 ಕ್ಕೆ ಏರಿಕೆಯಾಗಿದೆ. 2023 ಜನವರಿ ತಿಂಗಳೊಂದರಲ್ಲಿಯೇ 207 ಪ್ರಕರಣಗಳು ದಾಖಲಾಗಿದ್ರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 200ಕ್ಕೂ ಹೆಚ್ಚು ಪೋಕ್ಸೊಕೇಸ್ ದಾಖಲಾಗಿವೆ.

ಈ ಕುರಿತಾಗಿ ಕೆಸಿ ಜನರಲ್ ಆಸ್ಪತ್ರೆ ವೈದ್ಯರಾದ ಡಾ. ಇಂದಿರಾ ಪ್ರತಿಕ್ರಿಯೆ ನೀಡಿದ್ದು, ಕೆಸಿ ಜನರಲ್ ಆಸ್ಪತ್ರೆಯೊಂದರಲ್ಲಿಯೇ ಕಳೆದ ವರ್ಷ 35 ಕೇಸ್ ದಾಖಲಾಗಿದರೆ, ಈ ವರ್ಷ ಮೂರೇ ತಿಂಗಳಲ್ಲಿ ಅಂದರೆ ಡಿಸೆಂಬರ್​ನಿಂದ ಮಾರ್ಚ್​​ವರೆಗೂ ಈಗಾಗಲೇ ಕೇಸ್​ಗಳು 35ರ ಗಡಿ ದಾಟಿವೆ ಎಂದರು. ದಿನದಿಂದ ದಿನಕ್ಕೆ ಪೋಕ್ಸೊ ಕೇಸ್ ದಾಖಲಾತಿ ಹಾಗೂ ಮಕ್ಕಳ ಕೇಸ್ ಹಿಸ್ಟರಿಗಳ ಬಗ್ಗೆ ಕೆಸಿ ಜನರಲ್ ವೈದ್ಯರು ಶಾಕಿಂಗ್ ಮಾಹಿತಿ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Ram Navami Violence: ಪ್ರೆಸಿಡೆನ್ಸಿ ವಿವಿಯಲ್ಲಿ ಪಾನಕ, ಕೋಸಂಬರಿ ಹಂಚಲು ವಿರೋಧ; ಹಿಂದೂಪರ‌ ಸಂಘಟನೆಯಿಂದ ವಿವಿ ಮುಂದೆ ಪ್ರತಿಭಟನೆ

ಪೋಕ್ಸೋ ಅಪರಾಧಿಗಳಿಗೆ ಏನೇನು ಶಿಕ್ಷೆ?

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯಿದೆ-2012 ಹಾಗೂ ತಿದ್ದುಪಡಿ ಕಾಯಿದೆ 2016 ರನ್ವಯ 14 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ ಹಾಗೂ ದೌರ್ಜನ್ಯಕ್ಕೆ ಕನಿಷ್ಠ 20 ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಅಥವಾ ಮರಣದಂಡನೆ ಮತ್ತು ದಂಡ ವಿಧಿಸಬಹುದಾಗಿದೆ. 16 ವರ್ಷದೊಳಗಿನ ಮಕ್ಕಳ ಮೇಲಿನ ಹಲ್ಲೆ, ದೌರ್ಜನ್ಯಕ್ಕೆ ಕನಿಷ್ಠ 20 ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಅಥವಾ ಮರಣ ದಂಡನೆ ಮತ್ತು ದಂಡ ವಿಧಿಸಬಹುದಾಗಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿನ ಮಕ್ಕಳ ಮೇಲಿನ ಪೋಕ್ಸ್ ಕೇಸ್ ಏರಿಕೆ ಆತಂಕಕ್ಕೆ ಕಾರಣವಾಗಿದ್ದು ಸರ್ಕಾರ ಸೂಕ್ತ ಎಚ್ಚರಿಕೆ ವಹಿಸಬೇಕಿದೆ.

ವರದಿ: ವಿನಯಕುಮಾರ್ ಕಾಶಪ್ಪನವರ್, ಟಿವಿ9, ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:59 pm, Thu, 30 March 23

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ