ಕಣ್ಣೆದುರೇ ಅಪಘಾತವಾದರೂ ಹೊಯ್ಸಳ ನಿಲ್ಲಿಸಿದೆ ಹೋದ ಪೊಲೀಸ್ರು, ಒದ್ದಾಡಿ ಪ್ರಾಣ ಬಿಟ್ಟ ಆಟೋ ಚಾಲಕ

ಬೆಂಗಳೂರಿನ ಕುರುಬರಹಳ್ಳಿ(Kurubarahalli)ಯಲ್ಲಿ ನಿನ್ನೆ(ಜು.5) ರಾತ್ರಿ ಆಟೋವೊಂದು ನಿಯಂತ್ರಣ ತಪ್ಪಿ ನಿಂತಿದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿತ್ತು.ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಕುರಿತು ಇದೀಗ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಪೊಲೀಸರ ನಿರ್ಲಕ್ಷ್ಯ ಕಾಣುತ್ತಿದೆ.

ಕಣ್ಣೆದುರೇ ಅಪಘಾತವಾದರೂ ಹೊಯ್ಸಳ ನಿಲ್ಲಿಸಿದೆ ಹೋದ ಪೊಲೀಸ್ರು, ಒದ್ದಾಡಿ ಪ್ರಾಣ ಬಿಟ್ಟ ಆಟೋ ಚಾಲಕ
ಆಟೋ ಅಪಘಾತ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 07, 2023 | 8:39 AM

ಬೆಂಗಳೂರು: ಮಹಾನಗರದ ಕುರುಬರಹಳ್ಳಿ(Kurubarahalli)ಯಲ್ಲಿ ನಿನ್ನೆ(ಜು.5) ರಾತ್ರಿ ಆಟೋವೊಂದು ನಿಯಂತ್ರಣ ತಪ್ಪಿ ನಿಂತಿದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಟೋ ಗುದ್ದಿದ್ದ ರಭಸಕ್ಕೆ ಆಟೋ ಚಾಲಕ ರಂಗನಾಥ(40) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಕುರಿತು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಪೊಲೀಸ್​ ವಾಹನದ ಮುಂದೆಯೇ ಆ್ಯಕ್ಸಿಡೆಂಟ್​ ಆದರೂ ಪೊಲೀಸರು ನಿಲ್ಲಿಸದೆ ನೋಡಿಕೊಂಡು ಹೋಗಿದ್ದು ಬೆಳಕಿಗೆ ಬಂದಿದೆ.

ಮಾನವೀಯತೆ ಮರೆತರಾ ಸಿಲಿಕಾನ್ ಸಿಟಿ ಪೋಲಿಸರು

ಇನ್ನು ಅಪಘಾತವಾಗಿ ಸಹಾಯ ಸಿಗದೆ ಆಟೋ ಚಾಲಕ ರಂಗನಾಥ್ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಕಣ್ಣೆದುರೇ ಅಪಘಾತವಾದರೂ ಗಾಡಿ ನಿಲ್ಲಿಸದ ಪೊಲೀಸರು, ಕಂಡು ಕಾಣದಂತೆ ಹೊರಟರಾ ಎಂಬ ಪ್ರಶ್ನೆ ಮೂಡಿದೆ. ಇದೀಗ ಮಹಾಲಕ್ಷ್ಮಿ ಲೇಔಟ್ ಹೊಯ್ಸಳ ಬೀಟ್ ಪೊಲೀಸರ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ:Bengaluru-Mysuru Expressway: ಉದ್ಘಾಟನೆಯಾದಗಿನಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತಗಳೆಷ್ಟು? ಇಲ್ಲಿದೆ ಅಂಕಿ-ಅಂಶ

ರಾತ್ರಿ 10.30 ಆದರೂ ಹೋಟೆಲ್​ ಮುಚ್ಚಿಲ್ಲವೆಂದು ಕ್ಯಾಷಿಯರ್ ಮೇಲೇ ಪೊಲೀಸರ ಹಲ್ಲೆ ಆರೋಪ

ಮೈಸೂರು: ರಾತ್ರಿ 10.30 ಆದರೂ ಹೋಟೆಲ್​ ಮುಚ್ಚಿಲ್ಲ ಎಂದು ಕ್ಯಾಷಿಯರ್​​ ಮೇಲೆ ಪೊಲೀಸರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಮೈಸೂರಿನ ಬನ್ನಿಮಂಟಪದಲ್ಲಿರುವ ಹೋಟೆಲ್​​ ಮುಂದೆ ಈ ಘಟನೆ ನಡೆದಿದೆ. ಬಳಿಕ ಠಾಣೆಗೆ ಕರೆದೊಯ್ದು ಅಲ್ಲಿಯೂ ಹಲ್ಲೆ ನಡೆಸಿದ್ದಾರೆಂದು ಮಂಡಿ ಠಾಣೆ ಪೊಲೀಸರ ವಿರುದ್ಧ ಹೋಟೆಲ್ ಕ್ಯಾಷಿಯರ್ ಆರೋಪ ಮಾಡಿದ್ದಾರೆ. ಕ್ಯಾಷಿಯರ್​​ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್