ಬೆಂಗಳೂರು, ಅ.08: ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು
ರಾಜ್ಯ ಸರ್ಕಾರ ರಚನೆ ಮಾಡಿದೆ. ಮಹಿಳಾ ಅಧಿಕಾರಿ, ಶಿಕ್ಷಕಿಯರು, ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಚನೆ ಮಾಡಿದ್ದಾರೆ.
ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ ಈ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಲಾಗಿದೆ. ಅವರು ಕೆಲಸ ಮಾಡುವ ಸ್ಥಳಗಳಲ್ಲಿ ಯಾವುದೇ ರೀತಿಯ ಅಭದ್ರತೆ ಅನಿಸಿದರೆ, ಕೂಡಲೇ ಈ ಸಮಿತಿಗೆ ದೂರು ನೀಡಬಹುದು. ಇನ್ನು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ, ಶಿಕ್ಷಕಿಯರ ದೂರನ್ನು ಈ ಸಮಿತಿ ಪರಿಶೀಲನೆ ನಡೆಸಲಿದೆ.
ಇದನ್ನೂ ಓದಿ:ಸ್ಯಾಂಡಲ್ವುಡ್ನಲ್ಲಿ ದೌರ್ಜನ್ಯ ತಡೆಗೆ ಸಮಿತಿ, ಫಿಲಂ ಚೇಂಬರ್ನಲ್ಲಿ ಚರ್ಚಿಸಲು ನಿರ್ಧಾರ
ಇನ್ನು ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಹಾಗೂ ಇತರೆ ದೌರ್ಜನ್ಯಗಳನ್ನು ಗುರುತಿಸಿ ಅವುಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ನಟ ಚೇತನ್ ಅಹಿಂಸಾ ಹಾಗೂ ಇತರೆ ಕೆಲವು ನಟ-ನಟಿಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ಆಡಿದ್ದು, ಸಮಿತಿಯೊಂದರ ರಚನೆಗೆ ಒತ್ತಾಯಿಸಿದ್ದರು. ಇದೀಗ ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:58 pm, Tue, 8 October 24